Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ ಒಡೆಯುವ...

ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸ ಮಾಡಿಲ್ಲ: ಡಾ.ಕೆ.ಮರುಳಸಿದ್ದಪ್ಪ

ಲಿಂಗಾಯತ ಪ್ರತ್ಯೇಕ ಧರ್ಮ ಒಂದು ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 March 2018 9:26 PM IST
share
ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸ ಮಾಡಿಲ್ಲ: ಡಾ.ಕೆ.ಮರುಳಸಿದ್ದಪ್ಪ

ಬೆಂಗಳೂರು, ಮಾ.27: ಪ್ರಸಕ್ತವಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆಯಾಗುತ್ತಿದ್ದು, ರಾಜಕೀಯ ಮೇಲಾಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಲ್ಲಿ ಒಂದಾಗಿದ್ದ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ ಲಿಂಗಾಯತ ಪ್ರತ್ಯೇಕ ಧರ್ಮವಿಚಾರದಲ್ಲಿ ಸಿದ್ದರಾಮಯ್ಯ ತಾಂತ್ರಿಕವಾಗಿ ಬೇಡಿಕೆ ಈಡೇರಿಸಲು ಪೋಸ್ಟ್‌ಮ್ಯಾನ್ ರೀತಿ ಕಾರ್ಯನಿರ್ವಹಿಸಿದ್ದಾರೆ ಹೊರತು, ಮತ್ತೇನು ಅಲ್ಲ ಎಂದು ಹಿರಿಯ ಸಾಹಿತಿ ಹಾಗೂ ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಹೇಳಿದ್ದಾರೆ.

ಮಂಗಳವಾರ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಮಕಾಲೀನ ವಿಚಾರ ವೇದಿಕೆ ಆಯೋಜಿಸಿದ್ದ ಲಿಂಗಾಯತ ಪ್ರತ್ಯೇಕ ಧರ್ಮ ಒಂದು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಸಿದ್ದರಾಮಯ್ಯನವರ ಬಳಿ ಬಂದಾಗ ಅದಕ್ಕೆ ಪ್ರತ್ಯೇಕ ಸಮಿತಿ ರಚಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಇದರಲ್ಲಿ ಧರ್ಮ ಒಡೆಯುವ ಪ್ರಶ್ನೆಯೇ ಇಲ್ಲ. ಕೇವಲ ಸಿದ್ದರಾಮಯ್ಯ ತಾಂತ್ರಿಕವಾಗಿ ಪೋಸ್ಟ್‌ಮ್ಯಾನ್ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮದಿಂದ ಲಿಂಗಾಯತದೊಳಗಿರುವ ಹಿಂದುಳಿದವರಿಗೆ ಎಷ್ಟು ಪ್ರಯೋಜನವಾಗುತ್ತದೆ. ಅದರ ಹೊರಗಿರುವವರ ಮೇಲೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ವಿಮರ್ಶೆ ಮಾಡಬೇಕಿದೆ ಎಂದು ನುಡಿದರು.

ಹಿಂದೂ ಧರ್ಮ ಕಲ್ಪಿತ: ಲಿಂಗಾಯತ ಧರ್ಮ ಅಸ್ಮಿತೆ ವಿಚಾರ. ಹಿಂದೂ ಧರ್ಮವೆಂಬುದು ಬ್ರಿಟಿಷರ ವಿರುದ್ಧ ಹೋರಾಡಲು ಹುಟ್ಟು ಹಾಕಿದ ಅಸ್ತ್ರ. ಇದೊಂದು ಕಲ್ಪಿತ ಧರ್ಮವಾದ್ದರಿಂದ ಇದರ ಬಗ್ಗೆ ಎಲ್ಲಿಯೂ ಚರ್ಚೆ ನಡೆದಿಲ್ಲ. ಹೀಗಾಗಿ ಹಿಂದೂ ಧರ್ಮದ ಬಗ್ಗೆ ಚರ್ಚೆ ನಡೆಯಲು ಇದು ಸಕಾಲ ಎಂದು ಮರುಳಸಿದ್ದಪ್ಪ ಹೇಳಿದರು.

ಹಿರಿಯ ಸಾಹಿತಿ ಡಾ.ಚಂದ್ರಶೇಖರ ಪಾಟೀಲ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಪ್ರಾರಂಭದಲ್ಲಿ ಒಂದು ಬಿಂದುವಿನಿಂದ ಹೊರಟು ದೊಡ್ಡ ಜನಸಮುದಾಯದ ಮೂಲಕ ವಿಚಾರ ಭಾವನೆಯಿಂದ ವಿಸ್ತಾರರೂಪ ಪಡೆದು ಇತಿಹಾಸದಲ್ಲಿ ಬೃಹತ್ ಸಮುದಾಯವಾಗಿ ನಿಂತಿದೆ. ಅಲ್ಪಸಂಖ್ಯಾತ ಎಂಬ ಪದಬಳಕೆ ಮಾಡಿದ್ದರು ಸಹ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರದಾದ್ಯಂತ ಲಿಂಗಾಯತ ಸಮುದಾಯವಿದೆ ಎಂದರು.

ಅವರೇ ಪ್ರತ್ಯೇಕ ಕೇಳಿದರು: ಅಖಿಲ ಭಾರತ ವೀರಶೈವ ಮಹಾಸಭಾದವರು ಅಭಿನಂದನಾ ಸಮಾರಂಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಹಕ್ಕೊತ್ತಾಯ ಮಾಡಿದ್ದರು. ಸೂಚಿತ ಪರಿಹಾರದಲ್ಲಿ ಲಿಂಗಾಯತ ಹಾಗೂ ಬಸವತತ್ವದಲ್ಲಿ ನಂಬಿಕೆ ಇರುವ ವೀರಶೈವರು ಎಂದು ಹೇಳಿರುವುದರಿಂದ ಬಸವ ತತ್ವ ಬೇಡ ವೀರಶೈವ ಲಿಂಗಾಯತ ಬರಬೇಕು ಎನ್ನುತ್ತಿದ್ದಾರೆ ಎಂದು ಅವರು ಹೇಳಿದರು.

12ನೆ ಶತಮಾನದ ಅನುಭವ ಮಂಟಪದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಸಾರಲು ಹೊರಟಾಗ ರಾಜಕೀಯ, ಸಂಘರ್ಷ ಎಲ್ಲವೂ ಇತ್ತು. ವೈದಿಕ ಪರಂಪರೆ ಧಿಕ್ಕರಿಸಿ ವಿಚಾರವಾದದ ಮೂಲಕ ಹೊಸ ಮನ್ವಂತರಕ್ಕೆ ಕಾಲಿಡುವ ಕಾಲಘಟ್ಟಕ್ಕೆ ನಾಂದಿಯಯಿತು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಎನ್.ನಾಗರಾಜ್, ಟಿ.ಆರ್. ಚಂದ್ರಶೇಖರ್, ಹುಲಿಕುಂಟೆ ಮೂರ್ತಿ, ಡಾ.ಕೆ.ಷರೀಫಾ, ಪ್ರಭಾ ಬೆಳವಂಗಲ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X