Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈಲು ಮಾರ್ಗದ ಬಗ್ಗೆ ಕೊಡಗಿನ ಜನ...

ರೈಲು ಮಾರ್ಗದ ಬಗ್ಗೆ ಕೊಡಗಿನ ಜನ ಎಚ್ಚೆತ್ತುಕೊಳ್ಳಬೇಕು: ಕೊಡಗು ವನ್ಯ ಜೀವಿ ಸಂಘ ಕರೆ

ವಾರ್ತಾಭಾರತಿವಾರ್ತಾಭಾರತಿ2 April 2018 10:45 PM IST
share
ರೈಲು ಮಾರ್ಗದ ಬಗ್ಗೆ ಕೊಡಗಿನ ಜನ ಎಚ್ಚೆತ್ತುಕೊಳ್ಳಬೇಕು: ಕೊಡಗು ವನ್ಯ ಜೀವಿ ಸಂಘ ಕರೆ

ಮಡಿಕೇರಿ, ಏ.2: ಕೊಡಗಿನ ಮೂಲಕ ಹಾದು ಹೋಗುವ ಮೈಸೂರು-ತಲಚ್ಚೇರಿ ರೈಲು ಮಾರ್ಗದ ಯೋಜನೆ ಇಲ್ಲವೆಂದು ಕೆಲವರು ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ವನ್ಯ ಜೀವಿ ಸಂಘ, ಯೋಜನೆ ಜಾರಿಗೆ ಕೇರಳ ಸರ್ಕಾರ ಕರ್ನಾಟಕದ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೊಡಗಿನ ಜನ ಎಚ್ಚೆತ್ತುಕೊಳ್ಳಬೇಕೆಂದು ಕರೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕರ್ನಲ್ ಸಿ.ಪಿ. ಮುತ್ತಣ್ಣ, ಕೊಡಗಿನ ಜನ ನಿರ್ಲಕ್ಷ್ಯ ವಹಿಸಿದರೆ ರೈಲು ಮಾರ್ಗ ಅನುಷ್ಟಾನಗೊಳ್ಳುವುದು ಖಚಿತವೆಂದು ಮುನ್ಸೂಚನೆ ನೀಡಿದರು. ಕಾವೇರಿ ಹುಟ್ಟುವ ಪವಿತ್ರ ಭೂಮಿ ಕೊಡಗಿನ ರಕ್ಷಣೆಗಾಗಿ ಎಲ್ಲರು ಒಗ್ಗಟ್ಟನ್ನು ಪ್ರದರ್ಶಿಸಬೇಕೇ ಹೊರತು ಕೊಳಕು ರಾಜಕಾರಣ ಮಾಡಬಾರದೆಂದು ಮನವಿ ಮಾಡಿದರು.

ಕೆಲವರು ಯೋಜನೆಯನ್ನು ಕೈಬಿಡಲಾಗಿದೆಯೆಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ, ಸಂಘಕ್ಕೆ ಬಂದ ಮಾಹಿತಿ ಪ್ರಕಾರ ರೈಲು ಮಾರ್ಗ ನಿರ್ಮಾಣವಾಗಲೇಬೇಕೆಂದು ಕೇರಳ ಕರ್ನಾಟಕದ ಮೇಲೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ. 2017 ಏಪ್ರಿಲ್ 17 ರಂದು ಕೇರಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ರೈಲು ಮಾರ್ಗಕ್ಕೆ ಅವಕಾಶ ಕೋರಿದ್ದಾರೆ. ಈ ಬಗ್ಗೆ ದಾಖಲೆ ಇದ್ದರು ರೈಲು ಮಾರ್ಗದ ಯೋಜನೆ ಇಲ್ಲವೆಂದು ಜನರ ಹಾದಿ ತಪ್ಪಿಸುತ್ತಿರುವುದನ್ನು ಸಂಘ ಖಂಡಿಸುವುದಾಗಿ ಕರ್ನಲ್ ಮುತ್ತಣ್ಣ ತಿಳಿಸಿದರು.

ಮೂರ್ಖರನ್ನಾಗಿ ಮಾಡಬೇಡಿ 
ಬಿಜೆಪಿಯ ರಾಜ್ಯ ಕಾರ್ಯದರ್ಶಿ ಮನು ಮುತ್ತಪ್ಪ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕೊಡಗಿನ ಜನರನ್ನು ಮೂರ್ಖರನ್ನಾಗಿ ಮಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಮೈಸೂರಿನಲ್ಲಿ ರೈಲು ಮಾರ್ಗದ ವಿರುದ್ಧ ಹೋರಾಟ ನಡೆಸಿದ ನಮ್ಮನ್ನು ಕಾಂಗ್ರೆಸ್‍ನ ‘ಬಿ’ ಟೀಂ ಎಂದು ಹೇಳುವ ಮೂಲಕ ಕ್ಷುಲ್ಲಕ ರಾಜಕಾರಣ ಪ್ರದರ್ಶಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಕ್ಕಾಗಿ ಪರಿಸರವಾದಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ವಿನಾಕಾರಣ ಆರೋಪ ಮಾಡಲಾಗಿದೆ. ನಮಗೆ ಪ್ರಧಾನಮಂತ್ರಿಗಳ ಬಗ್ಗೆ ಅಪಾರ ಗೌರವವಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಹೊಂದುತ್ತದೆ ಎನ್ನುವ ಆತ್ಮವಿಶ್ವಾಸವಿದೆ. ಮನುಮುತ್ತಪ್ಪ  ಹಾಗೂ ಅವರ ಸಂಗಡಿಗರು ಕೊಳಕು ರಾಜಕಾರಣ ಮಾಡುವುದನ್ನು ಮೊದಲು ಬಿಡಬೇಕು. ಮೈಸೂರಿನ ಪ್ರತಿಭಟನೆಯಲ್ಲಿ 12 ಸಾವಿರಕ್ಕು ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ಮನುಮುತ್ತಪ್ಪ ಅವರಿಗೆ ಸರಿಯಾದ ಉತ್ತರವನ್ನೆ ನೀಡಿದ್ದಾರೆ. ಅವರಿಗೆ ಹಾಗೂ ಅವರ ಸಂಗಡಿಗರಿಗೆ ಇನ್ನಾದರು ದೇವರು ಒಳ್ಳೆಯ ಬುದ್ಧಿಯನ್ನು ನೀಡಲಿ ಎಂದು ಕರ್ನಲ್ ಮುತ್ತಣ್ಣ ತಿರುಗೇಟು ನೀಡಿದರು.

ಮೈಸೂರಿನಲ್ಲಿ ರ್ಯಾಲಿ ನಡೆಸುವ ಬಗ್ಗೆ 2018ನೇ ಜನವರಿ ತಿಂಗಳಿನಲ್ಲೆ ನಾವು ದಿನಾಂಕವನ್ನು ನಿಗದಿಪಡಿಸಿ, ಮೈಸೂರು ರೈಲ್ವೆ ನಿಲ್ದಾಣದ ಸಮೀಪದ ಮೈದಾನವನ್ನು ಸಮಾವೇಶಕ್ಕಾಗಿ ಗೊತ್ತು ಪಡಿಸಿದ್ದೆವು. ಆದರೆ, ಪ್ರಧಾನಿ ಅವರ ಭೇಟಿಯ ಕಾರಣದಿಂದ ಅನುಮತಿ ದೊರೆಯದೆ ರ್ಯಾಲಿಯನ್ನು ದಸರಾ ವಸ್ತುಪ್ರದರ್ಶನ ಮೈದಾನಕ್ಕೆ ವರ್ಗಾಯಿಸಿದೆವು ಎಂದು ಸ್ಪಷ್ಟಪಡಿಸಿದರು.

ಮೈಸೂರಿನ ರ್ಯಾಲಿ ಯಶಸ್ಸನ್ನು ಕಂಡಿದ್ದು, ಪರಿಸರವನ್ನು ಉಳಿಸುವ ಕಾರ್ಯ ಜನ ಬೆಂಬಲದೊಂದಿಗೆ ಇನ್ನು ಮುಂದೆಯೂ ನಡೆಯಲಿದೆ ಎಂದರು. ಫೆಬ್ರವರಿ 18ರ ಮೈಸೂರು ರ್ಯಾಲಿಯ ನಂತರ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ವೈಲ್ಡ್ ಲೈಫ್ ಫಸ್ಟ್ ಎಂಬ ಸಂಘಟನೆ ಭೇಟಿ ಮಾಡಿದೆ. ಆದರೆ, ಕೊಡಗು ವನ್ಯ ಜೀವಿ ಸಂಘ ಮತ್ತು ಕೊಡಗು ರೈಲ್ವೆ ವಿರೋಧಿ ಹೋರಾಟ ವೇದಿಕೆಯ ಗಮನಕ್ಕೆ ಈ ಭೇಟಿಯ ವಿಚಾರ ತಿಳಿದು ಬಂದಿಲ್ಲ. ವೈಲ್ಡ್ ಲೈಫ್ ಫಸ್ಟ್ ಸಂಘಟನೆ ನೀಡಿರುವ ಹೇಳಿಕೆ ಮತ್ತು ನಿಯೋಗ ಸಚಿವರ ಬಳಿ ತಿಳಿಸಿದ ವಿಚಾರಕ್ಕೆ ನಾವು ಜವಾಬ್ದಾರರಲ್ಲವೆಂದು ಕರ್ನಲ್ ಮುತ್ತಣ್ಣ ಸ್ಪಷ್ಟಪಡಿಸಿದರು.

ಪ್ರಮುಖರಾದ ರಾಯ್ ಬೋಪಣ್ಣ ಮಾತನಾಡಿ, ತಲಚ್ಚೇರಿ ಮತ್ತು ಮೈಸೂರು ಭಾಗದಿಂದ ರೈಲು ಮಾರ್ಗವನ್ನು ನಿರ್ಮಿಸುತ್ತಾ ಬಂದು ಕೊನೆಯ ಗಳಿಗೆಯಲ್ಲಿ ಕೊಡಗಿನ ಪ್ರದೇಶದಲ್ಲಿ ರೈಲು ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಸಾಧ್ಯತೆಗಳಿದೆ. ಇದೇ ಪ್ರಕಾರವಾಗಿ ಹೈಟೆನ್ಶನ್ ವಿದ್ಯುತ್ ಮಾರ್ಗದ ಕಾಮಗಾರಿಯೂ ನಡೆದಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜೆಫ್ರಿ ಮುತ್ತಣ್ಣ, ಟಾರ್ಲಿ ಬೆಳ್ಯಪ್ಪ  ಹಾಗೂ ಕಲ್ಮಾಡಂಡ ನವೀನ್ ಬೆಳ್ಯಪ್ಪ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X