ಪೆರ್ಡೂರು: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಹಿರಿಯಡ್ಕ, ಎ.2: ಹಿಂದುಳಿದ ಪ್ರದೇಶವಾಗಿದ್ದ ಪೆರ್ಡೂರು ಗ್ರಾಮದಲ್ಲಿ ಇದೀಗ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಮುಂದುವರಿಯಬೇಕಾದರೆ ಜನತೆಯ ಸಹಕಾರ ಅಗತ್ಯ ಎಂದು ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಪೆರ್ಡೂರು ಮಾಂಗಲ್ಯ ಸಭಾಭವನದಲ್ಲಿ ಸೋಮವಾರ ನಡೆದ ಕಾಪು ಕ್ಷೇತ್ರ ವ್ಯಾಪ್ತಿಯ ಪೆರ್ಡೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಪೆರ್ಡೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶ್ರೀಪಾದ್ ರೈ ಪಳಜೆ, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಮಾಜಿ ಮಂಡಲ ಪ್ರಧಾನ ಶಾಂತಾ ರಾಮ ಸೂಡ, ಕಾಪು ಕ್ಷೇತ್ರದ ಉಸ್ತುವಾರಿ ಕಳ್ಳಿಗೆ ತಾರಾನಾಥ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಸುಧೀರ್ ಹೆಗ್ಡೆ, ಶ್ರೀಧರ ಶೆಟ್ಟಿ ಕುತ್ಯಾರು ಬೀಡು, ಶಿವರಾಮ ಶೆಟ್ಟಿ, ರಮೇಶ್ ಪೂಜಾರಿ, ವಿಶ್ವಾಸ್ ಅಮೀನ್, ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story





