ಬಾಗೇಪಲ್ಲಿ: ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ
![ಬಾಗೇಪಲ್ಲಿ: ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ ಬಾಗೇಪಲ್ಲಿ: ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ](https://www.varthabharati.in/sites/default/files/images/articles/2018/04/2/suicide.jpg)
ಬಾಗೇಪಲ್ಲಿ,ಎ.02: ಜೀವನದಲ್ಲಿ ಜಿಗುಪ್ಸೆಗೊಂಡ ಗೃಹಿಣಿಯೊಬ್ಬಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹೊರವಲಯದ ಟಿ.ಬಿ.ಕ್ರಾಸ್ನಲ್ಲಿ ಭಾನುವಾರ ಮುಂಜಾನೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯನ್ನು ಡಾಭಾ ರಂಗಪ್ಪ ರವರ ಪತ್ನಿ ಲಲಿತಮ್ಮ(42) ಎಂದು ಗುರುತಿಸಲಾಗಿದೆ.
ಮೃತಪಟ್ಟಿರುವ ಲಲಿತಮ್ಮ ಭಾನುವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೃತ ಮಹಿಳೆಯ ಪತಿ ರಂಗಪ್ಪ ಪಟ್ಟಣದ ಟಿ.ಬಿ.ಕ್ರಾಸ್ನಲ್ಲಿ ಹೋಟಲ್ ನಡೆಸುತ್ತಿದ್ದರು.
ಈ ಸಂಬಂಧ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಬೇಟಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಯಾವುದೆ ನಿಖರವಾದ ಕಾರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Next Story