Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇದಾರ-ಎ-ಫೈಝೆ ರಸೂಲ್ ಸಂಸ್ಥೆಯಿಂದ...

ಇದಾರ-ಎ-ಫೈಝೆ ರಸೂಲ್ ಸಂಸ್ಥೆಯಿಂದ ಮಾಂಕಾಳ್ ವೈದ್ಯರಿಗೆ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ2 April 2018 9:09 PM IST
share
ಇದಾರ-ಎ-ಫೈಝೆ ರಸೂಲ್ ಸಂಸ್ಥೆಯಿಂದ ಮಾಂಕಾಳ್ ವೈದ್ಯರಿಗೆ ಬೆಂಬಲ

ಭಟ್ಕಳ, ಎ. 2: ತಾಲೂಕಿನ ಇದಾರ-ಎ- ಫೈಝೆ ರಸೂಲ್ ಸಂಸ್ಥೆ ಈ ಬಾರಿಯ ಚುನಾವಣೆಯಲ್ಲಿ ಮಂಕಾಳ ವೈದ್ಯರನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ಸಂಘಟನೆ ಖಾಜಾ ಹಸನ್ ಕಲೈವಾಲಾ ತಿಳಿಸಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಇದಾರ-ಎ-ಫೈಝೆ ರಸೂಲ್ ಸಂಘಟನೆಯು ಸುನ್ನಿ, ದಖನಿ, ತಂಗರಕರ ಜನತೆಯ ಸಂಘಟನೆಯಾಗಿದ್ದು ಭಟ್ಕಳ ಮತದಾರ ಕ್ಷೇತ್ರದಲ್ಲಿ ಸಂಘಟನೆಯ ಹತ್ತು ಸಾವಿರಕ್ಕೂ ಹೆಚ್ಚು ಜನರಿದ್ದೇವೆ. ನಾವು ಈ ಬಾರಿ ಒಮ್ಮತದಿಂದ ಮಂಕಾಳ ವೈದ್ಯರು ಯಾವುದೇ ಪಕ್ಷದಲ್ಲಿ ನಿಂತರೂ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದೂ ಹೇಳಿದರು.

ಈ ಸಂದರ್ಭ ಮಾತನಾಡಿದ ಸಂಘಟನೆಯ ಪ್ರಮುಖ ಮುನೀರ್ ಅಹಮ್ಮದ್, ಮುಂದಿನ ಚುನಾವಣೆಯಲ್ಲಿ ನಾವು ಪಕ್ಷಾತೀತವಾಗಿ ಮಂಕಾಳ ವೈದ್ಯರಿಗೆ ಬೆಂಬಲ ನೀಡುತ್ತೇವೆ. ಈ ಹಿಂದೆ ಎಲ್ಲಾ ಚುನಾವಣೆಗಳಲ್ಲಿ ನಮ್ಮನ್ನು ಗಣನೆಗೆ ತೆಗೆದುಕೊಳ್ಳದೇ ಕೆಲವು ಸಂಘಟನೆಗಳು ತಾವೇ ಮುಸ್ಲಿಂ ಓಟುಗಳನ್ನು ಕೊಡಿಸುತ್ತೇವೆನ್ನುವಂತೆ ಪೋಸು ಕೊಡುತ್ತಿರುವುದು ಗಮನಕ್ಕೆ ಬಂದಿದೆ. ನಮ್ಮನ್ನು ಕಡೆಗಣಿಸಲಾಗುತ್ತಿರುವುದರಿಂದ ನಾವು ಈ ಬಾರಿ ಚುನಾವಣೆಯಲ್ಲಿ ನಮ್ಮದೇ ನಿರ್ಧಾರ ಕೈಗೊಂಡಿದ್ದೇವೆ ಒಂದು ಓಟು ಕೂಡಾ ಬೇರೆ ಯಾವುದೇ ಸಂಘಟನೆ ಹೇಳಿದರೆ ಹಾಕಲು ನಾವು ತಯಾರಿಲ್ಲ ಎಂದರು.

ಕಳೆದ ಐದು ವರ್ಷಗಳಲ್ಲಿ ಬಡವರ ಪರವಾಗಿ ಅತ್ಯಂತ ಉತ್ತಮ ಕೆಲಸವಾಗಿದೆ. ಶಾಸಕ ಮಂಕಾಳ ವೈದ್ಯ ಅವರು ಬಡವರ ಕಣ್ಣೀರು ಒರೆಸುವ ಮೂಲಕ ಮೂಲಭೂತ ಸೌಕರ್ಯಗಳನ್ನು ವದಗಿಸಿದ್ದಾರೆ. ಅನೇಕ ಮನೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವಿದ್ಯುತ್ ಇಲ್ಲದೇ ತೊಂದರೆಯಾಗಿತ್ತು. ಸಾವಿರಾರು ಮನೆಗಳಿಗೆ ವಿದ್ಯುತ್ ನೀಡಿದ ಅವರು ಮಕ್ಕಳ ಭವಿಷ್ಯ ಬರೆದಿದ್ದಾರೆ. ಬಡವರ ಪರವಾಗಿರುವ ಎಕೈಕ ಶಾಸಕ ಎಂದು ತೋರಿಸಿಕೊಟ್ಟ ಅವರಿಗೆ ನಮ್ಮ ಸಂಸ್ಥೆ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಫಾರೂಕಿ ಮಾತನಾಡಿ, ನಮ್ಮ ಸಂಸ್ಥೆಯು ರಾಜಕೀಯೇತರ ಸಂಸ್ಥೆಯಾಗಿದ್ದು ನಮ್ಮ ದೇಶದ ಸಂಸ್ಕೃತಿಯನ್ನು, ಸಾರಭೌಮತ್ವನ್ನು ಎತ್ತಿ ಹಿಡಿಯುವತ್ತ ನಮ್ಮ ಪ್ರಯತ್ನ ಸಾಗಿದೆ. ಶರಣರನ್ನು, ಸೂಫಿ ಸಂತರನ್ನು ಆರಾಧಿಸುವ ನಾವು ಸಮಾಜದ ಒಳಿತಿಗಾಗಿ ಶ್ರಮಿಸುತ್ತೇವೆ. ಈ ಚುನಾವಣೆಯಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಪಕ್ಷೇತರ ಅಭ್ಯರ್ಥಿ ನಿಲ್ಲಿಸಲು ಯೋಚಿಸಿದ್ದೆವು. ಆದರೆ ಅದನ್ನು ಕೈಬಿಟ್ಟು ನಮ್ಮ ಕ್ಷೇತ್ರದಲ್ಲಿ ಉತ್ತಮ, ಬಡವರ ಪರವಾಗಿ ಕೆಲಸ ಮಾಡಿದ, ಕ್ಷೇತ್ರದಲ್ಲಿ ಶಾಂತಿ ಕಾಪಾಡಲು ಶ್ರಮಿಸುತ್ತಿರುವ ಮಂಕಾಳ ವೈದ್ಯ ಅವರನ್ನು ಬೆಂಬಲಿಸಲು ಒಕ್ಕರಲ ತೀರ್ಮಾನ ಕೈಗೊಂಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅಬ್ದುಲ್ ಸತ್ತಾರ್, ಮೌಲಾನಾ ಮುಹಮ್ಮದ್ ಅಕ್ರಮಿ, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X