Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾನೂನು ವಿದ್ಯಾಲಯಗಳು ಕಾರ್ಪೋರೇಟ್...

ಕಾನೂನು ವಿದ್ಯಾಲಯಗಳು ಕಾರ್ಪೋರೇಟ್ ಕಂಪೆನಿಗಳ ರೀತಿಯಲ್ಲಿ ಮಾರ್ಪಾಡುಗೊಳ್ಳುತ್ತಿವೆ-ಕೆ.ಎಂ. ನಟರಾಜ್

ವಿವೇಕಾನಂದ ಕಾನೂನು ಮಹಾವಿದ್ಯಾಲಯ ವಿಸ್ತತ ಕಟ್ಟಡ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ24 March 2018 11:00 PM IST
share

ಪುತ್ತೂರು, ಮಾ. 24: ಕಾನೂನು ವಿದ್ಯಾಯಲಯಗಳು ಎಲ್ಲಾ ವರ್ಗದವರಿಗೂ ಕಾನೂನಿನ ಶಿಕ್ಷಣವನ್ನು ನೀಡುವ ಮತ್ತು ಸಮಾಜಕ್ಕೆ ಉತ್ತಮ ನ್ಯಾಯವಾದಿ ಗಳನ್ನು ಮತ್ತು ನ್ಯಾಯಾಧೀಶರನ್ನು ನೀಡುವ ಘನ ಉದ್ದೇಶದಿಂದ ಆರಂಭಗೊಂಡಿದ್ದರೂ, ಇಂದು ಕಾನೂನು ವಿದ್ಯಾಲಯಗಳು ಕೂಡಾ ಕಾರ್ಪೋರೇಟ್ ಕಂಪೆನಿಗಳ ರೀತಿಯಲ್ಲಿ ಮಾರ್ಪಾಡುಗೊಳ್ಳುತ್ತಿವೆ. ಕಾನೂನು ವಿದ್ಯಾಲಯಗಳು ಯಾವುದೇ ಸಂದರ್ಭದಲ್ಲೂ ತಮ್ಮ ಆರಂಭದ ಉದ್ದೇಶಗಳನ್ನು ಮರೆಯ ಬಾರದು ಎಂದು ದಕ್ಷಿಣ ವಲಯ ಅಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ. ನಟರಾಜ್ ಹೇಳಿದರು.

ಅವರು ಶನಿವಾರ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿಸ್ತತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ ದರು. 30 ವರ್ಷಗಳ ಹಿಂದೆ ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಕಾನೂನು ವಿದ್ಯಾಲಯಗಳು ಇದ್ದವು. ಗ್ರಾಮೀಣ ವಿದ್ಯಾರ್ಥಿಗಳಿಗೂ ಕಾನೂನು ಶಿಕ್ಷಣ ಪಡೆಯುವ ಉದ್ದೇಶದಿಂದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರವರ್ತನೆಯಲ್ಲಿ ಆರಂಭವಾದ ವಿವೇಕಾನಂದ ಕಾಲೇಜು ಇಂದಿಗೂ ಕೂಡಾ ತನ್ನ ಸ್ಥಾಪನೆಯ ಉದ್ದೇಶವನ್ನು ಪಾಲಿಸಿಕೊಂಡು ಬರುತ್ತಿರುವ ಮೂಲಕ ಮಾದರಿ ಸಂಸ್ಥೆಯಾಗಿ ಗೌರವಿಸಲ್ಪಡುತ್ತಿದೆ ಎಂದರು.

ರಾಮನಗರ ಜಿಲ್ಲಾ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ. ಗೋಪಾಲಕೃಷ್ಣ ರೈ ಮಾತನಾಡಿ, ಈ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯಾಗಿ ನಾನು ಇಂದಿಗೂ ಕೂಡಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದೇನೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯಾಗಿದ್ದ ನನಗೆ ಈ ಕಾನೂನು ವಿದ್ಯಾಲಯ ಉತ್ತಮ ಶಿಕ್ಷಣ ನೀಡಿದೆ. ಇಲ್ಲಿನ ಶಿಕ್ಷಣ ಪಡೆದು ನಾನು ಇಂದು ಜಿಲ್ಲಾ ನ್ಯಾಯಾಧೀಶನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಲು ಸಂತಸವಾಗುತ್ತಿದೆ. ಈ ಸಂಸ್ಥೆಯಲ್ಲಿ ಪಡೆದುಕೊಂಡ ಶಿಕ್ಷಣದಿಂದ ನನಗೆ ಈ ಅವಕಾಶ ದೊರೆತಿದೆ ಎಂದು ಅಭಿಮಾನಪೂರ್ವಕವಾಗಿ ಹೇಳುತ್ತಿದ್ದೇನೆ ಎಂದರು.

ರಾಜ್ಯ ಅಧಿವ್ಯಕ್ತಾ ಪರಿಷತ್‌ನ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎ.ಎಂ. ಸೂರ್ಯಪ್ರಕಾಶ್ ಮಾತನಾಡಿ, ಹಣ ಗಳಿಕೆಯೇ ವಕೀಲ ವೃತ್ತಿಯ ಉದ್ದೇಶವಾಗಬಾರದು. ಸಮಾಜಕ್ಕೆ ಉಪಕರಿಸುವ ಮನೋಭಾವದೊಂದಿಗೆ ವೃತ್ತಿ ಧರ್ಮವನ್ನು ಪಾಲಿಸುವ ಮೂಲಕ ಜನರಿಗೆ ಹತ್ತಿರವಾಗಬೇಕು. ಈ ಮೂಲಕ ಸಮಾಜದ ಒಂದು ಭಾಗವಾಗಿ ವಕೀಲರು ಗುರುತಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ವೈದ್ಯಕೀಯ, ಇಂಜಿನಿಯರಿಂಗ್‌ನಂತೆ ವಕಾಲತ್ತು ಕೂಡಾ ವೃತ್ತಿಪರ ಕ್ಷೇತ್ರವಾಗಿ ಗುರುತಿಸಲ್ಪಟ್ಟಿದೆ. ವಕೀಲರಾಗಿ ಕಾನೂನಿನ ನೆರವು ನೀಡುವುದು ಅಥವಾ ವಕಾಲತ್ತು ವಹಿಸಿಕೊಳ್ಳುವುದು ವೃತ್ತಿ ಧರ್ಮವಾದರೂ, ಹಣದ ಕಡೆಗೆ ಒತ್ತು ಕೊಡದೆ ಗುಣದ ಕಡೆಗೆ ಒತ್ತು ಕೊಟ್ಟು ಪವಿತ್ರವಾದ ವಕೀಲ ವೃತ್ತಿಯನ್ನು ನಿರ್ವಹಿಸುವ ಅಗತ್ಯ ಸಮಾಜದಲ್ಲಿದೆ. ಈ ನಿಟ್ಟಿನಲ್ಲಿ ಯುವ ವಕೀಲರು ಸಮಾಜಮುಖಿ ಚಿಂತನೆ, ರಾಷ್ಟ್ರಾಭಿಮಾನದ ಚಿಂತನೆಯೊಂದಿಗೆ ಕಾರ್ಯಪ್ರವೃತ್ತರಾಗಬೇಕು ಎಂದರು.

ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಆಡಳಿತ ಮಂಡಳಿಯ ಸಂಚಾಲಕ ವಿಜಯ ನಾರಾಯಣ ಕೆ.ಎಂ ಉಪಸ್ಥಿತರಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಕೆ.ಜಿ. ಕೃಷ್ಣಮೂರ್ತಿ ಸ್ವಾಗತಿಸಿ, ಆಡಳಿತ ಮಂಡಳಿ ಸದಸ್ಯ ಹಾಗೂ ನ್ಯಾಯವಾದಿ ಮಂಜುನಾಥ ಎನ್.ಎಸ್ ವಂದಿಸಿದರು. ಉಪನ್ಯಾಸಕಿ ಅನ್ನಪೂರ್ಣ ವಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X