Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪದ್ಮ ಭೂಷಣ ಸ್ವೀಕರಿಸಲು ಧೋನಿ ಹೇಗೆ...

ಪದ್ಮ ಭೂಷಣ ಸ್ವೀಕರಿಸಲು ಧೋನಿ ಹೇಗೆ ಬಂದರು ನೋಡಿ…

ಕ್ಯಾಪ್ಟನ್ ಕೂಲ್ ನ ಈ ಸ್ಟೈಲ್ ಗೆ ಮಾರುಹೋಗದವರೇ ಇಲ್ಲ

ವಾರ್ತಾಭಾರತಿವಾರ್ತಾಭಾರತಿ2 April 2018 8:51 PM IST
share
ಪದ್ಮ ಭೂಷಣ ಸ್ವೀಕರಿಸಲು ಧೋನಿ ಹೇಗೆ ಬಂದರು ನೋಡಿ…

ಹೊಸದಿಲ್ಲಿ, ಎ.2: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಹಲವು ಬಾರಿ ವಿಶ್ವ ಚಾಂಪಿಯನ್‌ಪಟ್ಟಕ್ಕೇರಿರುವ ಬಿಲಿಯರ್ಡ್ಸ್ ಪಟು ಪಂಕಜ್ ಅಡ್ವಾಣಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮ ಭೂಷಣ’ವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರಿಂದ ಸ್ವೀಕರಿಸಿದ್ದಾರೆ.

 ಧೋನಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಜಯಿಸಿ ಏಳು ವರ್ಷ ಪೂರೈಸಿದ ದಿನವೇ ಪ್ರತಿಷ್ಠಿತ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಸ್ವೀಕರಿಸಿದ್ದು ಪ್ರಾಸಂಗಿಕವಾಗಿತ್ತು. ಧೋನಿ 2011ರ ಎ.2 ರಂದು ಮುಂಬೈನಲ್ಲಿ ವಿಶ್ವಕಪ್‌ನ್ನು ಜಯಿಸಿದ್ದರು. ಈ ಮೂಲಕ ಭಾರತದ 28 ವರ್ಷಗಳ ವಿಶ್ವಕಪ್ ಕನಸು ಈಡೇರಿಸಿದ್ದರು.

ಗೌರವ ಲೆಫ್ಟಿನೆಂಟ್ ಕರ್ನಲ್ ಸಮವಸ್ತ್ರದಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಧೋನಿ ತನ್ನ ಹೆಸರು ಕರೆದಾಗ ಯೋಧನಂತೆಯೇ ನಡೆದುಕೊಂಡು ಹೋಗಿ ಪ್ರಶಸ್ತಿ ಸ್ವೀಕರಿಸಿದರು.

 ಭಾರತೀಯ ಭೂ ಸೇನೆ 2011ರ ನವೆಂಬರ್ 1 ರಂದು ಧೋನಿಗೆ ಲೆಫ್ಟಿನೆಂಟ್ ಕರ್ನಲ್ ಗೌರವ ರ್ಯಾಂಕ್ ನೀಡಿ ಗೌರವಿಸಿತ್ತು. ಭಾರತ ಎರಡನೇ ಬಾರಿ ವಿಶ್ವಕಪ್ ಜಯಿಸಿದ ಕೆಲವೇ ತಿಂಗಳ ಬಳಿಕ ಧೋನಿಗೆ ಈ ಗೌರವ ಲಭಿಸಿತ್ತು.

37ರ ಹರೆಯದ ಧೋನಿ ಅವರು ಕಪಿಲ್‌ದೇವ್ ಬಳಿಕ ಈ ಗೌರವಕ್ಕೆ ಪಾತ್ರರಾಗಿರುವ ಭಾರತದ ಎರಡನೇ ಕ್ರಿಕೆಟಿಗನಾಗಿದ್ದಾರೆ.

 ಧೋನಿ ಈತನಕ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 2008 ಹಾಗೂ 2009ರಲ್ಲಿ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ(ಎರಡು ಬಾರಿ ಈ ಗೌರವಕ್ಕೆ ಪಾತ್ರವಾದ ಮೊದಲ ಆಟಗಾರ)ಪ್ರಶಸ್ತಿಯನ್ನು ಪಡೆದಿದ್ದರು. 2007ರಲ್ಲಿ ರಾಜೀವ್ ಗಾಂಧಿ ಖೇಲ್‌ರತ್ನ ಪ್ರಶಸ್ತಿ ಹಾಗೂ 2009ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮ ಶ್ರೀ ಪ್ರಶಸ್ತಿಯನ್ನು ಜಯಿಸಿದ್ದರು.

 ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ 2006ರಲ್ಲಿ ದೋಹಾ ಹಾಗೂ 2010ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ್ದಾರೆ. ಈ ನಡುವೆ ಹಲವು ಬಾರಿ ವಿಶ್ವ ಚಾಂಪಿಯನ್ ಟ್ರೋಫಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಪುರುಷರ ಸಿಂಗಲ್ಸ್ ಶಟ್ಲರ್ ಕಿಡಂಬಿ ಶ್ರೀಕಾಂತ್, ಮಾಜಿ ಟೆನಿಸ್ ಆಟಗಾರ ಸೋಮ್‌ದೇವ್ ದೇವ್‌ವರ್ಮನ್, 2017ರ ವಿಶ್ವ ವೇಟ್‌ಲಿಫ್ಟಿಂಗ್ ಚಾಂಪಿಯನ್(48ಕೆಜಿ ವಿಭಾಗ)ಸೈಖೋಮ್ ಮಿರಾಬಾಯ್ ಚಾನು ಹಾಗೂ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಮುರಳೀಕಾಂತ್ ಪೇಟ್ಕರ್ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಶ್ರೀ ಅವಾರ್ಡ್‌ಗೆ ಭಾಜನರಾಗಿದ್ದಾರೆ.

#WATCH Billiards player Pankaj Advani and Cricketer MS Dhoni conferred with Padma Bhushan by President Ram Nath Kovind at Rashtrapati Bhawan in Delhi pic.twitter.com/XgPTHWsxBl

— ANI (@ANI) April 2, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X