ಸತ್ಯ ನುಡಿದ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾ.27: ಯಡಿಯೂರಪ್ಪ ಸರಕಾರ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿತ್ತು ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಲವು ವರ್ಷಗಳ ಬಳಿಕ ಸತ್ಯ ನುಡಿದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಭ್ರಷ್ಟಾಚಾರಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಲ್ಲರ ಮನಸ್ಸಿನಲ್ಲಿರುವುದನ್ನೆ ಅಮಿತ್ ಶಾ ಹೇಳಿದ್ದಾರೆ. ಯಡಿಯೂರಪ್ಪ ಬಗ್ಗೆ ಈ ರೀತಿ ಹೇಳಿ ಎಂದು ನಾವೇನು ಅವರಿಗೆ ಹೇಳಿಕೊಟ್ಟಿದ್ದೇವಾ ಎಂದು ಪ್ರಶ್ನಿಸಿದರು.
ತರಾತುರಿಯಲ್ಲಿ ಕಡತಗಳ ವಿಲೇವಾರಿಯಾಗುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತದಲ್ಲಿದೆ. ಹಾಗಾಗಿ ಕಡತಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಇದರಲ್ಲಿ ತಪ್ಪೇನಿದೆ ಎಂದರು.
Next Story





