ಕಾಂಗ್ರೆಸ್ ಪಕ್ಷದಿಂದ ಶಾಸಕ ಮಾಲೀಕಯ್ಯ ಗುತ್ತೇದಾರ್ ಉಚ್ಚಾಟನೆ

ಬೆಂಗಳೂರು, ಮಾ.29: ಅಪಜಲಪುರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ಅಫಜಲಪುರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲೀಕಯ್ಯ ಗುತ್ತೇದಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ, ಪಕ್ಷ ಸೇರುವ ಕುರಿತು ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಮಾತನಾಡಿದ್ದರು.
ಪಕ್ಷ ವಿರೋಧಿ ಧೋರಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
Next Story