Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಈಶ್ವರಪ್ಪ, ಎಸ್.ರುದ್ರೇಗೌಡ...

ಶಿವಮೊಗ್ಗ: ಈಶ್ವರಪ್ಪ, ಎಸ್.ರುದ್ರೇಗೌಡ ಜೊತೆ ಚರ್ಚಿಸಿದ ಬಿಜೆಪಿ ನಾಯಕರು

ವಾರ್ತಾಭಾರತಿವಾರ್ತಾಭಾರತಿ19 March 2018 9:45 PM IST
share
ಶಿವಮೊಗ್ಗ: ಈಶ್ವರಪ್ಪ, ಎಸ್.ರುದ್ರೇಗೌಡ ಜೊತೆ ಚರ್ಚಿಸಿದ ಬಿಜೆಪಿ ನಾಯಕರು

ಶಿವಮೊಗ್ಗ, ಮಾ. 19: ಲೋಕಸಭಾ ಸದಸ್ಯ ಪ್ರಹ್ಲಾದ್ ಜೋಷಿ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರವರು ಸೋಮವಾರ ನಗರಕ್ಕೆ ದಿಢೀರ್ ಭೇಟಿಯಿತ್ತು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿರುವ ಕೆ.ಎಸ್.ಈಶ್ವರಪ್ಪ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. 

ಈ ವಿದ್ಯಮಾನ ಸ್ಥಳೀಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ. ಬಿಜೆಪಿ ಪಾಳೇಯದಲ್ಲಿ ನಾನಾ ರೀತಿಯ ಚರ್ಚೆಗೂ ಎಡೆ ಮಾಡಿಕೊಟ್ಟಿದೆ. ಸಮಾಲೋಚನೆಯ ವೇಳೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‍ಗೆ ಸಂಬಂಧಿಸಿದಂತೆ ಏನಾದರೂ ಚರ್ಚೆಗಳು ನಡೆದಿವೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. 

ನಗರಕ್ಕೆ ದಿಢೀರ್ ಭೇಟಿ ನೀಡಿ ಟಿಕೆಟ್ ಆಕಾಂಕ್ಷಿ ನಾಯಕರ ಜೊತೆ ನಡೆಸಿದ ರಹಸ್ಯ ಸಮಾಲೋಚನೆಯ ಬಗ್ಗೆ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಂಸದ ಪ್ರಹ್ಲಾದ್ ಜೋಷಿ, 'ಇದೊಂದು ಸೌಜನ್ಯದ ಭೇಟಿ. ಯಾವುದೇ ರಹಸ್ಯ ಸಭೆ ನಡೆದಿಲ್ಲ' ಎಂದಷ್ಟೆ ಪ್ರತಿಕ್ರಿಯೆ ನೀಡಿದ್ದಾರೆ. 

ಪ್ರತ್ಯೇಕ ಮಾತುಕತೆ: ಎಸ್.ರುದ್ರೇಗೌಡರನ್ನು ಅವರ ನಿವಾಸದಲ್ಲಿ ಹಾಗೂ ಕೆ.ಎಸ್.ಈಶ್ವರಪ್ಪರನ್ನು ಹೋಟೆಲ್‍ವೊಂದರಲ್ಲಿ ಭೇಟಿಯಾಗಿ ಪ್ರಹ್ಲಾದ್ ಜೋಷಿ ಹಾಗೂ ರವಿಕುಮಾರ್ ಚರ್ಚೆ ನಡೆಸಿದರು. ಈ ವೇಳೆ ಇಬ್ಬರು ನಾಯಕರ ಆಪ್ತರು ಉಪಸ್ಥಿತರಿದ್ದರು. ಪಕ್ಷದ ವರಿಷ್ಠರ ಸೂಚನೆಯಂತೆ ಈ ಮುಖಂಡರು ಶಿವಮೊಗ್ಗಕ್ಕೆ ಆಗಮಿಸಿ, ಈ ಇಬ್ಬರು ನಾಯಕರ ಜೊತೆ ಸಮಾಲೋಚಿಸಿ ಹಿಂದಿರುಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಆದರೆ ಇದನ್ನು ಬಿಜೆಪಿಯ ಕೆಲ ಮೂಲಗಳು ನಿರಾಕರಿಸಿವೆ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಈ ನಾಯಕರು ನಗರಕ್ಕೆ ಆಗಮಿಸಿದ್ದಾರೆ ಎಂದು ಹೇಳುತ್ತಿವೆ. 

ಆಕಾಂಕ್ಷಿಗಳು: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ಹಾಗೂ ಎಸ್.ರುದ್ರೇಗೌಡ ಪೈಪೋಟಿ ನಡೆಸುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಸ್.ರುದ್ರೇಗೌಡರ ಪರವಾಗಿ ಬ್ಯಾಟಿಂಗ್ ನಡೆಸುತ್ತಿರುವುದರಿಂದ, ಬಣ ರಾಜಕಾರಣಕ್ಕೂ ಆಸ್ಪದವಾಗುವಂತೆ ಮಾಡಿದೆ. ಟಿಕೆಟ್ ಫೈಟ್ ಬಿರುಸುಗೊಂಡಿದೆ. ಇದೆಲ್ಲದರ ನಡುವೆ ಪ್ರಹ್ಲಾದ್ ಜೋಷಿ ಹಾಗೂ ರವಿಕುಮಾರ್ ರವರು ಟಿಕೆಟ್ ಆಕಾಂಕ್ಷಿಗಳೊಂದಿಗೆ ಮಾತುಕತೆ ನಡೆಸಿ ಹಿಂದಿರುಗುವುದು ಸಹಜವಾಗಿಯೇ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. 

'ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಭೇಟಿ'
ಇಷ್ಟರಲ್ಲಿಯೇ ಶಿವಮೊಗ್ಗ ನಗರಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸಲಿದ್ದು, ಹಲವು ಸಭೆ - ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ. ಈ ಕಾರಣದಿಂದ ಸಂಸದ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರವರು ತಮ್ಮನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಉಳಿದಂತೆ ಇತರೆ ಯಾವುದೇ ರಾಜಕೀಯ ವಿಷಯಗಳು ಚರ್ಚೆಯಾಗಿಲ್ಲ' ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡರವರು ಸೋಮವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X