ಬಂಟ್ವಾಳ: ಹಾಲು ಸಾಗಾಟದ ಟ್ಯಾಂಕರ್ ಪಲ್ಟಿ
ಚಾಲಕನಿಗೆ ಗಾಯ
.jpg)
ಬಂಟ್ವಾಳ, ಮಾ. 31: ಹಾಲು ಸಾಗಾಟದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನೆಟ್ಲಮುಡ್ನೂರು ಗ್ರಾಮದ ಕುಕ್ಕರಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ.
ಪುತ್ತೂರುನಿಂದ ಮಂಗಳೂರು ಕಡೆಗೆ ಹಾಲು ಸಾಗಾಟದ ಟ್ಯಾಂಕರ್ ಕುಕ್ಕರಬೆಟ್ಟು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಟ್ಯಾಂಕರ್‌ನಲ್ಲಿದ್ದ ಇನ್ನೋರ್ವ ವ್ಯಕ್ತಿ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಪಲ್ಟಿಯಾದ ಟ್ಯಾಂಕರಿನಲ್ಲಿದ್ದ ಹಾಲನ್ನು ಇನ್ನೊಂದು ಟ್ಯಾಂಕರ್‌ಗೆ ವರ್ಗಾವಣೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
Next Story





