ಬೆಂಗಳೂರು: ಪಿಜಿ ಮಾಲಕ ಆತ್ಮಹತ್ಯೆ

ಬೆಂಗಳೂರು,ಮಾ.29: ನಗರದ ಕುರುಬರಹಳ್ಳಿಯ ಜ್ಞಾನಜ್ಯೋತಿ ಪಿಜಿ ಮಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ನಗರದ ಕುರುಬರಹಳ್ಳಿ ಮುಖ್ಯ ರಸ್ತೆಯಲ್ಲಿರುವ ಜ್ಯೋತಿ ಪಿಜಿ ಮಾಲಕ ಆಂಧ್ರಪ್ರದೇಶ ಮೂಲದ ಸಂತೋಷ್(30) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಬುಧವಾರ ರಾತ್ರಿ ಪಿಜಿಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂತೋಷ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೋಲಿಸರು ತಿಳಿಸಿದ್ದಾರೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





