ನ್ಯಾಯಾಂಗ ನಿಂದನೆ ಪ್ರಕರಣ: ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಡಿಸಿ ವಿ.ಶಂಕರ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಮಾ.27: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರೋಪ ನಿಗದಿಗೆ ಸಂಬಂಧಿಸಿದಂತೆ ಕೋರ್ಟ್‌ಗೆ ಖುದ್ದು ಹಾಜರಾಗಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವಿ.ಶಂಕರ್ ಹಾಗೂ ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಡಿ.ಆರ್.ಮಂಜುನಾಥ್ ಅವರಿಗೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ನರಸಿಂಹಯ್ಯ ಎಂಬುವರು ಸೇರಿದಂತೆ ಮೂವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮತ್ತು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.
ನರಸಿಂಹಯ್ಯ ಎಂಬುವರ ಜಮೀನಿನ ನೋಂದಣಿ ಮಾಡಿಕೊಡುವಂತೆ ಹೈಕೋರ್ಟ್ ನೀಡಿದ್ದ ಆದೇಶ ಜಾರಿಗೊಳಿಸಿಲ್ಲ ಎಂಬ ಆರೋಪದಡಿ ಈ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲಾಗಿದೆ.
Next Story





