ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐವರು ಮೃತ್ಯು
25ಕ್ಕೂ ಅಧಿಕ ಮಂದಿಗೆ ಗಾಯ
ಬಿಹಾರ, ಮಾ.23: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 5 ಮಂದಿ ಮೃತಪಟ್ಟು 25ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬಿಹಾರದ ನಳಂದಾ ಜಿಲ್ಲೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಸಮೀಪದ ಮನೆಗೂ ಹಾನಿಯಾಗಿದೆ.
ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಿದೆ.
Next Story