Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಲಾರ: 24 ಗಂಟೆಯೊಳಗೆ ಫ್ಲೆಕ್ಸ್,...

ಕೋಲಾರ: 24 ಗಂಟೆಯೊಳಗೆ ಫ್ಲೆಕ್ಸ್, ಬ್ಯಾನರ್ ತೆರವು: ಜಿಲ್ಲಾಧಿಕಾರಿ ಜಿ.ಸತ್ಯವತಿ

ಚುನಾವಣೆ ನೀತಿ ಸಂಹಿತೆ ಜಾರಿ

ವಾರ್ತಾಭಾರತಿವಾರ್ತಾಭಾರತಿ27 March 2018 10:26 PM IST
share
ಕೋಲಾರ: 24 ಗಂಟೆಯೊಳಗೆ ಫ್ಲೆಕ್ಸ್, ಬ್ಯಾನರ್ ತೆರವು: ಜಿಲ್ಲಾಧಿಕಾರಿ ಜಿ.ಸತ್ಯವತಿ

ಕೋಲಾರ,ಮಾ.27  ಕರ್ನಾಟಕ ವಿಧಾನಸಭಾ ಚುನಾವಣೆ-2018 ರ ದಿನಾಂಕ ಪ್ರಕಟವಾಗಿದ್ದು, ಈ ಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. 24 ಗಂಟೆಯೊಳಗೆ ಹೆದ್ದಾರಿ ಫಲಕಗಳು ಪ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲಾಗುವುದು ಹಾಗೂ ರಾಜಕೀಯ ವ್ಯಕ್ತಿಗಳ ಭಾವಚಿತ್ರಗಳು ಹಾಗೂ ಮಾಹಿತಿಯನ್ನು ವೆಬ್‍ಸೈಟ್‍ಗಳಿಂದ ತೆಗೆದುಹಾಕುವಂತೆ ಸೂಚಿಸಲಾಗುವುದು ಎಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿ.ಸತ್ಯವತಿಯವರು ತಿಳಿಸಿದರು.

ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್-17, 2018 ರಿಂದ ನಾಮಪತ್ರ ಸಲ್ಲಿಕೆ, ಏಪ್ರಿಲ್-24, 2018 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎಪ್ರೀಲ್ 25, 2018 ರಂದು ನಾಮಪತ್ರಗಳ ಪರಿಶೀಲನೆ, ಏಪ್ರಿಲ್ 27, 2018 ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದು, ಮೇ 12, 2018 ರಂದು ಮತದಾನ ನಡೆದು ಮೇ 15, 2018 ಕ್ಕೆ ಮತ ಏಣಿಕೆ ನಡೆಯಲಿದ್ದು, ಎಲ್ಲಾ ಚುನಾವಣಾ ಪ್ರಕ್ರಿಯೆಗಳು ಮೇ 18, 2018 ರೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ನೀತಿ ಸಂಹಿತೆ ಜಾರಿಯಾಗಿರುವುದರಿಂದ ಚುನಾಯಿತ ಸಂಸ್ಥೆಗಳ ಅಧ್ಯಕ್ಷರು, ನಿಗಮ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ವಾಹನಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಜಿಲ್ಲೆಯ 20 ಕಡೆ ಚೆಕ್‍ಪೋಸ್ಟ್ ಸ್ಥಾಪಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಫ್ಲಯಿಂಗ್ ಸ್ಕ್ವಾಡ್‍ನ 3 ತಂಡಗಳಾಗಿ ಜಿಲ್ಲೆಗೆ ಒಟ್ಟು 48 ತಂಡಗಳನ್ನು ರಚಿಸಲಾಗುವುದು. 24*7 ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ದೂರವಾಣಿ ಸಂಖ್ಯೆಯನ್ನು ಇಂದು ಸಂಜೆಯೊಳಗೆ ಚುನಾವಣಾ ಆಯೋಗವು ನೀಡಲಿದೆ ಎಂದರು.

ಕೋಲಾರದಲ್ಲಿ ಒಟ್ಟು 11,83,967 ಜನ ಮತದಾರರಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 1 ಮತಗಟ್ಟೆಗೆ 1200 ಜನ ಮತದಾರರು, ನಗರ ಪ್ರದೇಶಕ್ಕೆ 1 ಮತಗಟ್ಟೆಗೆ 1400 ಜನ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಗಳನ್ನು ವೆಚ್ಚ ಸೂಕ್ಷ್ಮ ಕ್ಷೇತ್ರಗಳೆಂದು ಪರಿಗಣಿಸಲಾಗಿದ್ದು, ಈ ಕ್ಷೇತ್ರಗಳಿಗೆ ಪ್ರತ್ಯೇಕ ವೆಚ್ಚ ವೀಕ್ಷಕರನ್ನು ನೇಮಿಸಲಾಗುವುದು ಎಂದು ತಿಳಿಸಿದರು.

ಯಾವುದೇ ವ್ಯಕ್ತಿಯು 50 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು ದಾಖಲೆ ಇಲ್ಲದೆ ತೆಗೆದುಕೊಂಡು ಹೋಗುವಂತಿಲ್ಲ. ಒಬ್ಬ ಅಭ್ಯರ್ಥಿಯು ಚುನಾವಣಾ ವೆಚ್ಚವಾಗಿ 28 ಲಕ್ಷದವರೆಗೆ ಖರ್ಚು ಮಾಡಬಹುದಾಗಿದೆ. ಯಾವುದೇ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಎಂ.ಸಿ.ಎಂ.ಸಿ ಕಮಿಟಿಯಿಂದ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕೆ.ವಿದ್ಯಾಕುಮಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X