ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ
ಹೊಸದಿಲ್ಲಿ, ಮಾ.26: ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ(ಮಂಗಳವಾರ) ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಸುದ್ದಿಗೋಷ್ಠಿ ನಡೆಸಿ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಮೇ 2ನೇ ವಾರ ಮತದಾನದ ದಿನಾಂಕ ನಿಗದಿಯಾಗಬಹುದು. ಅಧಿಸೂಚನೆ ಹೊರಡಿಸಿದರೆ ನಾಳೆಯೇ ನೀತಿ ಸಂಹಿತೆ ಜಾರಿಯಾಗಲಿದೆ.
ಮಂಗಳವಾರ ಬೆಂಗಳೂರಿಗೆ ಬರಬೇಕಿದ್ದ ಚುನಾವಣಾ ಆಯುಕ್ತರು, ಬೆಂಗಳೂರು ಭೇಟಿಗೆ ಮೊದಲೇ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
Next Story