Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ಮಾದರಿ ನೀತಿ ಸಂಹಿತೆ...

ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿಗೆ ಸಿದ್ಧತೆ: ಶಿವಮೊಗ್ಗ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ25 March 2018 11:57 PM IST
share

ಶಿವಮೊಗ್ಗ, ಮಾ. 25: ಮುಂಬರುವ ವಿಧಾನಸಭಾ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸಲು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕಾಗಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಅಧಿಕಾರಿಗಳು ಸಿದ್ಧರಾಗಿರುವಂತೆ ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ಸೂಚನೆ ನೀಡಿದರು.

ಅವರು ರವಿವಾರ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಮಾದರಿ ನೀತಿ ಸಂಹಿತೆ, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೊ ಚಿತ್ರೀಕರಣ, ವಿಡಿಯೊ ವೀಕ್ಷಣೆ ತಂಡಗಳು, ಚುನಾವಣಾ ಖರ್ಚುವೆಚ್ಚ ಕುರಿತಾದ ತಂಡ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ವಿವಿಧ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಯಾವುದೇ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಗೆ ಮತದಾನದ ದಿನಾಂಕ ಘೋಷಣೆಯಾಗಲಿದೆ. ಎಲ್ಲಾ ಅಭ್ಯರ್ಥಿಗಳು ಸಮಾನ ನೆಲೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತವಾಗಿ, ಯಾವುದೇ ಅಂಜಿಕೆಯಿಲ್ಲದೆ ಚುನಾವಣಾ ಕರ್ತವ್ಯವನ್ನು ಕಟ್ಟುನಿಟ್ಟಿನಿಂದ ನಿರ್ವಹಿಸಬೇಕು. ಯಾವುದೇ ಒತ್ತಡಗಳಿಗೆ ಮಣಿಯದೆ, ಚುನಾವಣಾ ಅಕ್ರಮಗಳಿಗೆ ಆಸ್ಪದ ನೀಡದೆ, ನ್ಯಾಯಸಮ್ಮತವಾಗಿ ಚುನಾವಣೆ ನಡೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ಈಗಲೇ ಚೆನ್ನಾಗಿ ಅರಿತುಕೊಂಡು ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಆಡಳಿತ ಯಂತ್ರ ನಿಷ್ಪಕ್ಷಪಾತವಾಗಿರಬೇಕು: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್ ಅವರು ಮಾದರಿ ನೀತಿ ಸಂಹಿತೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಚುನಾವಣೆ ಘೋಷಣೆಯಾದ ಮರುಕ್ಷಣದಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಆಡಳಿತ ಯಂತ್ರ ಯಾವುದೇ ಕಾರಣಕ್ಕೂ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಬೇಕು. ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಜನಪ್ರತಿನಿಧಿಗಳನ್ನು ಖಾಸಗಿಯಾಗಿ ಅಥವಾ ಸಾರ್ವಜನಿಕವಾಗಿ ಅಧಿಕಾರಿಗಳು ಭೇಟಯಾಗುವಂತಿಲ್ಲ. ಸರ್ಕಾರಿ ನೌಕರರ ಸಂಬಂಧಿಕರು ಚುನಾವಣಾ ಕಣದಲ್ಲಿದ್ದರೆ ಅಂತಹವರು ಮಾಹಿತಿಯನ್ನು ಮುಂಚಿತವಾಗಿ ಚುನಾವಣಾಧಿಕಾರಿಗಳಿಗೆ ನೀಡಬೇಕು. ಚುನಾವಣೆಗೆ ಸಂಬಂಧಿಸಿದ ಯಾವುದೇ ಕಾರ್ಯ ಚಟುವಟಿಕೆಗಳಲ್ಲಿ ಅವರು ಭಾಗಿಯಾಗುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷಗಳಿಗೆ ಸಂಬಂಧಿಸಿದಂತಹ ಗೋಡೆ ಬರಹಗಳು, ಬ್ಯಾನರ್ ಬಂಟಿಂಗ್, ಸರ್ಕಾರದ ಸಾಧನೆಗಳ ಫ್ಲೆಕ್ಸ್ ಗಳನ್ನು ನೀತಿ ಸಂಹಿತೆ ಜಾರಿಯಾದ ತಕ್ಷಣ ತೆಗೆದು ಹಾಕಬೇಕು. ಜನಪ್ರತಿನಿಧಿಗಳಿಗೆ ನೀಡಲಾಗಿರುವ ಎಲ್ಲಾ ವಾಹನಗಳನ್ನು ತಕ್ಷಣದಿಂದ ಹಿಂಪಡೆಯಲಾಗುವುದು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಇನ್ನೊಬ್ಬರ ಖಾಸಗಿ ಬದುಕು ಬಗ್ಗೆ ಹೇಳಿಕೆ ನೀಡುವುದು, ಧರ್ಮ, ಜಾತಿ ಇತ್ಯಾದಿಗಳ ಆಧಾರದಲ್ಲಿ ಮತ ಯಾಚಿಸುವುದನ್ನು ಮಾಡುವಂತಿಲ್ಲ. ಪ್ರತಿಯೊಂದು ಸಮಾರಂಭಗಳ ವೀಡಿಯೊ ಚಿತ್ರೀಕರಣ ಮಾಡಬೇಕು. ಚುನಾವಣಾ ಪ್ರಚಾರ ಕಾರ್ಯಗಳನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆದು ನಗರ ಪ್ರದೇಶಗಳಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಾತ್ರಿ 11ರವರೆಗೆ ಮಾಡಬಹುದಾಗಿದೆ ಎಂದು ಹೇಳಿದರು.

ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಚುನಾವಣಾ ಸಂಬಂಧಿಸಿದ ಚಟುವಟಿಕೆ ನಡೆಸುವಂತಿಲ್ಲ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವ ಕೇಂದ್ರದ 100ಮೀಟರ್ ಒಳಗೆ ಗರಿಷ್ಟ 3ವಾಹನ ಮಾತ್ರ ಅಭ್ಯರ್ಥಿ ತರಬಹುದಾಗಿದೆ. ಸಾರ್ವಜನಿಕರು 50ಸಾವಿರಕ್ಕೂ ಅಧಿಕ ನಗದನ್ನು ಯಾವುದೇ ದಾಖಲೆಯಿಲ್ಲದೆ ಕೊಂಡೊಯ್ಯುವಂತಿಲ್ಲ. ಚುನಾವಣಾ ಕಣದಲ್ಲಿ ಅಧಿಕೃತ ಅಭ್ಯರ್ಥಿಗಳಿಗೆ ನೆರವು ನೀಡಲು ಡಮ್ಮಿ ಅಭ್ಯರ್ಥಿಗಳು ನಿಲ್ಲುವ ಪರಿಪಾಟವಿದ್ದು ಅಂತಹ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹೆಚ್ಚುವರಿ ನಿಗಾ ಇರಿಸಬೇಕು. ಚುನಾವಣಾ ಅಕ್ರಮಗಳ ಪರಿಶೀಲನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಅಧಿಕಾರಿ ಶಿವಶಂಕರ್ ಅವರು ಚುನಾವಣಾ ಕರ್ತವ್ಯಗಳ ಕುರಿತು ಮಾಹಿತಿ ಒದಗಿಸಿದರು. ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್, ಪ್ರೊಬೆಷನರಿ ಐಎಎಸ್ ಅಧಿಕಾರಿ ರಾಹುಲ್, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು. 

ವಿವಿಪ್ಯಾಟ್ ಪ್ರಾತ್ಯಕ್ಷಿತೆ
ಇದೇ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುತ್ತಿರುವ ಮತದಾರರ ಮತದಾನ ಖಾತ್ರಿಪಡಿಸುವ ವಿವಿಪ್ಯಾಟ್ ಯಂತ್ರದ ಕುರಿತು ಜಿಲ್ಲಾಧಿಕಾರಿ ಎಂ.ಲೋಕೇಶ್ ಅವರು ಪ್ರಾತ್ಯಕ್ಷಿತೆ ನೀಡಿದರು.

ವಿವಿಪ್ಯಾಟ್ ಬಳಕೆಯಿಂದ ತಾನು ಯಾರಿಗೆ ಮತದಾನ ಮಾಡಿದ್ದೇನೆ ಎಂಬುವುದನ್ನು ಮತದಾರ ಮತದಾನ ಮಾಡಿದ ಕ್ಷಣದಲ್ಲಿ ವೀಕ್ಷಿಸಬಹುದಾಗಿದೆ. ಬ್ಯಾಲೆಟ್ ಯುನಿಟ್‍ನಲ್ಲಿ ಮತಗುಂಡಿ ಒತ್ತಿದ ನಂತರ ತಾನು ಮತದಾನ ಮಾಡಿದ ವಿವರ ವಿವಿಪ್ಯಾಟ್‍ನಲ್ಲಿ ಏಳು ಸೆಕೆಂಡುಗಳ ಕಾಲ ಪ್ರದರ್ಶನಗೊಳ್ಳಲಿದೆ. ಇದರಿಂದ ಯಾವುದೇ ಗೊಂದಲ, ಅನುಮಾನ ಮತದಾರನಿಗೆ ಉಳಿಯುವುದಿಲ್ಲ. ತಾನು ಮತ ಚಲಾಯಿಸಿದ ವ್ಯಕ್ತಿ ಮತ್ತು ಚಿಹ್ನೆಗೆ ಮತದಾನವಾದ ಕುರಿತು ಖಾತ್ರಿಪಡಿಸಿಕೊಂಡು ಮತಗಟ್ಟೆಯಿಂದ ತೆರಳಬಹುದಾಗಿದೆ ಎಂದರು.

ವಿವಿಪ್ಯಾಟ್‍ಗಳ ವಿ.ಎಸ್.ಡಿ. ಯೂನಿಟ್ ನಿರ್ವಹಣೆಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ಪ್ರತಿಮತಗಟ್ಟೆಗೆ ನಿಯೋಜಿಸಲಾಗುವುದು. ಮತದಾನ ಆರಂಭವಾಗುವ ಮುನ್ನ ಅಣಕು ಪ್ರದರ್ಶನದ ಮೂಲಕ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಗಳ ಕಾರ್ಯನಿರ್ವಹಣೆ ಕುರಿತಂತೆ ವಿವಿಧ ಪಕ್ಷಗಳ ಮತಗಟ್ಟೆ ಏಜೆಂಟರುಗಳ ಎದುರಿಗೆ ಪ್ರದರ್ಶಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X