ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಉಡುಪಿ, ಮಾ.19: ಅಂಬಾಗಿಲು ತಾಂಗದಗಡಿ ಬಸ್ ನಿಲ್ದಾಣದ ಬಳಿ ಮಾ.17ರಂದು ರಾತ್ರಿ ಬೈಕೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಅಲೆವೂರು ಮಣಿಪಾಲ ಕ್ರಾಸ್‌ನ ನಿವಾಸಿ ಅಭಿಜಿತ್(22) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಧನುಷ್ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಕಲ್ಸಂಕ ಕಡೆಯಿಂದ ಅಂಬಾಗಿಲು ಕಡೆಗೆ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡರು. ಅವರಲ್ಲಿ ಅಭಿಜಿತ್ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





