ಅಧ್ಯಾಪಕರಿಂದ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿ ಆತ್ಮಹತ್ಯೆ

ನೋಯ್ಡಾ, ಮಾ. 21: ಇಬ್ಬರು ಅಧ್ಯಾಪಕರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಳಿಕ ಪೂರ್ವ ದಿಲ್ಲಿಯ ಖಾಸಗಿ ಶಾಲೆಯ 15 ವರ್ಷದ ಬಾಲಕಿಯೋರ್ವಳು ಉತ್ತರಪ್ರದೇಶದ ನೋಯ್ಡಾದಲ್ಲಿರುವ ತನ್ನ ಮನೆಯಲ್ಲಿ ಮಂಗಳವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹೊಸದಿಲ್ಲಿಯ ಮಯೂರ್ ವಿಹಾರ್ ಫೇಸ್ 1 ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೆತ್ತವರು ಆಕೆಯನ್ನು ಕೂಡಲೇ ನೋಯ್ಡಾ ಸೆಕ್ಟರ್ 27ರ ಕೈಲಾಸ್ ಆಸ್ಪತ್ರೆಗೆ ಕೊಂಡೊಯ್ದರು. ಆದರೆ, ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಘೋಷಿಸಿದ್ದಾರೆ.
ಬಾಲಕಿಯ ಕುಟುಂಬ ದಾಖಲಿಸಿದ ದೂರಿನ ಹಿನ್ನೆಲೆಯಲ್ಲಿ ಶಾಲೆಯ ಇಬ್ಬರು ಅಧ್ಯಾಪಕರು ಹಾಗೂ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Next Story





