Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮೂಹಿಕ ವಿವಾಹ ಬಡವರಿಗೆ ವರದಾನವಾಗಲಿದೆ:...

ಸಾಮೂಹಿಕ ವಿವಾಹ ಬಡವರಿಗೆ ವರದಾನವಾಗಲಿದೆ: ನಟಿ ಮಾಲಾಶ್ರೀ

ವಾರ್ತಾಭಾರತಿವಾರ್ತಾಭಾರತಿ28 March 2018 11:32 PM IST
share
ಸಾಮೂಹಿಕ ವಿವಾಹ ಬಡವರಿಗೆ ವರದಾನವಾಗಲಿದೆ: ನಟಿ ಮಾಲಾಶ್ರೀ

ಚಿಕ್ಕಮಗಳೂರು, ಮಾ.28: ಸರಳ ಸಾಮೂಹಿಕ ವಿವಾಹಗಳು ಗ್ರಾಮೀಣ ಪ್ರದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು. ನಗರ ಪ್ರದೇಶಗಳಲ್ಲೂ ಇಂತಹ ಮದುವೆಗಳಾದಾಗ ಅನಗತ್ಯ ಖರ್ಚುಗಳನ್ನು ತಡೆಗಟ್ಟಲು ಸಾಧ್ಯವಿದೆ ಎಂದು ಚಲನಚಿತ್ರ ನಟಿ ಮಾಲಾಶ್ರಿ ಹೇಳಿದರು. 

ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ ಆಶ್ರಯ ಸಾಮಜಿಕ ಸೇವಾ ಸಂಸ್ಥೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದ ಅವರು, ಶ್ರೀಮಂತರು, ಬಡವರೆಂಬ ಬೇಧವನ್ನು ಬದಿಗೊತ್ತಿ ಸರಳ ರೀತಿಯಲ್ಲಿ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು. ಸರಳ ರೀತಿಯ ಮದುವೆಯಿಂದ ಬಡವರಿಗೆ ವರದಾನವಾಗಲಿದೆ. ಇಂತಹ ಮದುವೆಗಳು ಸಮಾಜದಲ್ಲಿ ಇನ್ನಷ್ಟು ಹೆಚ್ಚಾದಾಗ ಹೆಣ್ಣು ಹೆತ್ತವರಿಗೆ ಮಗಳ ಮದುವೆಯ ಬಗ್ಗೆ ಹೆಚ್ಚು ಕಷ್ಟ ಉಂಟಾಗಲಾರದು ಎಂದು ತಿಳಿಸಿದರು. 

ನೂತನ ವಧು-ವರರು ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಒಂದು ಮಗು ಸಾಕೆನ್ನುವ ತೀರ್ಮಾನಕ್ಕೆ ಬಂದಿದ್ದೀರಿ. ಒಂದೇ ಮಗು ಸಾಕೆಂದು ಸುಮ್ಮನಿದ್ದರೆ ಕುಟುಂಬದ ಬೆಳವಣಿಗೆಗೆ ಕಷ್ಟಕರವಾಗಬಹುದು. ಹಾಗಾಗಿ 2 ಮ್ಕಕಳು ಬೇಕೆನ್ನುವ ನಿರ್ಧಾರಕ್ಕೆ ಬನ್ನಿ ಎಂದು ನೂತನ ವದುವರರಿಗೆ ಮಾಲಾಶ್ರೀ ಕಿವಿಮಾತು ಹೇಳಿದರು. 

ಪ್ರಮಾಣವಚನ ಸ್ವೀಕಾರ:
ಮದುವೆ ಶುಭಗಳಿಗೆಯಲ್ಲಿ ಪರಸ್ಪರ ದಂಪತಿಯಾಗಿರುವ ನಾವು, 2 ದೇಹದ ಒಂದೇ ಜೀವಿಯಂತೆ ಅನ್ಯೂನತೆಯಿಂದ ಬಾಳುತ್ತೇವೆ. ಇಂದಿನಿಂದ ಎಲ್ಲಾ ಸುಖ ದುಖಃಗಳಲ್ಲಿ ಸಮಭಾಗಿಗಳಾಗುತ್ತೇವೆ. ಸರಳ ಮದುವೆ ಮೂಲಕ ಯಾವುದೇ ರೀತಿಯ ಆರ್ಥಿಕ ಹೊರೆಯಾಗದಂತೆ ವಿವಾಹ ಮಾಡಿಕೊಂಡಿರುವ ನಾವುಗಳು, ಇತರರಿಗೆ ಮಾದರಿಯಾಗಿ ಸರಳ ಮದುವೆಯಾಗುವಂತೆ ಪ್ರೋತ್ಸಾಹಿಸುತ್ತವೆ. ದೇಶದ ಸಂವಿಧನದಲ್ಲಿ ನಂಬಿಕೆಯುಳ್ಳವವರಾಗಿ ಆದರ್ಶ, ಜಾತ್ಯಾತೀತ, ಸಹೋದರತೆ, ಸಮಾನತೆ ಸಹಕಾರಕ್ಕಾಗಿ ಶ್ರಮಿಸುತ್ತೇವೆ. ಮಹನೀಯದರಾದ ಬುದ್ದ, ಬಸವ, ಅಂಬೇಡ್ಕರ್ ಕುವೆಂಪು ಅವರ ಸಮಾನತೆಯ ಚಿಂತನೆ ಜೀವನದಲ್ಲಿ ಅಳವಡಿಸಿಕೊಂಡು ಬಾಳುತ್ತೇವೆ ಎಂದು ವದುವರರಿಗೆ ಕಾರ್ಯಕ್ರಮದ ಆಯೋಜಕ ಎಂ.ಎಸ್.ಅನಂತ್ ಪ್ರಮಾಣವಚನ ಭೋಧಿಸಿದರು.

ಇದಕ್ಕೂ ಮುನ್ನ 19 ಜೋಡಿಗಳಿಗೆ ಚಿತ್ರನಟಿ ಮಾಲಾಶ್ರೀ ಮಾಂಗಲ್ಯ ವಿತರಿಸಿದರು. ಪ್ರಾರಂಭದಲ್ಲಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ 19 ಜೋಡಿ ವದೂವರರು ಪೂಜೆ ಸಲ್ಲಿಸಿ, ನಂತರ ವಾಧ್ಯದೊಂದಿಗೆ ಮೆರವಣಿಗೆ ಮೂಲಕ ಮೂಹೂರ್ತ ನಡೆಯುವ ಸ್ಥಳ ಅಡ್ಯಂತಾಯ ರಂಗಮಂದಿರಕ್ಕೆ ಆಗಮಿಸಿದರು.

ಸಾಮೂಹಿಕ ವಿವಾಹಕ್ಕೂ ತಟ್ಟಿದ ನೀತಿ ಸಂಹಿತೆಯ ಬಿಸಿ: ಮಾ.27ರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಸಾಮೂಹಿಕ ವಿವಾಹಕ್ಕೆ ಕೆಲ ಅಡೆತಡೆಗಳು ಎದುರಾದವು. 17 ವರ್ಷದಿಂದ ಸರಳ ಸಾಮೂಹಿಕ ವಿವಾಹ ಆಯೋಜಿಸಿಕೊಂಡು ಬಂದಿದ್ದ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಅವರು, ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ. ಕೊನೆ ಕ್ಷಣದಲ್ಲಿ ಬೂರಿ ಭೋಜನವನ್ನು ಕೈಬಿಟ್ಟು, ಸರಳ ರೀತಿಯಲ್ಲಿ ಊಟದ ವ್ಯವಸ್ಥೆ ಮಾಡಲಾಯಿತು. ರಾಜಕಾರಣಿಗಳು ಮದುವೆ ಕಾರ್ಯದಿಂದ ದೂರ ಉಳಿಯುವಂತಾಯಿತು. ಪೊಲೀಸರ ಕಣ್ಗಾವಲಿನಲ್ಲಿ ಮದುವೆ ಕಾರ್ಯ ಯಶಸ್ವಿಯಾಗಿ ನಡೆಯಿತು. 

ಜಿ.ಪಂ. ಸದಸ್ಯ ಪ್ರಭಾಕರ್, ತಾ.ಪಂ. ಸದಸ್ಯ ದೇವರಾಜು, ಪ.ಪಂ. ಅಧ್ಯಕ್ಷೆ ರಮೀಜಾಭಿ, ಸದಸ್ಯರಾದ ಪಾರ್ವತಮ್ಮ, ಸುಲೋಚನಾ, ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಬಿ.ಎಸ್.ಜಯರಾಂ, ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಇಬ್ರಾಹಿಂ, ಆಶ್ರಯ ಸಾಮಜಿಕ ಸೇವಾ ಸಂಸ್ಥೆ ಕಾರ್ಯದರ್ಶಿ ಹೊಸಕೆರೆ ರಮೇಶ್, ನಿದೇರ್ಶಕರಾದ ನಯನ ಮೋಟಮ್ಮ, ಎಂ.ಎಸ್.ಅನಂತ್, ಮುಖಂಡರಾದ ಬಿ.ಎಂ.ಶಂಕರ್, ವೆಂಕಟರಾಮ್, ಚೇತನಾ ಸಗುನಯ್ಯ, ಎನ್.ಆರ್.ನಾಗರತ್ನ, ಅಕ್ರಮ್ ಹಾಜಿ, ಎಂ.ಎಂ.ಲಕ್ಷ್ಮಣ್‍ಗೌಡ, ಹೇಮಶೇಖರ್, ಹಾಲಯ್ಯ, ಲೋಕವಳ್ಳಿ ರಮೇಶ್, ಬಕ್ಕಿ ಮಂಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X