ಮಾ.20: ಸುರತ್ಕಲ್‌ನಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ

ಮಂಗಳೂರು, ಮಾ.19: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾ.20ರಂದು ಸಂಜೆ 4 ಗಂಟೆಗೆ ಸುರತ್ಕಲ್ ಜಂಕ್ಷನ್‌ನಲ್ಲಿ ಪಕ್ಷದ ಕಾರ್ಯಕರ್ತರ ಹಾಗೂ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಬಿ.ಎ.ಮೊಯ್ದಿನ್ ಬಾವಾ ತಿಳಿಸಿದ್ದಾರೆ.
ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಜೆ 4ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಅದಕ್ಕೂ ಮುನ್ನ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 500 ಮಂದಿಗೆ ಸಾಲದ ಆದೇಶ ಪತ್ರ ಹಾಗೂ ಪಶುಭಾಗ್ಯ ಯೋಜನೆಯಡಿ 50 ಮಂದಿ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಗುವುದು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಪರಾಹ್ನ 2ರಿಂದ ಸಂಜೆ 5ರವರೆಗೆ ಸುರತ್ಕಲ್ ಜಂಕ್ಷನ್‌ನಲ್ಲಿ ಸಂಚಾರಕ್ಕೆ ತೊಂದರೆಯಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಸುರೇಂದ್ರ ಕಂಬಳಿ, ಗಿರೀಶ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
Next Story





