Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಾತುರ್ವರ್ಣ ಪದ್ಧತಿಯ ವಿರುದ್ಧ...

ಚಾತುರ್ವರ್ಣ ಪದ್ಧತಿಯ ವಿರುದ್ಧ ಸ್ಥಾಪನೆಯಾದದ್ದು ಲಿಂಗಾಯತ ಧರ್ಮ: ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ19 March 2018 7:57 PM IST
share
ಚಾತುರ್ವರ್ಣ ಪದ್ಧತಿಯ ವಿರುದ್ಧ ಸ್ಥಾಪನೆಯಾದದ್ದು ಲಿಂಗಾಯತ ಧರ್ಮ: ಎಂ.ಬಿ.ಪಾಟೀಲ್

ಬೆಂಗಳೂರು, ಮಾ.19: ಅನುಭವ ಮಂಟಪದ ಪರಿಕಲ್ಪನೆಯಲ್ಲಿ ಚಾತುರ್ವರ್ಣ ಪದ್ಧತಿಯ ವಿರುದ್ಧ, 18ನೆ ಶತಮಾನದಲ್ಲಿ ಬಸವಣ್ಣ ಹಾಗೂ ಬಸವಾದಿ ಶರಣರು ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಸ್ಥಾಪಿಸಿದ ಶ್ರೇಷ್ಠ ಧರ್ಮವೇ ಲಿಂಗಾಯತ ಧರ್ಮ ಎಂದು ಜಲಸಂಪನ್ಮೂಲ ಸಚಿವ ಡಾ.ಎಂ.ಬಿ.ಪಾಟೀಲ್ ಹೇಳಿದರು.

ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಕಲ್ಪಿಸಲು, ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆಗೊಳಿಸಲು, ಆರಂಭವಾದ ಕನ್ನಡದ ಧರ್ಮ ಇದಾಗಿದೆ ಎಂದರು.

ಆಡು ಭಾಷೆಯಲ್ಲಿ ವಚನಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಬಸವಾದಿ ಶರಣರು ಮಾಡಿದ್ದಾರೆ. ಕಲ್ಯಾಣ ಕ್ರಾಂತಿಯಲ್ಲಿ ಅದಕ್ಕೆ ಹಿನ್ನಡೆ ಆಯಿತು. 1881ರವರೆಗೆ ನಾವು ಸ್ವತಂತ್ರ ಧರ್ಮದ ಸ್ಥಾನಮಾನವನ್ನು ಹೊಂದಿದ್ದೆವು. ಇದೀಗ ಮತ್ತೆ ನಮ್ಮ ಮೂಲವನ್ನು ವಾಪಸ್ ಪಡೆದು, ಬಸವಣ್ಣ ಸ್ಥಾಪಿಸಿದ ಧರ್ಮವನ್ನು ಮತ್ತೆ ಸ್ಥಾಪಿಸಬೇಕಿದೆ. ಲಿಂಗಾಯತ ಧರ್ಮ ಜಾಗತಿಕ ಧರ್ಮ, ಸಂಸ್ಕೃತಿಯಾಗಬೇಕು ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯ ಸರಕಾರಕ್ಕೆ ಬಂದ ಅಹವಾಲುಗಳನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ಕಳುಹಿಸಲಾಗಿತ್ತು. ನ್ಯಾ.ನಾಗಮೋಹನ್‌ದಾಸ್ ನೇತೃತ್ವದ ತಜ್ಞರ ಸಮಿತಿ ನೀಡಿದ ವರದಿಯನ್ನು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸೆಕ್ಷನ್ 2 ಡಿ ಅಡಿಯಲ್ಲಿ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಿ, ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇಡೀ ರಾಜ್ಯದ ಬಸವ ಅಭಿಮಾನಿಗಳು, ಮಠಾಧೀಶರು, ರಾಷ್ಟ್ರೀಯ ಬಸವ ಸೇನೆ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಎಲ್ಲ ಸಂಘ, ಸಂಸ್ಥೆಗಳು ಹಾಗೂ ಈ ಹೋರಾಟದಲ್ಲಿ ಪಾಲ್ಗೊಂಡಿದ್ದ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ಲಿಂಗಾಯತ ಧರ್ಮ ಜಾಗತಿಕ ಧರ್ಮವಾಗಬೇಕು, ಬೌದ್ಧ ಧರ್ಮದ ರೀತಿಯಲ್ಲಿ ಲಿಂಗಾಯತ ಧರ್ಮ ಬೆಳೆಯಬೇಕು, ಮಾನವೀಯ ,ಮೌಲ್ಯಗಳನ್ನು ಎತ್ತಿ ಹಿಡಿಯುವ ಧರ್ಮ ಇದಾಗಿರುವುದರಿಂದ, ಇನ್ನು ಮುಂದೆ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಬಸವಣ್ಣನವರ ಆಚರಣೆಗಳು, ತತ್ವಗಳು, ವಚನಗಳು, ಸಿದ್ಧಾಂತಗಳು, ಜಾತ್ಯತೀತ, ವರ್ಗ ರಹಿತ, ಜಾತಿ ರಹಿತ ಸಮಾಜ ನಿರ್ಮಾಣವಾಗಬೇಕು, ಬಸವ ಸಂಸ್ಕೃತಿ ಜಾಗತಿಕ ಸಂಸ್ಕೃತಿಯಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ನಮ್ಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು, ಎಲ್ಲರೂ ಒಂದಾಗಿ ಈ ಶ್ರೇಷ್ಠ ಧರ್ಮವನ್ನು ಜಾಗತಿಕ ಧರ್ಮವನ್ನಾಗಿ ಮಾಡೋಣ ಎಂದು ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ರಾಜಕೀಯ ಉದ್ದೇಶಕ್ಕಾಗಿ ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡಲಾಗಿದೆ ಎಂಬ ಗೊಂದಲ ರಾಜ್ಯದ ಜನರಲ್ಲಿದೆ. ಆದರೆ, ಇದು ಯಾವುದೆ ರಾಜಕೀಯ ಉದ್ದೇಶಕ್ಕಾಗಿ ನಾವು ಈ ಹೋರಾಟ ಮಾಡಿಲ್ಲ ಎಂದು ಸ್ಪಷ್ಟಣೆ ನೀಡಿದರು.

12ನೆ ಶತಮಾನದಲ್ಲಿ ಬಸವಣ್ಣ ಹಾಗೂ ಬಸವಾದಿ ಶರಣರು ಮಾನವನ ಉದ್ಧಾರಕ್ಕೆ ಸ್ಥಾಪಿಸಿದ ಧರ್ಮ ಇದು. 1881ರವರೆಗೆ ಇದ್ದ ಸ್ವತಂತ್ರ ಧರ್ಮದ ಮಾನ್ಯತೆ ಆನಂತರ ಕೈ ತಪ್ಪಿತ್ತು. ಇದೀಗ ಮತ್ತೆ ಆ ಮಾನ್ಯತೆ ಪಡೆಯಲು ನಡೆದ ಹೋರಾಟ ಇದಾಗಿತ್ತು ಎಂದು ಅವರು ಹೇಳಿದರು.

ಬಸವಣ್ಣನವರ ವಚನ ಸಾಹಿತ್ಯ, ಆಚರಣೆಗಳು ಮುಂದಿನ ಪೀಳಿಗೆಗೆ ಪರಿಚಯಿಸಿ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು, ಬಸವಾದಿ ಶರಣರ ವೈಚಾರಿಕ ಕ್ರಾಂತಿಯನ್ನು ಜನರಿಗೆ ಮುಟ್ಟಿಸಲು ನಡೆಯುತ್ತಿದ್ದ ಪ್ರಯತ್ನ ಇಂದು ಸಫಲವಾಗಿದೆ. ಇನ್ನು ನಾವು ಬಹುದೂರ ಸಾಗಬೇಕಿದೆ. ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿ, ಒತ್ತಡ ಹಾಕಬೇಕಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯಕುಲಕರ್ಣಿ ಮಾತನಾಡಿ, ನಮ್ಮೆಲ್ಲರಿಗೂ ಇದು ಅತೀ ಸಂತಸದ ಕ್ಷಣ. ಬಹುಕಾಲದ ನಮ್ಮ ಬೇಡಿಕೆ ಈಡೇರಿದೆ. ಆದರೆ, ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯವಾಗಿ ಅಪಪ್ರಚಾರ ಮಾಡುವ ಕೆಲಸ ನಡೆಯುತ್ತಿದೆ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ಡ ಬಸವ ಅಭಿಮಾನಿ, ಬಸವಣ್ಣನವರ ಹೆಸರ ಉಲ್ಲೇಖಿಸದೆ ಅವರು ಯಾವುದೆ ಭಾಷಣವನ್ನು ಪೂರ್ಣಗೊಳಿಸುವುದಿಲ್ಲ. ಯಾವ ಮುಖ್ಯಮಂತ್ರಿಯೂ ಮಾಡದ ಕೆಲಸವನ್ನು ಅವರು ಮಾಡಿದ್ದಾರೆ ಎಂದು ವಿನಯ್‌ಕುಲಕರ್ಣಿ ಹೇಳಿದರು.

ಈ ಹೋರಾಟದಲ್ಲಿ ಲಕ್ಷಾಂತರ ಜನ ನಮ್ಮ ಬೆನ್ನಿಗೆ ನಿಂತರು. ಇದು ಜಾತಿ, ವರ್ಗದ ತಾರತಮ್ಯವಿಲ್ಲದೆ ನಡೆದ ಹೋರಾಟ. ರಾಜ್ಯದ ಬಸವ ಅಭಿಮಾನಿಗಳಿಗೆ ಸಂದ ಜಯ, ಹಲವಾರು ಸ್ವಾಮೀಜಿಗಳು ಈ ಹೋರಾಟಕ್ಕೆ ನಮಗೆ ಮಾರ್ಗದರ್ಶನ ಮಾಡಿದರು. ಲಿಂಗಾಯತ ಸಮಾಜದಲ್ಲಿರುವ 99 ಒಳಪಂಗಡಗಳ ಪರವಾಗಿ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮ್ದಾರ್, ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಲಿಂಗಾಯತ ಹಾಗು ವೀರಶೈವ ಲಿಂಗಾಯತ ಧರ್ಮಕ್ಕೆ ರಾಜ್ಯದಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ನೀಡಿದ ನಂತರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಕೇಂದ್ರ ಸರಕಾರ ನಮ್ಮ ಶಿಫಾರಸು ಅಂಗೀಕಾರ ಮಾಡಲಿದೆ ಎನ್ನುವ ವಿಶ್ವಾಸವಿದೆ. ನಾವು ಮೀಸಲಾತಿ ವಿಚಾರ ನೋಡುತ್ತಿಲ್ಲ. ಬೇರೆಯವರ ಸವಲತ್ತು ಕಸಿದುಕೊಳ್ಳುವುದಿಲ್ಲ, ನಮ್ಮದು ಬಸವ ಧರ್ಮ ಸ್ಥಾಪನೆ ಆಗಬೇಕು ಎನ್ನುವುದು ನಿಲುವು. ಅದಕ್ಕೆ ಬದ್ಧರಿದ್ದೇವೆ, ಹಾಲಿ ಲಿಂಗಾಯತರು 3 ಬಿ ಯಲ್ಲಿದ್ದು ಅದೇ ಪ್ರಕಾರ ಮುಂದುವರೆಯಲಿದ್ದೇವೆ. ರಂಭಾಪುರಿ ಶ್ರೀಗಳು ನಮ್ಮ ಗುರುಗಳು, ಅವರು ಸಚಿವ ಸಂಪುಟದ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಅವರೂ ಕೂಡ ಬಸವಣ್ಣ, ಲಿಂಗಾಯತ ಒಪ್ಪಿಬರಲಿ.
-ಡಾ.ಎಂ.ಬಿ.ಪಾಟೀಲ್, ಜಲಸಂಪನ್ಮೂಲ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X