Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಎಲೆಕ್ಷನ್ ಆಫಿಸ್‌ ಮಂಗಳೂರು...

ಕಾಂಗ್ರೆಸ್ ಎಲೆಕ್ಷನ್ ಆಫಿಸ್‌ ಮಂಗಳೂರು ದಕ್ಷಿಣ: ಚುನಾವಣಾ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 April 2018 8:53 PM IST
share
ಕಾಂಗ್ರೆಸ್ ಎಲೆಕ್ಷನ್ ಆಫಿಸ್‌ ಮಂಗಳೂರು ದಕ್ಷಿಣ: ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು, ಎ. 2: ವಿಧಾನಸಭೆ ಚುಣಾವಣೆಯ ಪ್ರಯುಕ್ತ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯ ಉದ್ಘಾಟನೆಯು ಸೋಮವಾರ ನಗರದ ಕದ್ರಿ ಮುಖ್ಯ ರಸ್ತೆಯಲ್ಲಿರುವ ಕಟ್ಟಡದಲ್ಲಿ ನೆರವೇರಿತು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಉದ್ಘಾಟನೆಯನ್ನು ನೆರವೇರಿಸಿದರು. ಕಾಂಗ್ರೆಸ್ ಪಕ್ಷವು ಅಭಿವೃದ್ಧಿಯ ನೆಲೆಯಲ್ಲಿ ಮತವನ್ನು ಯಾಚಿಸಲಿದೆ. ಕಳೆದ 5 ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಅನುದಾನ ನಮ್ಮ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಹರಿದು ಬಂದಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅನೇಕ ಭಾಗ್ಯಗಳನ್ನು ಬಡಜನತೆಗೆ ಒದಗಿಸಿಕೊಟ್ಟಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಜೆ.ಆರ್.ಲೋಬೊ ಅವರು ಕಳೆದ 20 ವರ್ಷಗಳಲ್ಲಿ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಮಾಡಲಾಗದ ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಆದರೆ ಬಿಜೆಪಿಯವರು ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಕಂಡು ಬೆರಗಾಗಿ ಅಪಪ್ರಚಾರವನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಇದು ಮತದಾರರ ಮುಂದೆ ನಡೆಯುವುದಿಲ್ಲ ಎಂದರು.

ಶಾಸಕ ಜೆ.ಆರ್.ಲೋಬೊ ಮಾತನಾಡಿ, ಕಳೆದ ನಾಲ್ಕುವರೆ ವರ್ಷಗಳಲ್ಲಿ ಸಾಕಷ್ಟು ಕೆಲಸಗಳು ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಗಿವೆ. ಮಂಗಳೂರು ನಗರದಲ್ಲಿ ಶಾಂತಿ ಇದೆ. ಜನರು ನೆಮ್ಮದಿಯಿಂದ ಇದ್ದಾರೆ. ಎಲ್ಲಾ ಧರ್ಮಗಳನ್ನು ಒಟ್ಟು ಸೇರಿಸಿ ಸಾಮರಸ್ಯದ ಬದುಕನ್ನು ಕಾಪಪಾಡಿಕೊಳ್ಳುವುದು ಮುಖ್ಯವಾಗಿದೆ. ಶಾಂತಿಯ ಮೂಲಕ ಬಂಡವಾಳಗಳನ್ನು ಆಕರ್ಷಿಸಿ, ಯುವಕ ಯುವತಿಯರಿಗೆ ಉದ್ಯೋಗ ಸೌಲಭ್ಯ ನೀಡಬಹುದು. ಇದರಿಂದ ಯುವಕರು ಹಾಗೂ ಯುವತಿಯರು ಪರವೂರಿಗೆ ಉದ್ಯೋಗಗಳನ್ನು ಹರಸಿ ಹೋಗುವುದನ್ನು ತಡೆಹಿಡಿಯಬಹುದು. ಮಂಗಳೂರು ನಗರದ ಪ್ರಮುಖ ಉದ್ಯಮ ಮೀನುಗಾರಿಕೆಗೆ ವಿಶೇಷವಾದ ಒತ್ತು ನೀಡಲಾಗಿದೆ. ಅದರೊಂದಿಗೆ ಬಂದರು ಅಭಿವೃದ್ಧಿಗೆ ಗಮನಹರಿಸಲಾಗಿದೆ. ಲಕ್ಷದ್ವೀಪದ ಜೊತೆಗೆ ವಾಣಿಜ್ಯ ಸಂಬಂಧವನ್ನು ಇನ್ನಷ್ಟು ಬೆಳೆಸಲು ಕ್ರಮ ಕೈಗೊಳ್ಳಲಾಗಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತಹ ಕಾರ್ಯಕ್ಕೆ ಮುಂದಾಗಬೇಕು. ಪ್ರತಿ ಬೂತ್ ನಲ್ಲಿ 25 ಜನ ಸದಸ್ಯರನ್ನು ನೇಮಿಸಿ, ಚುನಾವಣೆ ಎದುರಿಸಲು ಸದೃೃಢರಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಮಾಜಿ ಮುಖ್ಯ ಸಚೇತಕ ಕೆ.ಎಸ್. ಮುಹಮ್ಮದ್ ಮಸೂದ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿಗಳಾದ ಕಳ್ಳಿಗೆ ತಾರನಾಥ ಶೆಟ್ಟಿ, ನವೀನ್ ಡಿಸೋಜ, ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಭಾಸ್ಕರ್.ಕೆ., ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ಪಕ್ಷದ ಪ್ರಮುಖರಾದ ಶಶಿಧರ್ ಹೆಗ್ಡೆ, ಬಲರಾಜ್ ರೈ, ಪ್ರಭಾಕರ ಶ್ರೀಯಾನ್, ಪ್ರಸಾದ್ ರಾಜ್‌ಕಾಂಚನ್, ವಿನಯ ರಾಜ್, ಮಿಥುನ್ ರೈ, ಶಾಲೆಟ್ ಪಿಂಟೋ, ಅಶ್ರಫ್, ದೀಪಕ್ ಕುಮಾರ್, ಬಿನೂ ಅಬ್ದುಲ್ಲಾ, ಶೇಖರ್ ಸುವರ್ಣ, ಮೆರಿಲ್ ರೇಗೋ, ಅಪ್ಪಿ, ಹನೀಫ್ ಹಾಜಿ, ನಮಿತಾ ರಾವ್ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಮ್ ಸ್ವಾಗತಿಸಿದರು. ನಗರ ಬ್ಲಾಕ್‌ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ವಂದಿಸಿದರು. ರೋಹಿತ್ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X