ಬಂಟ್ವಾಳ: ಎಸ್‌ಡಿಪಿಐ ವತಿಯಿಂದ ಚುನಾವಣಾ ಸಮಾಲೋಚನಾ ಸಭೆ
.jpeg)
ಬಂಟ್ವಾಳ, ಎ. 2: ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ವಲಯ ಮಟ್ಟದ ನಾಯಕರ ಸಮಾಲೋಚನಾ ಸಭೆಯು ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಾರ್ಯಕರ್ತರು ಮತ್ತು ನಾಯಕರು ಬೂತ್ ಮಟ್ಟವನ್ನು ಕೇಂದ್ರೀಕರಿಸಿ ವಿರೋಧಿ ಪಕ್ಷದ ಆಡಳಿತ ವೈಫಲ್ಯಗಳನ್ನು ಮತದಾರರಿಗೆ ಮುಟ್ಟಿಸಬೇಕು ಎಂದು ಹೇಳಿದರು.
ಬಂಟ್ವಾಳ ಕ್ಷೇತ್ರಕ್ಕೆ ಯುವ ಮತ್ತು ಉತ್ಸಾಹಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಮತದಾರರ ಒಲವು ಪಕ್ಷದ ಮೇಲಿದೆ ಎಂದರು.
ಈ ಸಂಧರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ, ಕ್ಷೇತ್ರ ಸಮಿತಿಯ ಅಧ್ಯಕ್ಷ ಶಾಹುಲ್ ಎಸ್.ಎಚ್, ಕಾರ್ಯದರ್ಶಿ ಇಸ್ಮಾಯಿಲ್ ಬಾವ, ಪುರಸಭಾ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ ಉಪಸ್ಥಿತರಿದ್ದರು.
Next Story





