Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಎಸ್‌ಇ...

ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಎಸ್‌ಇ 10ನೇ ತರಗತಿಯ ಗಣಿತ, 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳಲ್ಲಿ ಮರುಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ28 March 2018 7:17 PM IST
share
ಪ್ರಶ್ನೆಪತ್ರಿಕೆ ಸೋರಿಕೆ: ಸಿಬಿಎಸ್‌ಇ 10ನೇ ತರಗತಿಯ ಗಣಿತ, 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳಲ್ಲಿ ಮರುಪರೀಕ್ಷೆ

ಹೊಸದಿಲ್ಲಿ,ಮಾ.28: ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳಲ್ಲಿ ಮರುಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯು ನಿರ್ಧರಿಸಿದೆ.

ಕೆಲವೆಡೆ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವ ವರದಿಗಳನ್ನು ಮಂಡಳಿಯು ಗಂಭೀರವಾಗಿ ಪರಿಗಣಿಸಿದೆ. ಪರೀಕ್ಷೆಗಳ ಪಾವಿತ್ರವನ್ನು ಎತ್ತಿ ಹಿಡಿಯುವ ಮತ್ತು ವಿದ್ಯಾರ್ಥಿಗಳಿಗೆ ನ್ಯಾಯದ ಹಿತಾಸಕ್ತಿಯ ದೃಷ್ಟಿಯಿಂದ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳಲ್ಲಿ ಮರುಪರೀಕ್ಷೆಗಳನ್ನು ನಡೆಸಲು ನಿರ್ಧರಿಸ ಲಾಗಿದೆ. ಮರುಪರೀಕ್ಷೆಯ ದಿನಾಂಕಗಳು ಮತ್ತು ಇತರ ವಿವರಗಳನ್ನು ಮುಂದಿನ ವಾರ ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಬುಧವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯು ಮಂಗಳವಾರ ರಾತ್ರಿ ಸೋರಿಕೆಯಾಗಿದ್ದು, ಅದು ಅಸಲಿ ಪ್ರಶ್ನೆಪತ್ರಿಕೆಯನ್ನು ಹೋಲುತ್ತಿದೆ. 12ನೇ ತರಗತಿಯ ಅರ್ಥಶಾಸ್ತ್ರ ಪರೀಕ್ಷೆಯು ಮಂಗಳವಾರ ನಡೆದಿದ್ದರೆ 10ನೇ ತರಗತಿಯ ಗಣಿತ ಪರೀಕ್ಷೆಯು ಬುಧವಾರ ನಡೆದಿದೆ ಎಂದು ಮೂಲಗಳು ತಿಳಿಸಿದವು.

ಇದಕ್ಕೂ ಹಿಂದಿನ ಅಧಿಕೃತ ಹೇಳಿಕೆಯಲ್ಲಿ ಸಿಬಿಎಸ್‌ಇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವುದನ್ನು ನಿರಾಕರಿಸಿತ್ತು.

ಮಂಗಳವಾರ ಅರ್ಥಶಾಸ್ತ್ರ ಪರೀಕ್ಷೆಯು ಆರಂಭಗೊಳ್ಳುವ ಕೆಲವೇ ನಿಮಿಷಗಳಿಗೆ ಮೊದಲು ಸೋರಿಕೆಯಾದ ಪ್ರಶ್ನೆಪತ್ರಿಕೆಯು ದಿಲ್ಲಿ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಅವರ ಕೈಸೇರಿದ ಬಳಿಕ ಸೋರಿಕೆಯ ವಿಷಯವು ಬೆಳಕಿಗೆ ಬಂದಿತ್ತು. ಸಿಸೋದಿಯಾ ತಕ್ಷಣವೇ ಸಿಬಿಎಸ್‌ಇ ಮುಖ್ಯಸ್ಥರು ಮತ್ತು ಶಿಕ್ಷಣ ಕಾರ್ಯದರ್ಶಿ ಗಳಿಗೆ ದೂರವಾಣಿ ಕರೆಗಳನ್ನು ಮಾಡಿದ್ದು, ಪರಿಶೀಲಿಸಿದಾಗ ಸೋರಿಕೆಯಾದ ಪ್ರಶ್ನೆಪತ್ರಿಕೆಯು ಅಕೌಂಟ್ಸ್ ಪತ್ರಿಕೆಯ ಸೆಟ್-2ಕ್ಕೆ ತಾಳೆಯಾಗಿತ್ತು.

  ತನ್ಮಧ್ಯೆ ಸಿಬಿಎಸ್‌ಇ ದೂರಿನಂತೆ ದಿಲ್ಲಿ ಪೊಲೀಸರು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಠಿಣ ಕ್ರಮಕ್ಕೆ ಪ್ರಧಾನಿ ಸೂಚನೆ

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ ಜಾವಡೇಕರ್ ಅವರೊಂದಿಗೆ ಮಾತನಾಡಿದ್ದು, ಈ ಬಗ್ಗೆ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

 ಸಿಬಿಎಸ್‌ಇ 10ನೇ ತರಗತಿಯ ಗಣಿತ ಮತ್ತು 12ನೇ ತರಗತಿಯ ಅರ್ಥಶಾಸ್ತ್ರ ವಿಷಯಗಳಲ್ಲಿ ಮರುಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ ಬೆನ್ನಿಗೇ ಮೋದಿಯವರ ಈ ನಿರ್ದೇಶ ಹೊರಬಿದ್ದಿದೆ.

ದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾವಡೇಕರ್ ಅವರು, ಪ್ರಶ್ನೆಪತ್ರಿಕೆಗಳ ಸೋರಿಕೆ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ತಿಳಿಸಿದರು.

ಕೆಲವು ಸಂಘಟಿತ ಗ್ಯಾಂಗ್‌ಗಳು ಪರೀಕ್ಷೆಗಳಲ್ಲಿ ಇಂತಹ ಅವ್ಯವಹಾರಗಳ ಹಿಂದಿವೆ ಎಂದ ಅವರು, ತಪ್ಪಿಸತಸ್ಥರನ್ನು ಶೀಘ್ರವೇ ಗುರುತಿಸಿ ಬಂಧಿಸಲಾಗುವುದು ಎಂದರು.

ಪ್ರಶ್ನೆಪತ್ರಿಕೆಗಳ ಸೋರಿಕೆಯನ್ನು ತಡೆಯಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಗೆ ಸಂಪುಟವು ಸಮ್ಮತಿ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೊಳ್ಳಲಿದೆ ಎಂದೂ ಜಾವಡೇಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X