ಉಡುಪಿ: ಎಸೆಸೆಲ್ಸಿ ಪರೀಕ್ಷೆ; 270 ಮಂದಿ ಗೈರು
ಉಡುಪಿ, ಮಾ.28: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಎಸೆಸೆಲ್ಸಿಯ ದ್ವಿತೀಯ ಭಾಷಾ ಪರೀಕ್ಷೆಯಲ್ಲಿ 270 ಮಂದಿ ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿರುವ 13,597 ರೆಗ್ಯುಲರ್ ಹಾಗೂ ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 204 ಮಂದಿ ಗೈರುಹಾಜರಾ ದರೆ, ಖಾಸಗಿಯಾಗಿ ಪರೀಕ್ಷೆಗೆ ಕುಳಿತ 445 ಮಂದಿಯಲ್ಲಿ 66 ಮಂದಿ ಪರೀಕ್ಷೆಗೆ ಹಾಜರಾಗಲಿಲ್ಲ. ಜಿಲ್ಲೆಯ ಎಲ್ಲಿಂದಲೂ ಯಾವುದೇ ಅವ್ಯವಹಾರ, ಅಕ್ರಮಗಳು ವರದಿಯಾಗಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Next Story





