Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆ.ಎಸ್.ಈಶ್ವರಪ್ಪಗೆ ಶಿವಮೊಗ್ಗದ ಟಿಕೆಟ್...

ಕೆ.ಎಸ್.ಈಶ್ವರಪ್ಪಗೆ ಶಿವಮೊಗ್ಗದ ಟಿಕೆಟ್ : ಪ್ರಥಮ ಬಾರಿಗೆ ಬಹಿರಂಗ ಸ್ಪಷ್ಟನೆ ನೀಡಿದ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ31 March 2018 8:19 PM IST
share
ಕೆ.ಎಸ್.ಈಶ್ವರಪ್ಪಗೆ ಶಿವಮೊಗ್ಗದ ಟಿಕೆಟ್ : ಪ್ರಥಮ ಬಾರಿಗೆ ಬಹಿರಂಗ ಸ್ಪಷ್ಟನೆ ನೀಡಿದ ಯಡಿಯೂರಪ್ಪ

ಶಿವಮೊಗ್ಗ, ಮಾ. 31: ತಮ್ಮ ಬಲಗೈ ಭಂಟ ಎಸ್.ರುದ್ರೇಗೌಡರನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಸರತ್ತು ನಡೆಸಿ ವಿಫಲವಾಗಿರುವ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರವರು, ಕೆ.ಎಸ್.ಈಶ್ವರಪ್ಪರೇ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 

ಶನಿವಾರ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಟಿಕೆಟ್ ಆಕಾಂಕ್ಷಿಯಾಗಿರುವ ಪಕ್ಷದ ಜಿಲ್ಲಾಧ್ಯಕ್ಷರಾದ ಎಸ್.ರುದ್ರೇಗೌಡರನ್ನು ಮುಂಬರುವ ದಿನಗಳಂದು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ. 

ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕೆ.ಎಸ್.ಈಶ್ವರಪ್ಪ ಹಾಗೂ ಎಸ್.ರುದ್ರೇಗೌಡ ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಬಿ.ಎಸ್.ಯಡಿಯೂರಪ್ಪರವರು ಕೆ.ಎಸ್.ಈಶ್ವರಪ್ಪಗೆ ಈ ಬಾರಿ ಟಿಕೆಟ್ ನೀಡದಿರುವ ನಿರ್ಧಾರ ಕೈಗೊಂಡಿದ್ದರು. ವರಿಷ್ಠರ ಬಳಿ ಎಸ್.ರುದ್ರೇಗೌಡ ಪರವಾಗಿ ಬ್ಯಾಟಿಂಗ್ ನಡೆಸಿದ್ದರು. 

ತಮಗೆ ಟಿಕೆಟ್ ಕೈ ತಪ್ಪಿಸಲು ಬಿಎಸ್‍ವೈ ಮತ್ತವರ ಬೆಂಬಲಿಗರು ನಡೆಸುತ್ತಿದ್ದ ತಂತ್ರಕ್ಕೆ ಪ್ರತಿಯಾಗಿ ಕೆಎಸ್‍ಇ ಕೂಡ ಪ್ರತಿ ತಂತ್ರ ರೂಪಿಸಿದ್ದರು. ಶಿವಮೊಗ್ಗದಿಂದ ಟಿಕೆಟ್ ಖಚಿತಪಡಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದ್ದರು. ವರಿಷ್ಠರ ಹಂತದಲ್ಲಿ ಲಾಬಿ ನಡೆಸಿದ್ದರು. ಕಳೆದ ವರ್ಷ ಬಿಎಸ್‍ವೈ ವಿರುದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿಕೊಂಡು ಬಹಿರಂಗ ಸಮರ ಕೂಡ ಸಾರಿದ್ದರು. 

ಟಿಕೆಟ್‍ಗೆ ಸಂಬಂಧಿಸಿದಂತೆ ಬಿಎಸ್‍ವೈ ಹಾಗೂ ಕೆಎಸ್‍ಇ ನಡುವೆ ನಡೆಯುತ್ತಿದ್ದ ಕಲಹದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರವರೇ ಮಧ್ಯ ಪ್ರವೇಶಿಸಿ ಶಿವಮೊಗ್ಗದ ಅಭ್ಯರ್ಥಿ ಆಯ್ಕೆಯ ಜವಾಬ್ದಾರಿ ತಮಗೆ ಸೇರಿದ್ದೆಂದು ಹೇಳಿದ್ದರು. ಪಕ್ಷದಲ್ಲಿನ ಹಿರಿತನದ ಆಧಾರದ ಮೇಲೆ ಕೆಎಸ್‍ಇಗೆ ಟಿಕೆಟ್ ನೀಡಲು ಅಮಿತ್ ಶಾ ತೀರ್ಮಾನಿಸಿದ್ದರು. 

ಇತ್ತೀಚೆಗೆ ಶಿವಮೊಗ್ಗ ನಗರಕ್ಕೆ ಅಮಿತ್ ಶಾ ಭೇಟಿ ನೀಡಿದ್ದ ವೇಳೆ ಬಿಎಸ್‍ವೈ ಹಾಗೂ ಕೆಎಸ್‍ಇ ಜೊತೆ ಗುಪ್ತ ಸಮಾಲೋಚನೆ ನಡೆಸಿದ್ದರು. ಈಶ್ವರಪ್ಪಗೆ ಟಿಕೆಟ್ ನೀಡುವ ನಿರ್ಧಾರ ಪ್ರಕಟಿಸಿ, ಒಟ್ಟಾಗಿ ಚುನಾವಣೆ ಎದುರಿಸುವಂತೆ ತಿಳಿ ಹೇಳಿದ್ದರು ಎಂಬ ಮಾಹಿತಿ ಹರಿದಾಡುತ್ತಿತ್ತು. ಇದೀಗ ಸ್ವತಃ ಬಿಎಸ್‍ವೈರವರು ಕೆಎಸ್‍ಇ ಸ್ಪರ್ಧೆ ದೃಢಪಡಿಸುವ ಮೂಲಕ ಟಿಕೆಟ್ ಫೈಟ್‍ಗೆ ಅಂತಿಮ ತೆರೆ ಎಳೆದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X