ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಸಿ.ಅಶ್ವಥ್ ನೇಮಕ
ಬೆಂಗಳೂರು, ಮಾ.31: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಈ ಕೂಡಲೆ ಜಾರಿಗೆ ಬರುವಂತೆ ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ.ಅಶ್ವಥ್‌ರನ್ನು ನೇಮಕ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ನಿಲುವುಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಸಮರ್ಥಿಸಿಕೊಂಡು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಶ್ವಥ್‌ಗೆ ದೇವೇಗೌಡ ಹಾರೈಸಿದ್ದಾರೆ.
Next Story





