ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ದೀಪಕ್ ಪೂಜಾರಿ ಅಧಿಕಾರ ಸ್ವೀಕಾರ

ಮಂಗಳೂರು, ಮಾ.19: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಧ್ಯಕ್ಷ ಕೇಶವ ಸನಿಲ್ ಇತ್ತೀಚಿಗೆ ಅಪಘಾತವೊಂದರಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಂಗಾಮಿ ಅಧ್ಯಕ್ಷರಾಗಿ ದೀಪಕ್ ಪೂಜಾರಿ ಅಧಿಕಾರ ಸ್ವೀಕರಿಸಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷವನ್ನು ಮುನ್ನಡೆಸಲು ಕಾರ್ಪೊರೇಟರ್ ದೀಪಕ್ ಪೂಜಾರಿಗೆ ಶಾಸಕ ಮೊಯ್ದಿನ್ ಬಾವಾ ಚುಕ್ಕಾಣಿ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಶಾಸಕ ಮೊಯ್ದಿನ್ ಬಾವಾ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಲು ಎಲ್ಲ ಪದಾಧಿಕಾರಿಗಳನ್ನು ಒಗ್ಗೂಡಿಸಿ ಕಾರ್ಯ ನಿರ್ವಹಿಸಲಿದ್ದೇನೆ ಎಂದು ಹೇಳಿದರು.
ಈ ಸಂದರ್ಭ ಶಾಸಕ ಮೊಯ್ದಿನ್ ಬಾವಾ, ಮೇಯರ್ ಭಾಸ್ಕರ್ ಕೆ., ಸುರೇಂದ್ರ ಕಾಂಬ್ಳಿ, ಕುಮಾರ್ ಮೆಂಡನ್, ಸುಹೈಲ್ ಕಂದಕ್, ಕೆ.ಸದಾಶಿವ ಶೆಟ್ಟಿ, ಹಿಲ್ಡಾ ಆಳ್ವ, ಶಕುಂತಳಾ ಕಾಮತ್, ಬಶೀರ್ ಅಹ್ಮದ್, ಗಿರೀಶ್ ಆಳ್ವ, ಮಂಗಳೂರು ಬಾವಾ,ಹೇಮಂತ್ ಮತ್ತಿತರರು ಉಪಸ್ಥಿತರಿದ್ದರು.
Next Story





