Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀಫ್ ಸಾಗಾಟದ ಆರೋಪದಲ್ಲಿ ವ್ಯಾಪಾರಿಯ...

ಬೀಫ್ ಸಾಗಾಟದ ಆರೋಪದಲ್ಲಿ ವ್ಯಾಪಾರಿಯ ಹತ್ಯೆ ಪ್ರಕರಣ: 11 ಗೋರಕ್ಷಕರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ21 March 2018 6:31 PM IST
share
ಬೀಫ್ ಸಾಗಾಟದ ಆರೋಪದಲ್ಲಿ ವ್ಯಾಪಾರಿಯ ಹತ್ಯೆ ಪ್ರಕರಣ: 11 ಗೋರಕ್ಷಕರಿಗೆ ಜೀವಾವಧಿ ಶಿಕ್ಷೆ

ಜಾರ್ಖಂಡ್, ಮಾ.21: ಬೀಫ್ ಸಾಗಿಸುತ್ತಿದ್ದ ಆರೋಪದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರನ್ನು ಹತ್ಯೆಗೈದ ಬಿಜೆಪಿ ನಾಯಕ ಸೇರಿದಂತೆ 11 ಮಂದಿ ಗೋರಕ್ಷಕರಿಗೆ ಜಾರ್ಖಂಡ್ ನ ರಾಮ್ ಗರ್ ಜಿಲ್ಲೆಯ ತ್ವರಿತಗತಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬಾಲಾಪರಾಧಿಯಾಗಿರುವ ಒಬ್ಬನ ಬಗ್ಗೆ ಇನ್ನಷ್ಟೇ ತೀರ್ಪು ಪ್ರಕಟಿಸಬೇಕಾಗಿದೆ.

ಅಲೀಮುದ್ದೀನ್ ಅನ್ಸಾರಿ ಎಂಬ 55 ವರ್ಷದ ವ್ಯಾಪಾರಿಯನ್ನು  ಈ ಗೋರಕ್ಷಕರು ಹೊಡೆದು ಕೊಂದಿದ್ದರು. ಸಂತೋಷ್ ಸಿಂಗ್, ದೀಪಕ್ ಮಿಶ್ರಾ, ವಿಕ್ಕಿ ಸಾ, ಸಿಕಂದರ್ ರಾಮ್, ಉತ್ತಮ್ ರಾಮ್, ವಿಕ್ರಮ್ ಪ್ರಸಾದ್, ರಾಜು ಕುಮಾರ್, ರೋಹಿತ್ ಠಾಕೂರ್, ಛೋಟು ವರ್ಮಾ, ಕಪಿಲ್ ಠಾಕೂರ್ ಹಾಗು ಬಿಜೆಪಿ ನಾಯಕ ನಿತ್ಯಾನಂದ ಮಹ್ತೋ ಅಪರಾಧಿಗಳು.

ಗೋರಕ್ಷಣೆ ಹೆಸರಿನಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿರುವ ಪ್ರಥಮ ಪ್ರಕರಣ ಇದಾಗಿದೆ ಎಂದು ಅಡಿಶನಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಸುಶೀಲ್ ಕುಮಾರ್ ಶುಕ್ಲಾ ಹೇಳಿದರು.

2017ರ ಜೂನ್ 29ರಂದು ರಾಮ್ ಗರ್ ನ ಬಝಾರ್ಟಂಡ್ ನಲ್ಲಿ ಬಜರಂಗದಳ ಕಾರ್ಯಕರ್ತರನ್ನೊಳಗೊಂಡ 100ಕ್ಕೂ ಅಧಿಕ ಮಂದಿಯ ತಂಡ ಅನ್ಸಾರಿಯವರನ್ನು ಹೊಡೆದು ಕೊಂದಿದ್ದರು. 

   “ದುಷ್ಕರ್ಮಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ನಾವು ದೇವರಲ್ಲಿ ಬೇಡಿಕೊಂಡಿದ್ದೆವು. ಇದೀಗ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪು ಸ್ವಾಗತಾರ್ಹ. ಆದರೆ 12ನೇ ಆರೋಪಿ ಅಪ್ರಾಪ್ತನಾಗಿರುವ ಕಾರಣ ಶಿಕ್ಷೆ ಪ್ರಕಟವಾಗಿಲ್ಲ. ಆತನನ್ನೂ ವಯಸ್ಕ ಎಂದೇ ಪರಿಗಣಿಸಬೇಕು” ಎಂದು ಹೆಚ್ಚುವರಿ ಪಬ್ಲಿಕ್ ಸಾಲಿಸಿಟರ್ ಸುಶೀಲ್ ಕುಮಾರ್ ಶುಕ್ಲ ಹೇಳಿದ್ದಾರೆ. ಕೋರ್ಟ್ ನೀಡಿದ ತೀರ್ಪಿನಿಂದ ತನ್ನ ತಾಯಿಗೆ ಖುಷಿಯಾಗಿದೆ ಎಂದು ಅನ್ಸಾರಿ ಪುತ್ರಿ ಶಾಬಾನ್ ಅನ್ಸಾರಿ ತಿಳಿಸಿದ್ದಾರೆ. ಆದರೆ ಸರಕಾರ ತನ್ನ ಕುಟುಂಬಕ್ಕೆ ಪರಿಹಾರ ಧನ ನೀಡದಿರುವ ಬಗ್ಗೆ ಅತೃಪ್ತಿಯಿದೆ. ತಂದೆಯ ದುಡಿಮೆಯಿಂದ ಸಂಸಾರದ ರಥ ಸಾಗುತ್ತಿತ್ತು. ದುರಂತ ಸಂಭವಿಸಿದ ಆರಂಭದ ದಿನದಲ್ಲಿ ಹಲವಾರು ಅಧಿಕಾರಿಗಳು, ಮುಖಂಡರು ಮನೆಗೆ ಭೇಟಿ ನೀಡಿ ಹಲವಾರು ಆಶ್ವಾಸನೆ ನೀಡಿ ಹೋಗಿದ್ದಾರೆ. ಆದರೆ ಇದುವರೆಗೂ ಪರಿಹಾರಧನದ ಸುದ್ದಿಯಿಲ್ಲ ಎಂದು ಶಾಬಾನ್ ಹೇಳಿದ್ದಾರೆ.

   ಅಪರಾಧಿಗಳಲ್ಲಿ ಓರ್ವನಾಗಿರುವ ನಿತ್ಯಾನಂದ ಮಹತೋ ಬಿಜೆಪಿಯ ಜಿಲ್ಲಾ ಘಟಕದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X