ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

ಬಂಟ್ವಾಳ, ಮಾ. 16: ಸಚಿವದ್ವಯರನ್ನು ಭಯೋತ್ಪಾದಕರು ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಬಂಟ್ವಾಳ ಘಟಕದ ನಿಯೋಗವು ಗುರುವಾರ ಬಂಟ್ವಾಳ ಉಪವಿಭಾಗ ಪೊಲೀಸ್ ಉಪಅಧೀಕ್ಷಕರಿಗೆ ದೂರು ಸಲ್ಲಿಸಲಾಯಿತು.
ಅರಣ್ಯ ಸಚಿವ ಬಿ.ರಮಾನಾಥ ರೈ ಹಾಗೂ ಆಹಾರ ಸಚಿವ ಯು.ಟಿ.ಖಾದರ್ ಅವರನ್ನು ಉಗ್ರಗಾಮಿ, ಭಯೋತ್ಪಾದಕರು ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಿಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಮಿಟಿ ಪ್ರಧಾನ ಕಾರ್ಯದರ್ಶಿ, ವಕೀಲ ಎಂ.ಚಂದ್ರಶೇಖರ ಪೂಜಾರಿ, ವಕೀಲರಾದ ಉಮಾಕರ್, ಇಲಿಯಾಸ್ ಹಾಜರಿದ್ದರು.
Next Story





