Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಾಯಿ ಅಂಗಡಿ ಆರಂಭಕ್ಕೆ ವಿರೋಧ: ವಿವಿಧ...

ಸಾರಾಯಿ ಅಂಗಡಿ ಆರಂಭಕ್ಕೆ ವಿರೋಧ: ವಿವಿಧ ಸಂಘಟನೆಗಳಿಂದ ಅಂಗಡಿ ಬಂದ್ ಮಾಡಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 March 2018 10:52 PM IST
share
ಸಾರಾಯಿ ಅಂಗಡಿ ಆರಂಭಕ್ಕೆ ವಿರೋಧ: ವಿವಿಧ ಸಂಘಟನೆಗಳಿಂದ ಅಂಗಡಿ ಬಂದ್ ಮಾಡಿ ಪ್ರತಿಭಟನೆ

ಸಾಗರ, ಮಾ.20: ತಾಲೂಕಿನ ಕಾನ್ಲೆ ಗ್ರಾಮ ಪಂಚಾಯತ್‌ನ ಕೆಲವೆ ವೃತ್ತದಲ್ಲಿ ಎಂಎಸ್‌ಐಎಲ್ ಮದ್ಯದಂಗಡಿ ತೆರೆದಿರುವುದನ್ನು ವಿರೋಧಿಸಿ ಮಂಗಳವಾರ ಕೆಲವೆ-ಹಿಂಡ್ಲೆಕೊಪ್ಪದ ಗ್ರಾಮ ಸುಧಾರಣಾ ಸಮಿತಿ, ಸ್ವಸಹಾಯ ಮತ್ತು ಸ್ತ್ರೀಶಕ್ತಿ ಸಂಘಗಳು, ಸಾರಾಯಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಅಂಗಡಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ರಾಜಶೇಖರ ಗಾಳಿಪುರ, ಈ ಹಿಂದಿನಿಂದಲೂ ತಮ್ಮ ಗ್ರಾಮಗಳಲ್ಲಿ ಮದ್ಯ ಸೇವನೆ ನಿಷೇದ ಮಾಡುವ ಕುರಿತು ಕಟ್ಟುನಿಟ್ಟಿನ ಪ್ರಯತ್ನ ನಡೆಸಲಾಗುತ್ತಿದೆ. 

ಗ್ರಾಮ ವ್ಯಾಪ್ತಿಯಲ್ಲಿ ಎಂಎಸ್‌ಐಎಲ್ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಅಬಕಾರಿ ಇಲಾಖೆಗೆ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ. ಆದರೂ ಇಲ್ಲಿ ಸರಕಾರಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಿರುವುದು ಖಂಡನೀಯ ಎಂದರು. ಪ್ರತಿಭಟನೆಯಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಅನಂತ ಕೆಲವೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಣ್ಣಪ್ಪಹಿಂಡ್ಲೆಕೊಪ್ಪ, ಪ್ರಮುಖರಾದ ದೇವರಾಜ್, ರಾಜಣ್ಣ, ನಾಗರಾಜ ಕೆಲವೆ, ಮಹಾಬಲೇಶ್ ಮಂಡಗಳಲೆ, ಮಂಜು ಮತ್ತಿತರರು ಪಾಲ್ಗೊಂಡಿದ್ದರು.

ಈ ಭಾಗದಲ್ಲಿ ಅತಿಹೆಚ್ಚು ಕೂಲಿಕಾರ್ಮಿಕರು, ಕೃಷಿಕರು ವಾಸಿಸುತ್ತಿದ್ದಾರೆ. ಜೊತೆಗೆ ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಕರೆಗೆ ಕನಿಷ್ಠ 10 ಚೀಲ ಭತ್ತ ಬೆಳೆಯುತ್ತಾರೆ. ಇಲ್ಲಿ ಮದ್ಯದಂಗಡಿ ತೆರೆದು ರೈತರನ್ನು ಕುಡಿತಕ್ಕೆ ದಾಸರಾಗಿಸುವ ಹುನ್ನಾರ ಇದರ ಹಿಂದೆ ಅಡಗಿದೆ. ಜೊತೆಗೆ ಯುವಕರು ಕೂಡ ಕುಡಿತದ ಚಟಕ್ಕೆ ಬಲಿಯಾಗುವ ಸಾಧ್ಯತೆ ಇದೆ. ತಕ್ಷಣ ಮದ್ಯದಂಗಡಿಗೆ ನೀಡಿರುವ ಪರವಾನಿಗೆಯನ್ನು ರದ್ದುಪಡಿಸಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ.

ರಾಜಶೇಖರ ಗಾಳಿಪುರ, ಜಿಪಂ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X