ಅಜ್ಜರಕಾಡು: ‘ಮಹಿಳೆ -ಆರೋಗ್ಯ’ ಅರಿವು ಕಾರ್ಯಕ್ರಮ

ಉಡುಪಿ, ಎ.2: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಹಿಳಾ ದೌರ್ಜನ್ಯ ನಿಯಂತ್ರಣ ಸಮಿತಿ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಾಮಾಜ ಕಾರ್ಯ ವಿಭಾಗ ಹಾಗೂ ಕಲ್ಯಾಣಪುರ ಗೊರೆಟ್ಟಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇತ್ತೀಚೆಗೆ ಅಜ್ಜರಕಾಡು ಕಾಲೇಜಿನಲ್ಲಿ ನಡೆಯಿತು.
ಗೊರೆಟ್ಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ರಾಜಲಕ್ಷ್ಮೀ ಮಹಿಳೆಯರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳು, ಕಾರಣಗಳು ಮತ್ತು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿ ಸಂವಾದ ನಡೆಸಿದರು. ರಾಷ್ಟ್ರೀಯ ಮಹಿಳಾ ಆಯೋಗದ ನಿರ್ದೇಶನದಂತೆ ಮಹಿಳಾ ಹಕ್ಕುಗಳ ಬಗ್ಗೆ ನಡೆಸಿದ ಕಾಲೇಜು ಮಟ್ಟದ ಲಿಖಿತ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸ ಲಾಯಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ವಹಿಸಿದ್ದರು. ಮಹಿಳಾ ದೌರ್ಜನ್ಯ ನಿಯಂತ್ರಣ ಸಮಿತಿಯ ಸಂಚಾಲಕಿ ಜಯಮಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಸ್ಪತ್ರೆಯ ಸಮಾಜ ಕಾರ್ಯಕರ್ತ ರಾಕೇಶ್ ಉಪಸ್ಥಿತರಿದ್ದರು. ಕಾಡೇಶ್ ಸ್ವಾಗತಿಸಿದರು. ರಶ್ಮಿ ವಂದಿಸಿದರು. ನೀಲ ಕಾರ್ಯಕ್ರಮ ನಿರೂಪಿಸಿದರು.





