ದಲಿತ ಯುವತಿಯ ಅತ್ಯಾಚಾರಗೈದ ಆರೋಪಿಯಿಂದ ಆತ್ಮಹತ್ಯೆಗೆ ಯತ್ನ

ಲಕ್ನೊ, ಮಾ.21: 17ರ ಹರೆಯದ ದಲಿತ ಯುವತಿಯನ್ನು ಅತ್ಯಾಚಾರ ಮಾಡಿದ ಯುವಕನೋರ್ವ, ಸಿಕ್ಕಿಬಿದ್ದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಘಟನೆ ಉತ್ತರಪ್ರದೇಶದ ಬಾಂದ ಎಂಬ ಗ್ರಾಮದಲ್ಲಿ ನಡೆದಿದೆ. ದೇಹಭಾದೆ ತೀರಿಸಿಕೊಳ್ಳಲು ಬಾಲಕಿ ಮನೆಯಿಂದ ಹೊರಹೋಗಿದ್ದ ಸಂದರ್ಭ ಕುಲ್‌ದೀಪ್ ಎಂಬಾತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಬಾಲಕಿ ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಆರೋಪಿಯನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವೃತ್ತ ನಿರೀಕ್ಷಕ ಓಂಪ್ರಕಾಶ್ ತಿಳಿಸಿದ್ದಾರೆ.
ಪೊಲೀಸರ ವಶದಲ್ಲಿದ್ದ ಸಂದರ್ಭ ಆರೋಪಿ ವಿಷ ಕುಡಿದು ಆತ್ಮಹತ್ಯೆಗೆ ಮುಂದಾಗಿದ್ದು, ತಕ್ಷಣ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
Next Story





