Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಶ್ರಯ ಮನೆ ಹಂಚಿಕೆಯಲ್ಲಿ ಭಾರೀ ಗೋಲ್...

ಆಶ್ರಯ ಮನೆ ಹಂಚಿಕೆಯಲ್ಲಿ ಭಾರೀ ಗೋಲ್ ಮಾಲ್: ಆರೋಪ

ವಾರ್ತಾಭಾರತಿವಾರ್ತಾಭಾರತಿ29 March 2018 9:47 PM IST
share
ಆಶ್ರಯ ಮನೆ ಹಂಚಿಕೆಯಲ್ಲಿ ಭಾರೀ ಗೋಲ್ ಮಾಲ್: ಆರೋಪ

ಮೈಸೂರು,ಮಾ.29: ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ  ಆಶ್ರಯ ಮನೆ ಹಂಚಿಕೆಯಲ್ಲಿ ಭಾರೀ ಗೋಲ್ ಮಾಲ್ ನಡೆದಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪಿಸಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು 6 ಕೋಟಿ. ರೂ. ಹಣ ದುರುಪಯೋಗವಾಗಿದೆ ಎಂದು ದಾಖಲೆ ಸಹಿತ ಹಗರಣವನ್ನು ಬಯಲಿಗೆಳೆದರು. ಚುನಾವಣೆ ಘೋಷಣೆ ಬೆನ್ನಲ್ಲೇ ರಾತ್ರೋರಾತ್ರಿ ಆಶ್ರಯ ಮನೆಗಳ ಮಂಜೂರಾತಿ ಪತ್ರ ವಿತರಣೆ ಮಾಡಲಾಗಿದೆ. ಹಗರಣದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ. ಸೋಮಶೇಖರ್ ನೇರ ಭಾಗಿಯಾಗಿದ್ದಾರೆ ಎಂದು ಸೋಮಶೇಖರ್ ವಿರುದ್ಧ ಮಾಜಿ ಸಚಿವ ರಾಮದಾಸ್ ಗಂಭೀರ ಆರೋಪ ಮಾಡಿದರು. 

ಆಶ್ರಯ ಮನೆಗಳ ಮಂಜೂರಾತಿ ಪತ್ರಗಳನ್ನು ಹಣಕ್ಕೆ ಮಾರಿಕೊಳ್ಳುವ ಮೂಲಕ ಶಾಸಕರು ಚುನಾವಣೆ ಖರ್ಚಿಗೆ ಹಣ ವಸೂಲಿಗೆ ಇಳಿದಿದ್ದಾರೆ. ಈಗಾಗಲೇ 1.40 ಕೋಟಿ ಹಣವನ್ನು ಲಂಚ ರೂಪದಲ್ಲಿ ಪಡೆಯಲಾಗಿದೆ ಎಂದು ಆರೋಪಿಸಿದರು.

ಇದಲ್ಲದೆ ಆಶ್ರಯ ಸಮಿತಿ ಸದಸ್ಯರಿಗೆ, ಶಾಸಕರ ಆಪ್ತ ಸಹಾಯಕರಿಗೆ, ಶಾಸಕರ ಮಾಲೀಕತ್ವದ ಗ್ಯಾಸ್ ಏಜೆನ್ಸಿಯ ವ್ಯವಸ್ಥಾಪಕರ ಸಂಬಂಧಿಗಳಿಗೆ ಅಕ್ರಮವಾಗಿ ಆಶ್ರಯ ಮನೆ ಹಂಚಿಕೆಯಾಗಿರುವುದು ದಾಖಲೆಗಳಿಂದ ಬಹಿರಂಗವಾಗಿದೆ. ಮನೆ ಮಂಜೂರಾತಿ ಪತ್ರ ವಿತರಣೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಈ ಕುರಿತು ಶಾಸಕ ಎಂ.ಕೆ. ಸೋಮಶೇಖರ್ ವಿರುದ್ಧ ಎಸಿಬಿ ಗೆ ದೂರು ನೀಡಿ ಸೂಕ್ತ ತನಿಖೆಗೆ ಒತ್ತಾಯಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನ ಮಂತ್ರಿ ಆವಾಜ್ ಯೋಜನೆಯ ವಾಜಪೇಯಿ ನಗರೋತ್ಥಾನ ಯೋಜನೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಮೈಸೂರಿನ ಕೆಆರ್, ಎನ್ ಆರ್, ಚಾಮರಾಜ ಕ್ಷೇತ್ರದಲ್ಲಿ ಕೇಂದ್ರದ ಗೃಹ ನಿರ್ಮಾಣದ ಇಲಾಖೆಯ ಮಾನದಂಡ ವಿರುದ್ಧವಾಗಿ ಮನೆ ಹಂಚಿಕೆ ಮಾಡಲು ಮುಂದಾಗಿದ್ದಾರೆ. ಶಾಸಕರ ಆಪ್ತರು ಹಣ ವಸೂಲಿ ಮಾಡಿ ಮನೆ ಮಂಜೂರಾತಿ ಮಾಡುತ್ತಿದ್ದಾರೆ. ಈಗಾಗಲೇ 7 ಕೋಟಿಗೂ ಹೆಚ್ಚು ಹಣವನ್ನು ವಸೂಲಿ ಮಾಡಿ ಬಡವರಿಗೆ ಅನ್ಯಾಯ ಮಾಡಿದ್ದಾರೆ. ಈ ಹಗರಣಕ್ಕೆ  ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಜೋಗಿ ಮಂಜು, ರಾಜೇಂದ್ರ, ವಡಿವೇಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X