Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ...

ಕೇಂದ್ರ, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ : ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 March 2018 7:11 PM IST
share
ಕೇಂದ್ರ, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ : ಎಚ್.ಡಿ. ಕುಮಾರಸ್ವಾಮಿ

ಜಗಳೂರು,ಮಾ.31:ರೈತರೇ, ಜನಸಾಮಾನ್ಯರೇ ನೀವು ಈ ಚುನಾವಣೆಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಭವಿಷ್ಯ ನಿರ್ಧರಿಸಲಿದೆ. ಆದ್ದರಿಂದ ರೈತಸ್ನೇಹಿ ಪ್ರಾದೇಶಿಕ ಪಕ್ಷ ಜೆಡಿಎಸ್ ಬೆಂಬಲಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಶನಿವಾರ ಪಟ್ಟಣದ ಬಿಇಓ ಕಚೇರಿ ಆವರಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಕುಮಾರ ಪರ್ವ' ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಪಕ್ಷಕ್ಕೆ ಒಮ್ಮೆ ಅವಕಾಶ ನೀಡಿದರೆ ರೈತರು ಹಾಗೂ ಜನಸಾಮಾನ್ಯರ ಬಾಳು ಅಸನು ಮಾಡುವುದರ ಮೂಲಕ, ಪ್ರತಿಯೊಂದು ಸೌಲಭ್ಯಗಳು ನಿಮ್ಮ ಮನೆ ಬಾಗಿಲಿಗೆ ತಲುಪುವಂತೆ ಮಾಡುತ್ತೇನೆ. ಕಳೆದ 12 ವರ್ಷಗಳಿಂದ ರಾಷ್ಟ್ರೀಯ ಪಕ್ಷಗಳಿಗೆ ಅವಕಾಶ ನೀಡಿದ್ದೀರಿ. ಅವರು ಹೇಗೆ ಆಡಳಿತ ನಡೆಸಿದ್ದಾರೆ ಎಂಬುದು ನಿಮಗೆ ತಿಳಿದಿದೆ. ರಾಜ್ಯಾದ್ಯಂತ ಪ್ರಧಾನಿ ಮೋದಿ, ಅಮಿತ್ ಶಾ, ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಮಾಡುವ ಮೂಲಕ ಒಬ್ಬರನ್ನೊಬ್ಬರು ಬೈಯ್ಯುವಂತ ಕೆಲಸದಲ್ಲೇ ಮಗ್ನರಾಗಿದ್ದಾರೆ ವಿನಹ ರೈತ ಪರ ಒಬ್ಬರಿಗೂ ಕಾಳಜಿ ಇಲ್ಲ ಎಂದರು.

ನಾನೂ 20 ತಿಂಗಳ ಕಾಲ ಮುಖ್ಯಮಂತ್ರಿಯಾದಾಗ ಅಲ್ಪ ಅವಧಿಯಲ್ಲಿ ಹಲವಾರು ಯೋಜನೆ ಜಾರಿಗೆ ತಂದಿದ್ದೇನೆ. ಕಳೆದ 4 ವರ್ಷಗಳಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು ಇದನ್ನು ಮನಗಂಡ ನಾವು ರೈತರ ಸಾಲ ಮನ್ನಾ ಮಾಡುವಂತೆ ಹೋರಾಟ ಮಾಡಿದ್ದರಿಂದ ಎಚ್ಚೆತ್ತುಕೊಂಡ ಸರಕಾರ 50 ಸಾವಿರ ರೂ. ವರೆಗೆ ಸಾಲ ಮನ್ನಾ ಮಾಡಿ 9 ತಿಂಗಳು ಕಳೆದರು ಸಹ ಸಂಪೂರ್ಣವಾಗಿ ಹಣ ಬಿಡುಗಡೆಯಾಗಿಲ್ಲ. ಇನ್ನು 6 ಕೋಟಿ 50 ಲಕ್ಷ ರು. ಬಿಡುಗಡೆಯಾಗಬೇಕು. ನಾನೂ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಎರಡೂವರೆ ಸಾವಿರ ಕೋಟಿ ಸಾಲ ಮನ್ನಾ ಮಾಡಿ 20 ಗಂಟೆಯಲ್ಲಿ ಹಣ ಬಿಡುಗಡೆ ಮಾಡಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದರು.

30 ಜಿಲ್ಲೆಗಳಲ್ಲಿ ವಾರ್ಷಿಕ ಮಳೆಗನುಗುಣವಾಗಿ ಬಿತ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಕ್ಕೆ ಬಂದು 6 ತಿಂಗಳ ಅವಧಿಯಲ್ಲಿ ರೈತರಿಗೆ 24 ಗಂಟೆಗಳ ಕಾಲ ವಿದ್ಯುತ್ ನೀಡಲಾಗುವುದು, 70  ವರ್ಷ ದಾಟಿದ ಪ್ರತಿಯೊಬ್ಬರಿಗೂ ತಿಂಗಳಿಗೆ 5 ಸಾವಿರ ಮಾಶಾಸನ, ವಿಧವೆ ಹಾಗೂ ಅಂಗವಿಕಲರಿಗೆ 2 ಸಾವಿರ ರು. ಮಾಶಾಸನ ನೀಡಲಾಗುವುದು. ಅಪೌಷ್ಠಿಕತೆಯಿಂದ ಬಳಲುವ ಗರ್ಭೀಣಿ ಮಹಿಳೆಯರಿಗೆ ಗರ್ಭಧರಿಸಿ 6 ತಿಂಗಳ ನಂತರ ಹಾಗೂ ಮಗು ಹುಟ್ಟಿ 3 ತಿಂಗಳ ಕಾಲ ಮಾಸಿಕವಾಗಿ 5 ಸಾವಿರ ನೀಡಲಾಗುವುದು, ನೀರಾವರಿ ಸೌಲಭ್ಯ ನೀಡಲಾಗುವುದು ಎಂದರು.

ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಮಾತನಾಡಿ, ತಾಲೂಕಿನಲ್ಲಿ ರೈತರು ಬೆಳೆದ ಮೆಕ್ಕೆ ಜೋಳ ಬೆಳೆಗೆ ಸೈನಿಕ ಹುಳು ಹಾವಳಿಯಾದ ಸಂದರ್ಭ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ರವರು ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದ್ದರು. ಪ್ಲೋರೈಡ್ ಮುಕ್ತ ನೀರನ್ನು ಒದಗಿಸಲು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು 65 ಕೊಟಿ ರೂ. ವೆಚ್ಚದ ಯೋಜನೆಗೆ ಮುಂಜೂರಾತಿ ನೀಡಿದ್ದರು. ಆದರೆ, 12 ವರ್ಷ ಕಳೆದರೂ ನಮ್ಮನ್ನಾಳುವ ಜನಪ್ರತಿ ನಿಧಿಗಳು ಇಚ್ಛಾಶಕ್ತಿಯ ಕೊರತೆಯಿಂದ ಈ ಯೋಜನೆ ಜಾರಿಗೆ ಬಂದಿಲ್ಲ ಎಂದರು.

ತಾಲೂಕು ಅಧ್ಯಕ್ಷ ಗುರುಸಿದ್ದಪ್ಪ, ಮಾಹಿಳಾ ಘಟಕದ ಅಧ್ಯಕ್ಷೆ ಸುನಂದಮ್ಮ, ಮುಖಂಡ ದೇವೇಂದ್ರಪ್ಪ, ಉಸ್ಮಾನ್ ಅಲಿ ,ಲಕ್ಷಣ, ಹನುಮಂತಪ್ಪ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X