Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ರಾಜಗೋಪುರ

ಮಾ.24ರಿಂದ 26 :ಲೋಕಾರ್ಪಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ19 March 2018 11:56 PM IST
share
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ರಾಜಗೋಪುರ

ಪುತ್ತೂರು,ಮಾ.19: ಎಂಟುನೂರು ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಇತಿಹಾಸಲ್ಲೇ ಮೊದಲ ಬಾರಿಗೆ ರೂ.1.25 ಕೋಟಿ ವೆಚ್ಚದಲ್ಲಿ ಭವ್ಯ ರಾಜಗೋಪುರ ನಿರ್ಮಾಣ ಮಾಡಲಾಗಿದ್ದು, ಮಾ.25ರಂದು ರಾಜಗೋಪುರದ ಉದ್ಘಾಟನಾ ಕಾರ್ಯಕ್ರಮ ವಿವಿಧ ಧಾರ್ಮಿಕ, ವೈದಿಕ ಮತ್ತು ಸಾಂಸ್ಕೃತಿಕ ವೈವಿಧ್ಯಗಳೊಂದಿಗೆ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್.ಸುಧಾಕರ ಶೆಟ್ಟಿ ತಿಳಿಸಿದ್ದಾರೆ. 

ದೇವಾಲಯದಲ್ಲಿ ಸೋಮವಾರ ರಾಜಗೋಪುರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜಗೋಪುರಕ್ಕೆ ಖರ್ಚು ಮಾಡಿದ ಹಣದಲ್ಲಿ ಮುಕ್ಕಾಲಾಂಶ ಭಕ್ತರು ನೀಡಿದ ದೇಣಿಗೆಯಾಗಿದೆ. ಕೇವಲ ಹತ್ತು ತಿಂಗಳ ಅವಧಿಯಲ್ಲಿ ಗೋಪುರ ನಿರ್ಮಾಣ ಕಾರ್ಯ ಮುಗಿದಿದೆ. ತಮಿಳುನಾಡಿನ ಖ್ಯಾತ ಸ್ತಪತಿ ಶೇಖರ್ ಅವರ ವಾಸ್ತು ವಿನ್ಯಾಸ ಮಾರ್ಗದರ್ಶನದಂತೆ ನಿರ್ಮಾಣ ಕಾರ್ಯ ನಡೆದಿದೆ ಎಂದರು. 

ಇಟ್ಟಿಗೆ, ಮರಳು ಮತ್ತು ಸಿಮೆಂಟ್ ಬಳಸಿ ನಿರ್ಮಾಣ ಮಾಡಲಾಗಿರುವ ರಾಜಗೋಪುರ 47.5 ಅಡಿ ಎತ್ತರ ಮತ್ತು 19 ಅಡಿ ಸುತ್ತಳತೆ ಹೊಂದಿದೆ. ದೇವಾಲಯದ  ಧ್ವಜಸ್ಥಂಭ (ಕೊಡಿಮರ) 55 ಅಡಿ ಇದ್ದು, ಅದಕ್ಕಿಂತ ಸ್ವಲ್ಪ ಕಿರಿದಾಗಿ ರಾಜಗೋಪುರ ನಿರ್ಮಿಸಲಾಗಿದೆ. ಗೋಪುರದ ಸುತ್ತ 120 ದೇವತಾ ಮೂರ್ತಿಗಳನ್ನು ಕೆತ್ತಲಾಗಿದೆ. ಗೋಪುರದ ಶಿಖರದಲ್ಲಿ ಪಂಚ ಕಲಶಗಳನ್ನು ಸ್ಥಾಪಿಸಲಾಗುತ್ತದೆ. ಗೋಪುರದ ಎರಡೂ ಪಾಶ್ರ್ವಗಳಲ್ಲಿ ತಲಾ 57.5 ಅಡಿ ಉದ್ದ ಮತ್ತು 18 ಅಡಿ ಅಗಲದ ಸೋಬಾನೆ ಮಂಟಪ ರಚಿಸಲಾಗಿದ್ದು, 32 ಆಕರ್ಷಕ ಕಂಬಗಳನ್ನು ಒಳಗೊಂಡಿದೆ. ಸೋಬಾನೆ ಮಂಪಟದ ಇಕ್ಕೆಲಗಳಲ್ಲಿ 36 ಅಡಿ ಎತ್ತರ ಮತ್ತು 18 ಅಡಿ ಅಗಲದ ಎರಡು ಕಮಾನು ದ್ವಾರಗಳನ್ನು ನಿರ್ಮಿಸಲಾಗಿದೆ. ಇವುಗಳ ಪಕ್ಕದಲ್ಲಿ 10 ಅಡಿ ಉದ್ದ ಮತ್ತು 7 ಅಡಿ ಅಗಲದ ಎರಡೂ ಕಿರು ಮಂಟಪಗಳನ್ನು ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ದೇವಾಲಯದ ತಂತ್ರಿ  ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಮಾ.24ರಂದು ಸಂಜೆಯಿಂದ ಆರಂಭಗೊಂಡು ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮವಿದೆ. 25ರಂದು ಭಾನುವಾರ ಬೆಳಿಗ್ಗೆ 7ರಿಂದ ಗಣಪತಿ ಹವನ, ಸಹಸ್ರ ಕಲಶಾಭಿಷೇಕ ನಡೆಯುವುದು. ಪೂರ್ವಾಹ್ನ 11.28ರ ಮಿಥುನ ಲಗ್ನ ಸುಮೂಹೂರ್ತದಲ್ಲಿ ನೂತನ ರಾಜಗೋಪುರದ ಶಿಖರ ಪ್ರತಿಷ್ಠೆ,  ಕಲಶಾಭಿಷೇಕ, ರಾಜಗೋಪುರ ಸಮರ್ಪಣೆ, ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮ ನಡೆಯುವುದು ಎಂದು ಸುಧಾಕರ ಶೆಟ್ಟಿ ಅವರು ತಿಳಿಸಿದರು. 

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜಗೋಪುರ ಲೋಕಾರ್ಪಣೆ ಮಾಡುವರು. ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡುವರು. ಶಾಸಕಿ ಶಕುಂತಳಾ ಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವಿನಯ ಕುಮಾರ್ ಸೊರಕೆ, ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು. 

26ರಂದು ಮುಂಜಾನೆ 6ರಿಂದ ರುದ್ರ ಪಾರಾಯಣ, 9ರಿಂದ  ಶತರುದ್ರಾಭಿಷೇಕ,  ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತದೆ. ರಾತ್ರಿ ದೇವರ ಬಲಿ ಉತ್ಸವ, ಬಂಡಿ ಉತ್ಸವ ನಡೆಯುವುದು. ದೇವರಿಗೆ 1200 ಕಲಶಾಭಿಷೇಕ ಮಾಡಲಿದ್ದು,ಕಲಶಾಭಿಷೇಕದಲ್ಲಿ ಭಕ್ತರ ಪಾಲುದಾರಿಕೆ ಇರಬೇಕಾದ ಕಾರಣಕ್ಕಾಗಿ  ಕಲಶವೊಂದಕ್ಕೆ ರೂ 1 ಸಾವಿರ ನಿಗದಿಪಡಿಸಲಾಗಿದೆ. ಭಕ್ತರು ಈ ಸೇವೆಯ ಮೂಲಕ  ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕರುಣಾಕರ ರೈ, ಯು.ಪಿ. ರಾಮಕೃಷ್ಣ, ಜಾನು ನಾಯ್ಕ, ರೋಹಿಣಿ ಆಚಾರ್ಯ ಅವರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X