ಕಾಂಗ್ರೆಸ್ ನ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರ್ಪಡೆಗೊಳ್ಳುವವರಿಗೆ ಆತ್ಮೀಯ ಸ್ವಾಗತ: ಶಾಸಕ ನರೇಂದ್ರ
.jpg)
ಹನೂರು,ಮಾ.27: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರ್ಪಡೆಗೊಳ್ಳುವವರನ್ನು ಆತ್ಮೀಯವಾಗಿ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಶಾಸಕ ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರಭಾವಿ ಮುಖಂಡ ಹಾಗೂ ಸೂಳೇರಿಪಾಳ್ಯ ಗ್ರಾ.ಪಂ ಅಧ್ಯಕ್ಷರ ಪತಿ ಶಿವಕುಮಾರ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ಮಾತನಾಡಿದ ಶಾಸಕ ನರೇಂದ್ರ, ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಲ್ಲದೆ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಎಲ್ಲಾ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಕ್ಷೇತ್ರವು ಕಾಂಗ್ರೆಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಬಸವರಾಜು, ತಾ.ಪಂ ಸದಸ್ಯ ಜವಾದ ಅಹಮ್ಮದ್, ನಟರಾಜು, ಮುಖಂಡರಾದ ಚಿಕ್ಕತಮ್ಮಯ್ಯ, ಗುಂಡಾಪುರ ಜಯರಾಜ್ ಇನ್ನಿತರರು ಹಾಜರಿದ್ದರು.





