Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೀರಶೈವ-ಲಿಂಗಾಯತ ಒಂದೇ, ಭಿನ್ನಾಭಿಪ್ರಾಯ...

ವೀರಶೈವ-ಲಿಂಗಾಯತ ಒಂದೇ, ಭಿನ್ನಾಭಿಪ್ರಾಯ ಬೇಡ: ಅಖಿಲ ಭಾರತ ವೀರಶೈವ ಮಹಾಸಭಾ ಮುಖಂಡ ಪಿ. ರುದ್ರೇಶ್

ವಾರ್ತಾಭಾರತಿವಾರ್ತಾಭಾರತಿ28 March 2018 9:17 PM IST
share

ಶಿವಮೊಗ್ಗ, ಮಾ.28: ವೀರಶೈವ- ಲಿಂಗಾಯತ ಒಂದೇ. ಈ ಕುರಿತಂತೆ ಯಾವುದೇ ಭಿನ್ನಾಭಿಪ್ರಾಯ, ಗೊಂದಲ ಬೇಡ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮುಖಂಡ ಪಿ. ರುದ್ರೇಶ್ ಅಭಿಪ್ರಾಯಪಟ್ಟಿದ್ದಾರೆ. 

ಬುಧವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವೀರಶೈವ - ಲಿಂಗಾಯತ ದೇಹ-ಪ್ರಾಣವಿದ್ದಂತೆ. ದೇಹದ ಹೊರತಾಗಿ ಪ್ರಾಣ ಹಾಗೂ ಪ್ರಾಣದ ಹೊರತಾಗಿ ದೇಹವಿರಲು ಸಾಧ್ಯವಿಲ್ಲ ಎಂಬುವುದನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ' ಎಂದು ತಿಳಿಸಿದ್ದಾರೆ. 

ಪ್ರಸ್ತುತ ನಡೆಯುತ್ತಿರುವ ವಿದ್ಯಮಾನಗಳು ತಮಗೆ ತೀವ್ರ ಬೇಸರ ಉಂಟು ಮಾಡಿದೆ. ಈ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ. ಇದರಿಂದ ಮತ್ತಷ್ಟು ಗೊಂದಲ ಉಂಟಾಗುತ್ತದೆಯೇ ವಿನಃ ಪರಿಸ್ಥಿತಿ ತಿಳಿಯಾಗುವುದಿಲ್ಲ. ಈ ಕಾರಣದಿಂದ ಸಮಾಜದ ಮುಖಂಡರು ಒಟ್ಟಿಗೆ ಕುಳಿತು ಸಮಾಲೋಚನೆ ನಡೆಸಬೇಕು. ಪ್ರಸ್ತುತ ಉಂಟಾಗಿರುವ ಗೊಂದಲ ತಿಳಿಪಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಸಮಾಜ ವಿಘಟನೆಯಾದರೆ ಯಾರಿಗೂ ಲಾಭವಿಲ್ಲ. ಒಗ್ಗಟ್ಟಿನಿಂದ ಮುನ್ನಡೆದರೆ ಮಾತ್ರ ಏನಾದರೂ ಸಾಧನೆ ಸಾಧ್ಯ. ಪ್ರಸ್ತುತ ಉಂಟಾಗಿರುವ ಗೊಂದಲದಿಂದ ಸಮಾಜ ಬಾಂಧವರ ಮನಸ್ಸಿಗೆ ನೋವುಂಟು ಮಾಡಿದೆ. ಗೊಂದಲಕ್ಕೀಡಾಗಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. 

ಉದ್ಘಾಟನಾ ಸಮಾರಂಭ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ನೂತನ ಕಟ್ಟಡಕ್ಕೆ ಮಾ.31ರ ಮಧ್ಯಾಹ್ನ 12.15ಕ್ಕೆ ನವುಲೆಯ ಕುವೆಂಪುನಗರ ಜೋಡಿ ರಸ್ತೆಯ 2ನೇ ತಿರುವಿನಲ್ಲಿರುವ ನಿವೇಶನದಲ್ಲಿ ಭೂಮಿ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ್ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸೂಡಾದಿಂದ ಮಂಜೂರಾಗಿರುವ ಸಿಎ ನಿವೇಶನದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ. ಮೂರು ಅಂತಸ್ತಿನ ಈ ಕಟ್ಟಡದಲ್ಲಿ ಕಚೇರಿ, ಗ್ರಂಥಾಲಯ, ಸಾಂಸ್ಕøತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ವಿಶಾಲವಾದ ಸಭಾಂಗಣ ಮತ್ತು 5 ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದರು.

ರಂಭಾಪುರಿ ಮಠದ ಶ್ರೀ ಜಗದ್ಗುರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ತೊಗರ್ಸಿಯ ಶ್ರೀ ಮಹಾಂತ ದೇಶಿಕೇಂದ್ರ ಶಿವಾ ಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಸಂಸದ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಶಾಸಕರಾದ ಬಿ.ವೈ.ರಾಘವೇಂದ್ರ, ಕೆ.ಬಿ.ಪ್ರಸನ್ನಕುಮಾರ್, ಆರ್.ಪ್ರಸನ್ನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಕೈಗಾರಿಕೋದ್ಯಮಿ ಬಿ.ಸಿ.ನಂಜುಂಡಶೆಟ್ಟಿ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಬಿ.ಕೆ.ಸಂಗಮೇಶ್ವರ್, ಮೇಯರ್ ನಾಗರಾಜ್ ಕಂಕಾರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ನಿರಂಜನ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಎ.ಆರ್.ವೀರಭದ್ರಪ್ಪ, ಸಿ.ಎಂ.ಪಂಚಾಕ್ಷರಯ್ಯ, ಪಿ.ರುದ್ರೇಶ್, ಸಿ.ಮಹೇಶ್ ಮೂರ್ತಿ, ಸಿ.ಹೆಚ್.ಚಂದ್ರಶೇಖರಪ್ಪ, ಸಿ.ಲೋಕೇಶ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X