Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುಸ್ತಕ ಅಧ್ಯಯನ ಮಾಡಿ ಉತ್ತಮ ಜೀವನ...

ಪುಸ್ತಕ ಅಧ್ಯಯನ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಿ: ಸಾಹಿತಿ ನಾಗೇಶ್ ಕಾಲೂರು

ವಾರ್ತಾಭಾರತಿವಾರ್ತಾಭಾರತಿ16 March 2018 11:25 PM IST
share
ಪುಸ್ತಕ ಅಧ್ಯಯನ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಿ: ಸಾಹಿತಿ ನಾಗೇಶ್ ಕಾಲೂರು

ಮಡಿಕೇರಿ, ಮಾ.16: ಮೊಬೈಲ್ ಬಿಟ್ಟು, ಪುಸ್ತಕ ಓದಿದರೆ ಜೀವನ ಪೂರ್ತಿ ಉತ್ತಮ ಬದುಕು ರೂಪಿಸಿಕೊಳ್ಳಬಹುದು ಎಂದು ಸಾಹಿತಿ ನಾಗೇಶ್ ಕಾಲೂರು ಅವರು ಹೇಳಿದರು.   

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಪುಸ್ತಕದ ಪಾಠ ಒಂದು ಹಂತದವರೆಗೆ, ಆದರೆ ನಮಗೆ ಬೇಕಿರುವುದು ಬದುಕಿನ ಪಾಠ. ವಿದ್ಯಾಬ್ಯಾಸ ಎಲ್ಲಾ ಸಂದರ್ಭಲ್ಲೂ ಬರುವುದಿಲ್ಲ. ಬದುಕಿನ ಶಿಕ್ಷಣ ಕಲಿತಾಗ ಮಾತ್ರ ಬದುಕಿಗೆ ಮೌಲ್ಯ ದೊರೆಯುತ್ತದೆ ಎಂದು ಸಾಹಿತಿಗಳಾದ ನಾಗೇಶ್ ಕಾಲೂರು ಹೇಳಿದರು.  

ಮನುಷ್ಯತ್ವ ಇಲ್ಲದ ಶಿಕ್ಷಣಕ್ಕೆ ಕಿಂಚಿತ್ತು ಬೆಲೆಯಿಲ್ಲ, ಅಹಂಕಾರದಿಂದ ಮೆರೆಯದೆ ವಿದ್ಯಾರ್ಥಿಗಳು ಮಾನವೀಯ ಮೌಲ್ಯವಿರುವ  ಶಿಕ್ಷಣ ಕಲಿಯಬೇಕು ಹಾಗೂ ಎಲ್ಲರನ್ನೂ ಸಮಾನವಾಗಿ ನೋಡಬೇಕು. ಮೇಲು ಕೀಳು ತಾರತಮ್ಯ ಇರಬಾರದು. ಸಣ್ಣ ಸಣ್ಣ ಕಾಳಿನಿಂದ ದೊಡ್ಡ ರಾಶಿಯಾಗುತ್ತೆ ಸರ್ವರಲ್ಲೂ ಕಲಿಯುವುದು ಬಹಳಷ್ಠಿದೆ. ಅಂಗಾಂಗ ಇಲ್ಲದವರು ಸಾಧನೆ ಮಾಡುತ್ತಿದ್ದಾರೆ. ನಮಗೆ ಎಲ್ಲ ಅಂಗಗಳು ಚೆನ್ನಾಗಿದ್ದು ನಾವೇಕೆ ಸಾಧನೆ ಮಾಡಬಾರದು ಎನ್ನುವ ಭಾವನೆ ವಿದ್ಯಾರ್ಥಿಗಳಲ್ಲಿ ಮೂಡಬೇಕು. ಅವಕಾಶ ಯಾರನ್ನು ಹುಡುಕಿಕೊಂಡು ಬರುವುದಿಲ್ಲ. ಅವಕಾಶವನ್ನು ನಾವೇ ಹುಡುಕಬೇಕು ಎಂದು ಸಾಹಿತಿಗಳಾದ ನಾಗೇಶ್ ಕಾಲೂರು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಜೆನ್ನಿಫರ್ ಲೋಲಿಟ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಇರುವ ಸಮಯವನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ತಲುಪಿ ಎಂದು ಅವರು ತಿಳಿಸಿದರು. 

ಕೈಗಾರಿಕೋದ್ಯಮಿಯಾದ ಸುಕೀಶ್ ಚಂದ್ರಪ್ಪ ಮಾತನಾಡಿ ಮೌಲ್ಯಯುತ ಶಿಕ್ಷಣಕ್ಕೆ ಪೋಷಕರ ಪಾತ್ರ ಬಹಳ ಮುಖ್ಯ. ಸಾಧನೆ ಮಾಡಿದ ಮಾಹನೀಯರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಡತನದಿಂದ ಕಷ್ಟಪಟ್ಟು ಓದಿದವರು. ಇಂದು ಅವರು ಜಗತ್ತಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಫೇಸ್‍ಪುಕ್, ವ್ಯಾಟ್ಸಪ್ ಇವುಗಳನ್ನು ಬಿಟ್ಟು ಶಿಕ್ಷಣದ ಕಡೆ ಹೆಚ್ಚು ಒತ್ತು ಕೊಡಿ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕರಾದ ಸತೀಶ್ ಎನ್.ಪಿ, ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾದ ನಮೀತಾ, ಅರ್ಥಶಾಸ್ತ್ರ ವಿಭಾಗದ ಮಹೇಶ್, ಪ್ರಾದ್ಯಾಪಕರಾದ ದಾಮೊದರ್, ಅರಿಣಿ, ಸರಸ್ವತಿ, ವಿದ್ಯಾರ್ಥಿ ಸಮಿತಿಯ ಪದಾಧಿಕಾರಿಗಳಾದ ಕಾವ್ಯಶ್ರೀ ಟಿ.ಎಲ್, ಹರ್ಷಿತಾ ಬಿ.ಆರ್, ಕುಸುಮಿತ ಕೆ.ಕೆ, ರಾಧಿಕಾ ಬಿ.ಪಿ ತಶ್ಮಿತ ಬಿ.ಆರ್, ಅರ್ಪಿತಾ ರೈ ಬಿ.ಎಸ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X