Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ವಿಧಾನಸಭಾ ಚುನಾವಣೆ ಕುರಿತು...

ಮಡಿಕೇರಿ: ವಿಧಾನಸಭಾ ಚುನಾವಣೆ ಕುರಿತು ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ29 March 2018 11:04 PM IST
share
ಮಡಿಕೇರಿ: ವಿಧಾನಸಭಾ ಚುನಾವಣೆ ಕುರಿತು ಮಾಹಿತಿ ಕಾರ್ಯಾಗಾರ

ಮಡಿಕೇರಿ, ಮಾ.29: ವಿಧಾನಸಭಾ ಚುನಾವಣೆ ಸಂಬಂಧ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಕಾರ್ಯ ಚಟುವಟಿಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡುವ ಕಾರ್ಯಗಾರವು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರಮುಖರು ಹಾಗೂ ಪತ್ರಕರ್ತರಿಗೆ ಪ್ರತ್ಯೇಕವಾಗಿ ನಡೆಯಿತು.  

ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್ ಜೊತೆಗೆ ಮತದಾನ ಮಾಡಿರುವುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್ ಬಳಕೆಗೆ ಬಂದಿದೆ. ವಿವಿಪ್ಯಾಟ್‍ನಿಂದ ಮತದಾರರು ತಮ್ಮ ಮತವನ್ನು ಯಾರಿಗೆ ಚಲಾಯಿಸಲಾಗಿದೆ ಎಂಬುದನ್ನು ಖಾತರಿ ಪಡಿಸಿಕೊಳ್ಳಬಹುದಾಗಿದೆ.  ವಿವಿ ಪ್ಯಾಟ್ ಕಾರ್ಯನಿರ್ವಹಣೆ, ಮತದಾನ ಆರಂಭ, ಮುಕ್ತಾಯ, ಒಟ್ಟು ಅಭ್ಯರ್ಥಿಗಳು, ಮತದಾನವಾಗಿರುವುದು, ಅಭ್ಯರ್ಥಿಗಳು ಪಡೆದ ಮತಗಳು ಹೀಗೆ ಹಲವು ಮಾಹಿಯನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಲಾಯಿತು. 

ವಿವಿಪ್ಯಾಟ್ ಮೂಲಕ ಮತದಾರರು ತಾನು ಚಲಾಯಿಸಿದ ಮತವನ್ನು ಏಳು ಸೆಕೆಂಡುಗಳ ಕಾಲ ವೀಕ್ಷಿಸಬಹುದಾಗಿದೆ. ವಿವಿಪ್ಯಾಟ್ ಏಳು ಬಗೆಯ ಸೆನ್ಸಾರ್ ಗಳನ್ನು ಒಳಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು. 

ಚುನಾವಣೆ ಸಂದರ್ಭದಲ್ಲಿ ಮತದಾನಕ್ಕೆ ಮೊದಲು ಎಲ್ಲಾ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಅಣಕು ಮತದಾನ ಮಾಡಲಾಗುತ್ತದೆ. ಯಾವುದೇ ಸಂದೇಹವಿದ್ದರೂ ಮತಯಂತ್ರ ಬದಲಾಯಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಮಾದರಿ ನೀತಿ ಸಂಹಿತೆ ಸಂಬಂಧಿಸಿದಂತೆ ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಸಮಿತಿಯ ಗಮನಕ್ಕೆ ತಂದು ಪ್ರಕಟಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಯಾವುದೇ ಜಾಹೀರಾತುಗಳು ವೈಯಕ್ತಿಕ, ಪ್ರಚೋದಾನ್ಮಾತಕ ಅಥವಾ ಧಾರ್ಮಿಕ ನಿಂದನಾ ಬರಹಗಳನ್ನು ಒಳಗೊಂಡಿರಬಾರದು. ಆ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಆಯೋಜಿಸಲಾಗುತ್ತದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ 18 ವರ್ಷ ಪೂರ್ಣಗೊಂಡಿರುವವರು, ತಮ್ಮ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ.ಚಿದ್ವಿಲಾಸ್ ಅವರು ಜಾಹೀರಾತುಗಳ ದೃಢೀಕರಣ ಸಂಬಂಧ ವಿಳಂಬ ಮಾಡಬಾರದು ಎಂದು ಕೋರಿದರು.  

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸಬೇಕಿದೆ ಎಂದು ಸಲಹೆ ನೀಡಿದರು.      

ಪತ್ರಕರ್ತರಾದ ಅನಿಲ್ ಎಚ್.ಟಿ.ಐತಿಚಂಡ ರಮೇಶ್ ಉತ್ತಪ್ಪ, ಸವಿತಾ ರೈ, ಆನಂದ್ ಕೊಡಗು ಇತರರು ಚುನಾವಣಾ ಜಾಹೀರಾತು, ಸಂದರ್ಶನ ಮತ್ತಿತರ ಬಗ್ಗೆ ಮಾಹಿತಿ ಪಡೆದರು.  

ರಾಜಕೀಯ ಪಕ್ಷಗಳ ಪ್ರಮುಖರಾದ ಸಜಿಲ್ ಕೃಷ್ಣ, ತನ್ನೇರಾ ಮೈನಾ, ಪ್ರೇಮಕುಮಾರ್ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಕಾರ್ಯ ಚಟುವಟಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾಹಿತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X