ಪುತ್ತೂರು: ಸಂಪ್ಯ ಹೆದ್ದಾರಿಯಲ್ಲಿ ಅಪಘಾತ; ಯುವ ವಕೀಲೆ ಮೃತ್ಯು

ಪುತ್ತೂರು, ಮಾ. 31: ಸಂಪ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಮೃತರನ್ನು ಮಂಗಳೂರಿನ ಯುವ ವಕೀಲೆ ಗಾಯತ್ರಿ ಎಂದು ಗುರುತಿಸಲಾಗಿದೆ.
ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು ಬಸ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
Next Story





