ಎರ್ಮಾಳು: ರಸ್ತೆ ಅಪಘಾತಕ್ಕೆ ವಿದ್ಯಾರ್ಥಿ ಬಲಿ
ಪಡುಬಿದ್ರೆ, ಮಾ. 21: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಡ್ಡಲಾಗಿ ಇರಿಸಿದ ಡ್ರಮ್‌ಗೆ ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಎರ್ಮಾಳು ನಾರಲ್ತಾಯ ಗುಡಿ ಮುಂಭಾಗದಲ್ಲಿ ನಡೆದಿದೆ.
ಮೃತನನ್ನು ಬೆಂಗಳೂರು ಬಂಗಲಗಂಟೆ ಮಂಗಳಗೌರಿ ನಿವಾಸಿ ಹನುಮಂತಪ್ಪ ಗಡ್ಡಿ ಎಂಬವರ ಪುತ್ರ ಸುಜಯ್ ಗಡ್ಡಿ(24) ಎಂದು ಗುರುತಿಸಲಾಗಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸುಜಯ್ ಬೈಕ್‌ನಲ್ಲಿ ಮಂಗಳೂರಿಗೆ ಸಂಚರಿಸುತ್ತಿದ್ದರು. ಎರ್ಮಾಳು ನಾರಲ್ತಾಯ ಗುಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ರಸ್ತೆಗೆ ಅಡ್ಡಲಾಗಿ ಡ್ರಮ್‌ವೊಂದನ್ನು ಇಡಲಾಗಿತ್ತು. ಇದನ್ನು ಗಮನಿಸದೆ ಬೈಕ್ ಅದಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





