Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತ್ಯೇಕ ಧರ್ಮಗಳ ವಿಚಾರ ಸಿಎಂ ಹಿಡನ್...

ಪ್ರತ್ಯೇಕ ಧರ್ಮಗಳ ವಿಚಾರ ಸಿಎಂ ಹಿಡನ್ ಅಜೆಂಡಾ: ಕುಮಾರಸ್ವಾಮಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ19 March 2018 8:26 PM IST
share
ಪ್ರತ್ಯೇಕ ಧರ್ಮಗಳ ವಿಚಾರ ಸಿಎಂ ಹಿಡನ್ ಅಜೆಂಡಾ: ಕುಮಾರಸ್ವಾಮಿ ಟೀಕೆ

ಚಿಕ್ಕಮಗಳೂರು, ಮಾ.19: ಲಿಂಗಾಯತ ಮತ್ತು ವೀರಶೈವ ಪ್ರತ್ಯೇಕ ಧರ್ಮ ವಿಚಾರ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯದ ಹಿಡನ್ ಅಜೆಂಡವಾಗಿದ್ದು, ಅದು ಸಿಎಂ ಅವರ ವ್ಯರ್ಥ ಕಸರತ್ತಾಗಿದೆ. ಇದರ ಫಲವನ್ನು ಸಿದ್ದರಾಮಯ್ಯ ಅವರೇ ಅನುಭವಿಸುತ್ತಾರೆಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಅವರು ಮಂಗಳವಾರ ಜೆಡಿಎಸ್ ಪಕ್ಷದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿರುವ ವಿಕಾಸಪರ್ವ ಸಮಾವೇಶದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಹೆಲಿಕಾಪ್ಟರ್ ಮೂಲಕ ನಗರದ ಐಡಿಎಸ್‍ಜಿ ಕಾಲೇಜು ಮೈದಾನ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಗಳ  ವಿಚಾರವಾಗಿ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಬದಲಾಗಿ ಸಮಸ್ಯೆಗಳನ್ನೇ ಹುಟ್ಟು ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಬರಲಿರುವ ಚುನಾವಣೆಯಲ್ಲಿ ಸಾಧನೆ ಮಾಡುವ ಭ್ರಮೆಯಲ್ಲಿದ್ದು, ಇದು ಅವರ ವ್ಯರ್ಥ ಕಸರತ್ತಾಗಿದೆ ಎಂದ ಅವರು, ಹೋಳಾಗುತ್ತಿರುವ ಸಮಾಜವನ್ನು ಒಂದುಗೂಡಿಸುವ ಬದಲು ರಾಜ್ಯ ಸರಕಾರ ಮತ್ತಷ್ಟು ಒಡೆಯಲು ಹುನ್ನಾರ ನಡೆಸಿದೆ. ಪ್ರತ್ಯೇಕ ಧರ್ಮಗಳ ವಿಚಾರವನ್ನು ಧರ್ಮಾಧಿಕಾರಿಗಳಿಗೆ ಬಿಡಬೇಕಿತ್ತು. ಆದರೆ ಸರಕಾರ ತರಾತುರಿಯಲ್ಲಿ ಕಮಿಟಿ ನೇಮಕಮಾಡಿ, ವರದಿ ಸಿದ್ಧಪಡಿಸಿದೆ. ಈ ಬಗ್ಗೆ ಸಚಿವ ಸಂಪುಟದಲ್ಲೇನಾಗಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಜೆಡಿಎಸ್-ಬಿಎಸ್ಪಿ ಮೈತ್ರಿ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪ್ರದೇಶದ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳನ್ನು ಮತದಾರರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್‍ಗೆ ಠೇವಣಿಯೂ ಸಿಕ್ಕಿಲ್ಲ. ಬಿಎಸ್ಪಿ-ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಫಲ ನೀಡಲಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ದೊಡ್ಡ ಮಟ್ಟದ ಸಭೆ ಮಾಡಲು ಮಾಯಾವತಿ ಅವರೊಂದಿಗೆ ಮಾತುಕತೆಯಾಗಿದೆ. ಸಭೆಗೆ ಅಖಿಲೇಶ್‍ಯಾದವ್, ಶರದ್‍ಪವರ್ ರನ್ನು ಕರೆ ತರುವ ಚರ್ಚೆ ನಡೆಯುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಸಿಗಲಿದೆ ಎಂದರು.

ಬಳಿಕ ಅವರು ಚಿಕ್ಕಮಗಳೂರು ಸಮೀಪದ ಮತ್ತಾವರ ಗ್ರಾಮದಲ್ಲಿ ಆಯೋಜಿಸಲಾಗಿರುವ ರೈತ ಸಂವಾದ ಕಾರ್ಯಕ್ರಮದ ನಿಮಿತ್ತ ಕಾರಿನ ಮೂಲಕ ಮತ್ತಾವರಕ್ಕೆ ತೆರಳಿದರು. ಇದಕ್ಕೂ ಮುನ್ನ ಕುಮಾರಸ್ವಾಮಿ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರ ಜಯಘೋಷ ಮುಗಿಲುಮಟ್ಟಿತ್ತು. ಈ ವೇಳೆ ಜೆಡಿಎಸ್ ಮುಖಂಡರಾದ ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ, ಎಚ್.ಎಚ್.ದೇವರಾಜ್, ಎಸ್.ಎಲ್.ಭೋಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಸಿಎಂ ಹಾಗೂ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಂಜೇಗೌಡ ಅವರ ಫೋನ್ ಸಂಭಾಷಣೆ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅಧಿಕಾರ ಯಾರಿಗೂ ಶಾಶ್ವತವಲ್ಲ, ದೇವೇಗೌಡರ ಮಕ್ಕಳೂ ಶಾಶ್ವತಾಗಿ ಅಧಿಕಾರದಲ್ಲಿರಲು ಆಗಲ್ಲ. ಆ ಫೋನ್ ಸಂಭಾಷಣೆಯಿಂದ ಸಿಎಂ ಅವರ ಆಂತರ್ಯ ತಿಳಿಯುತ್ತದೆ. ಮಂಜೇಗೌಡ ಓರ್ವ ಭ್ರಷ್ಟ ಅಧಿಕಾರಿ. ಅಂತವರಿಗೆ ಸಿಎಂ ರಕ್ಷಣೆ ನೀಡುತ್ತಿದ್ದಾರೆಂಬುದು ಸಾಬೀತಾಗಿದೆ. ದೇವೇಗೌಡರ ಮಕ್ಕಳ ವಿರುದ್ಧ ಯಾರನ್ನಾದರೂ ಕಣಕ್ಕಿಳಿಸಲಿ. ಎದುರಿಸುವ ಸಾಮರ್ಥ್ಯ ನಮಗಿದೆ ಎಂದ ಅವರು, ದೇವೇಗೌಡರ ಮಕ್ಕಳನ್ನು ಸೋಲಿಸಬೇಕೆಂಬ ಪದ ಬಳಕೆಯ ಅರ್ಥ ಕಾಂಗ್ರೆಸ್‍ನ ಸರ್ವನಾಶ ಎಂಬುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X