ಕುಪ್ವಾರ ಎನ್‌ಕೌಂಟರ್: ಇಬ್ಬರು ಪೊಲೀಸ್, ಓರ್ವ ಯೋಧ ಹುತಾತ್ಮ

ಶ್ರೀನಗರ, ಮಾ.21: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಬುಧವಾರ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರದಂದು ಕುಪ್ವಾರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿತ್ತು. ಈ ವೇಳೆ ಭದ್ರತಾ ಪಡೆಯು ನಾಲ್ವರು ಉಗ್ರರನ್ನು ಹತ್ಯೆ ಮಾಡಿತ್ತು. ಸದ್ಯ ಭದ್ರತಾ ಪಡೆಯು ಅರಮ್ಪೆರ ಪ್ರದೇಶದಲ್ಲಿ ಅಡಗಿ ಕುಳಿತಿರುವ ಉಗ್ರರ ಶೋಧಕಾರ್ಯದಲ್ಲಿ ತೊಡಗಿದೆ.
Next Story





