Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಸ್ಥಳಗಳಲ್ಲಿ ಖಾಸಗಿ...

ಖಾಸಗಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿಯ ಅಗತ್ಯವಿಲ್ಲ: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ2 April 2018 9:00 PM IST
share
ಖಾಸಗಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿಯ ಅಗತ್ಯವಿಲ್ಲ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಎ. 2: ವಿಧಾನಸಭಾ ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮದುವೆ, ಹುಟ್ಟುಹಬ್ಬ ಆಚರಣೆ ಸೇರಿದಂತೆ ರಾಜಕೀಯ ಉದ್ದೇಶವಿಲ್ಲದ ಖಾಸಗಿ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಾಗಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಾದರೆ ಧ್ವನಿವರ್ಧಕ ಸೇರಿದಂತೆ ನಿಯಮಾನುಸಾರ ಪಡೆಯಬೇಕಾದ ಅನುಮತಿಗಳನ್ನು ಪಡೆಯಲೇಬೇಕು ಎಂದರು. ಅಲ್ಲದೆ, ಯಕ್ಷಗಾನ ಸೇರಿದಂತೆ ರಾಜಕೀಯೇತರ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರು ಸದರಿ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ನಡೆಸುತ್ತಿಲ್ಲ ಎಂದು ಡಿಕ್ಲರೇಷನನ್ನು ದಾಖಲೆಯೊಂದಿಗೆ ಚುನಾವಣಾಧಿಕಾರಿಗಳಿಗೆ ಅಥವಾ ಸ್ಥಳೀಯ ನಗರ ಸಂಸ್ಥೆ/ಗ್ರಾ.ಪಂ ಅಥವಾ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸಾರ್ವಜನಿಕ ಕಾರ್ಯಕ್ರಮಗಳಿಗೆ ತ್ವರಿತವಾಗಿ ಅನುಮತಿ ನೀಡಲು ಸಹಕಾರವಾಗುವಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಗವಾಕ್ಷಿ (ಸಿಂಗಲ್ ವಿಂಡೋ) ಕೊಠಡಿ ತೆರೆಯಲಾಗುವುದು. ಸಾರ್ವಜನಿಕರು ಅನುಮತಿ ಕೋರಿ ಜಿಲ್ಲಾಧಿಕಾರಿ ಕಚೇರಿಗೆ ಬರಬೇಕಾದ ಅಗತ್ಯವಿಲ್ಲ ಎಂದು ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗುವಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಗಮನಹರಿಸಬೇಕು. ಇದರಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್‌ಎಸ್‌ಟಿ ತಂಡಗಳು ಪರಿಣಾಮಕಾರಿಯಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮಾತನಾಡಿ, ಕಮಿಷನರೇಟ್ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಎಸಿಪಿ ದರ್ಜೆಯ ಅಧಿಕಾರಿಗಳನ್ನು ಪೊಲೀಸ್ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಚುನಾವಣಾ ನಿಯಮಗಳ ಕಟ್ಟುನಿಟ್ಟುನ ಜಾರಿಗೆ ಪ್ರತೀ ದಿನ ಪೊಲೀಸ್ ನೋಡಲ್ ಅಧಿಕಾರಿ ಮತ್ತು ಆಯಾ ಚುನಾವಣಾಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಆರ್. ರವಿಕಾಂತೇಗೌಡ ಮಾತನಾಡಿ, ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸರ್ಕಲ್ ಇನ್ಸ್‌ಪೆಕ್ಟರ್‌ಗಳಿಗೆ ಆಯಾ ಕ್ಷೇತ್ರದ ಭದ್ರತೆ ಉಸ್ತುವಾರಿ ನೀಡಲಾಗಿದೆ. ಫ್ಲೆಯಿಂಗ್ ಸ್ಕ್ವಾಡ್‌ಗಳಿಗೆ ಎಎಸ್‌ಐ ಹಾಗೂ ಎಸ್‌ಎಸ್‌ಟಿ ತಂಡಗಳಲ್ಲಿ ಹೆಡ್‌ಕಾನ್ಸ್‌ಟೇಬಲ್ ಇರಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೈಶಾಲಿ, ಡಿಸಿಪಿ ಹನುಮಂತರಾಯ, ಅಪರ ಎಸ್‌ಪಿ ಸಜೀತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X