ಹರಿಹರ: ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳಿದ್ದ ಕಾರು ಅಪಘಾತ; ಐವರಿಗೆ ಗಾಯ

ಹರಿಹರ,ಮಾ.26: ಚಾಲಕನ ನಿಯಂತ್ರಣ ತಪ್ಪಿದ ಬೆಂಗಳೂರು ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳಿದ್ದ ಕಾರು ಪಲ್ಟಿಯಾಗಿ ಐವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಹನಗವಾಡಿ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ಹಾವೇರಿಗೆ ಸ್ವಿಫ್ಟ್ ಕಾರಿನಲ್ಲಿ ಮದುವೆಗೆಂದು ಬಂದು ವಾಪಾಸ್ ಹೋಗುವ ಸಂದರ್ಭ ಹರಿಹರ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಬೆಂಗಳೂರಿನ ಮೀಸಲು ಪೊಲೀಸ್ ಪಡೆಯ ಗಿರಿಧರ್, ಮಲ್ಲಪ್ಪ, ಅರುಣ್, ಕಲ್ಲೋಡಿ ವಿರೂಪಾಕ್ಷ ಹಾಗೂ ಕಣ್ವಪ್ಪ ಅವರಿಗೆ ತೀವ್ರ ಗಾಯಗಳಾಗಿದ್ದು, ದಾವಣಗೆರೆ ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಚಾಲಕ ಅತೀ ವೇಗವಾಗಿ ವಾಹನ ಚಲಾಯಿಸಿದ ಕಾರಣ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಈ ಕುರಿತು ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





