Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರದೇಶ: ಮೇಲ್ಜಾತಿಯವರ ಪ್ರದೇಶದಲ್ಲಿ...

ಉ.ಪ್ರದೇಶ: ಮೇಲ್ಜಾತಿಯವರ ಪ್ರದೇಶದಲ್ಲಿ ದಲಿತ ಯುವಕನ ವಿವಾಹ ಮೆರವಣಿಗೆಗೆ ಅವಕಾಶವಿಲ್ಲ

ಪತ್ರ ಬರೆದರೂ ಸ್ಪಂದಿಸಿಲ್ಲ ಆದಿತ್ಯನಾಥ್, ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ1 April 2018 8:20 PM IST
share
ಉ.ಪ್ರದೇಶ: ಮೇಲ್ಜಾತಿಯವರ ಪ್ರದೇಶದಲ್ಲಿ ದಲಿತ ಯುವಕನ ವಿವಾಹ ಮೆರವಣಿಗೆಗೆ ಅವಕಾಶವಿಲ್ಲ

ಲಕ್ನೋ, ಎ.1: ಪಶ್ಚಿಮ ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ಬಸಾಯ್ ಬಬಾಸ್ ಗ್ರಾಮದ ದಲಿತ ಯುವಕನೊಬ್ಬನ ವಿವಾಹ ಮೆರವಣಿಗೆಯನ್ನು ಠಾಕೂರ್ ಪ್ರಾಬಲ್ಯದ ಪ್ರದೇಶದಲ್ಲಿ ಒಯ್ಯಲು ಅವಕಾಶ ನಿರಾಕರಿಸಿದ ಘಟನೆ ನಡೆದಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಸೇರಿದಂತೆ ಸರ್ಕಾರದ ಎಲ್ಲ ಅಧಿಕಾರಿಗಳಿಗೆ ಪತ್ರ ಬರೆದಿರುವ ದಲಿತ ಯುವಕ, ಇದೀಗ ನೆರವಿಗಾಗಿ ಮಾಧ್ಯಮದ ಮೊರೆ ಹೋಗಿದ್ದಾರೆ. ಠಾಕೂರ್ ಪ್ರಾಬಲ್ಯದ ಪ್ರದೇಶದಲ್ಲಿ ತನ್ನ ವಿವಾಹ ಮೆರವಣಿಗೆಯನ್ನು ನಡೆಸಲು ಅನುಮತಿ ನೀಡುವಂತೆ ಕೋರಿದ್ದರೂ, ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ.

ವಿವಾಹಕ್ಕೆ 20 ದಿನ ಬಾಕಿ ಇದ್ದು ಸರ್ಕಾರದ ಕಡೆಯಿಂದ ಯಾವ ಸ್ಪಂದನೆಯೂ ದೊರಕಿಲ್ಲ. ಕುಮಾರ್ ಇದೀಗ ಸರ್ಕಾರವನ್ನು ತನ್ನ ಸಂವಿಧಾನಾತ್ಮಕ ಹಕ್ಕುಗಳ ಬಗ್ಗೆ ಪ್ರಶ್ನಿಸಿದ್ದಾರೆ. "ನಾನು ಹಿಂದೂ ಅಲ್ಲವೇ? ಹೌದಾದರೆ ಹಿಂದುತ್ವ ಸರ್ಕಾರದ ಆಡಳಿತದಲ್ಲಿ ಇತರ ಹಿಂದೂಗಳಿಗೆ ನೀಡುವ ಹಕ್ಕನ್ನು ನನಗೇಕೆ ನೀಡುವುದಿಲ್ಲ?" ಎಂದು ಪ್ರಶ್ನಿಸಿದ್ದಾರೆ.

ತಾಲೂಕು ಅಭಿವೃದ್ಧಿ ಮಂಡಳಿ ಸದಸ್ಯರೂ ಆಗಿರುವ ಕುಮಾರ್, "ನಾನು ಹಾಗಾದರೆ ಹಿಂದೂ ಅಲ್ಲವೇ.. ಒಂದೇ ಸಂವಿಧಾನದಡಿ ಜೀವಿಸುವ ಜನರಿಗೆ ಪ್ರತ್ಯೇಕ ನಿಯಮಾವಳಿ ಸಾಧ್ಯವಿಲ್ಲ" ಎಂದು ಪ್ರತಿಪಾದಿಸಿದ್ದಾರೆ.

ಮಾರ್ಚ್ 15ರಂದು ಕುಮಾರ್, ನ್ಯಾಯ ಕೋರಿ ಅಲಹಾಬಾದ್ ಹೈಕೋರ್ಟ್‍ನಲ್ಲಿ ಮನವಿ ಸಲ್ಲಿಸಿದ್ದರು. ಇದಾದ ಬಳಿಕ ಕಾಸ್‍ಗಂಜ್ ಜಿಲ್ಲಾಧಿಕಾರಿ ಆರ್.ಪಿ.ಸಿಂಗ್ ಹಾಗೂ ಪೊಲೀಸ್ ಅಧೀಕ್ಷಕ ಪಿಯೂಶ್ ಶ್ರೀವಾಸ್ತವ, ನಿಜಾಮಾಬಾದ್‍ಗೆ ಭೇಟಿ ನೀಡಿದ್ದರು. ಕುಮಾರ್ ವಿವಾಹ ಮೆರವಣಿಗೆಗೆ ಅನುಮತಿ ಕೋರಿರುವ ಮಾರ್ಗವನ್ನು ಪರಿಶೀಲಿಸಿದ್ದರು.

ಅನುಮತಿ ಕೋರಿರುವ ರಸ್ತೆ ಅಗಲ ಕಿರಿದಾಗಿದ್ದು, ಚರಂಡಿ ಹಾಗೂ ಕಸದ ರಾಶಿಯಿಂದ ತುಂಬಿದೆ ಆದ್ದರಿಂದ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸಿಂಗ್ ಹೇಳಿದ್ದರು. ಜತೆಗೆ ಈ ಹಿಂದೆ ಈ ಮಾರ್ಗವಾಗಿ ಯಾವ ದಲಿತರ ವಿವಾಹ ಮೆರವಣಿಗೆಯೂ ನಡೆದಿಲ್ಲ ಎಂದು ಪ್ರತಿಪಾದಿಸಿದ್ದರು. ಬಳಿಕ ಇತರ ದಲಿತರು ಮೆರವಣಿಗೆ ಕೈಗೊಳ್ಳುವ ಮಾರ್ಗದಲ್ಲೇ ಮೆರವಣಿಗೆ ನಡೆಸುವಂತೆ ಸಲಹೆ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X