ಬೆಳ್ತಂಗಡಿ : ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ,ಮಾ.19: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಆಲಡ್ಕ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೊಸ್ಮಾರಿನ ಈದು ಕ್ರಾಸ್ ನಿವಾಸಿ ಸುಧಾಕರ ಹೆಗ್ಡೆ ಯವರ ಪುತ್ರ ಸುಚಿನ್ (18) ಎಂಬವರು ಮೃತಪಟ್ಟಿದ್ದಾರೆ.
ಸುಚಿನ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿತ್ತು, ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರುತ್ತಿದ್ದ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟರು.
ಮೃತದೇಹ ಬೆಳ್ತಂಗಡಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.
Next Story





