Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಲಮನ್ನಾದ...

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಲಮನ್ನಾದ ಜೊತೆಗೆ ಹೊಸ ಕೃಷಿ ನೀತಿ ಜಾರಿ: ಕುಮಾರಸ್ವಾಮಿ ಭರವಸೆ

ಹಾಸನದಲ್ಲಿ ವಿಕಾಸ ಪರ್ವ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 April 2018 11:55 PM IST
share
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಲಮನ್ನಾದ ಜೊತೆಗೆ ಹೊಸ ಕೃಷಿ ನೀತಿ ಜಾರಿ: ಕುಮಾರಸ್ವಾಮಿ ಭರವಸೆ

ಹಾಸನ,ಎ.02: ರಾಹುಲ್ ಗಾಂಧಿ ಜಿಲ್ಲೆಯ ಜೆಡಿಎಸ್ ಭದ್ರ ಕೋಟೆಗೆ ಬಂದು, ಇಲ್ಲಿನ ಜನತೆಯನ್ನು ಕೆಣಕಿ ಹೋಗಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಎಲ್ಲಾ ಬ್ಯಾಂಕುಗಳ ಸಾಲಮನ್ನಾದ ಜೊತೆಗೆ ಹೊಸ ಕೃಷಿ ನೀತಿ ಜಾರಿಗೆ ತರುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ನಾಡಿನ ಜನತೆ ಬಗ್ಗೆ ಯಾವುದೇ ಚರ್ಚೆ ಮಾಡಲಿಲ್ಲ. ಕೆಲ ದಿನಗಳ ಹಿಂದೆ ಹಾಸನಕ್ಕೆ ರಾಹುಲ್ ಗಾಂಧಿ ಬಂದು ಕೇವಲ ನಮ್ಮ ಪಕ್ಷವನ್ನು ಟೀಕೆ ಮಾಡಿ ಹೋದರು. ಇವರಿಗೆ ನಮ್ಮ ಬಗ್ಗೆ ಮಾತನಾಡಲು ಸಮಯವಿದೆ. ಆದರೆ ರೈತರ ಬಗ್ಗೆ ಯಾವುದೇ ಪ್ರಸ್ತಾಪ ಮಾಡಲಿಲ್ಲ ಎಂದು ದೂರಿದರು. 

ಜೆಡಿಎಸ್ ಭದ್ರ ಕೋಟೆ ಎಂಬ ಲೇಬಲ್ ಇರುವ ಹಾಸನದಲ್ಲಿನ ಜನತೆಯನ್ನು ಕೆಣಕಿ ಹೋಗಿದ್ದಾರೆ. ಸೋಮವಾರ ನಡೆದ ಐತಿಹಾಸಿಕ ಸಮಾವೇಶದ ಮೂಲಕವೇ ಇದಕ್ಕೆ ಉತ್ತರ ನೀಡಿರುವ ಜನತೆ ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲೂ ನಮ್ಮನ್ನು ಗೆಲ್ಲಿಸಲಿದ್ದಾರೆ ಎಂದು ಭರವಸೆಯ ಮಾತನಾಡಿದರು.

ಬಿಜೆಪಿ ಹಾಗು ಕಾಂಗ್ರೆಸ್ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಪ್ರಚಾರ ನಡೆಸಿವೆಯೇ ಹೊರತು ಎಲ್ಲಿಯೂ ಕೂಡ ಜನಹಿತವನ್ನು ಪ್ರದರ್ಶಿಸಲಿಲ್ಲ. ರಾಜ್ಯ ಪ್ರವಾಸ ಮಾಡಿದ ರಾಹುಲ್ ಗಾಂಧಿಗೆ ಇಲ್ಲಿಯ ಆಲೂ, ತೆಂಗು, ಶುಂಠಿ, ಅರಿಶಿಣ, ಕಾಫೀ, ಏಲಕ್ಕಿ ಇತ್ಯಾದಿ ಬೆಳೆಗಾರರ ಸಮಸ್ಯೆಗಳು ಕಾಣಲೇ ಇಲ್ಲ ಎಂದು ಟೀಕಿಸಿದ ಅವರು, 2018 ಮೇ 14 ರ ನಂತರ ರಾಜ್ಯದಲ್ಲಿ ಜನತಾದಳದ ಜನಪರ ಸರಕಾರ ಆರಂಭಗೊಳ್ಳಲಿದೆ. ಮುಂದೆ ಕೇವಲ ಸಾಲ ಮನ್ನಾ ಅಷ್ಟೇ ಅಲ್ಲ, ಬೆಳೆಹಾನಿಯಾದ ರೈತರ ಸಂಕಷ್ಟಕ್ಕೆ ಸೂಕ್ತ ಪರಿಹಾರ, ಗರ್ಭಿಣಿಯರಿಗೆ, ವಯೋವೃದ್ದರಿಗೆ ಆರ್ಥಿಕ ನೆರವು ನೀಡುವ ವಿಚಾರ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  

ಜಿಲ್ಲೆಯ ಪುಣ್ಯ ಭೂಮಿಯಲ್ಲಿ ಜನ್ಮ ತಾಳಿರುವ ನಾನು, ಈ ನಾಡಿಗೆ ಸೇವೆ ಸಲ್ಲಿಸುವುದು ಕರ್ತವ್ಯ. ತಂದೆ ಹೆಚ್.ಡಿ. ದೇವೇಗೌಡ ಮತ್ತು ತಾಯಿ ಚೆನ್ನಮ್ಮರ ಮನದಾಸೆಯನ್ನು ಈಡೇರಿಸುವ ಮಹಾದಾಸೆ ನನಗಿದೆ. ಹೆಚ್.ಡಿ ದೇವೇಗೌಡರ 60 ವರ್ಷದ ಜಿಲ್ಲಾ ರಾಜಕಾರಣದಲ್ಲಿ ಸುದೀರ್ಘವಾಗಿ ಅವರನ್ನು ಆಶೀರ್ವದಿಸಿದ್ದೀರಿ. ಜಿಲ್ಲೆಯ ಅಭಿವೃದ್ದಿ ವಿಚಾರದಲ್ಲಿ ಸಹೋದರ ರೇವಣ್ಣ ಕಂಡ ಕನಸು ಅರ್ಧದಷ್ಟು ಈಡೇರಿದೆ. ಇನ್ನು ಉಳಿದಿರುವ ಕೆಲಸಕ್ಕೆ ಮತ್ತೆ ನೀವು 113 ಮ್ಯಾಜಿಕ್ ಸಂಖ್ಯೆಗೆ ಜಿಲ್ಲೆಯ 7 ಸಂಖ್ಯೆಯನ್ನು ಕೊಡುಗೆಯಾಗಿ ನೀಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. 

ನಂತರ 2018 ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿರುವಂತೆ, ಹಾಸನ ಜಿಲ್ಲೆಯಲ್ಲಿ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್.ಡಿ. ರೇವಣ್ಣ, ಅರಸೀಕೆರೆಯಲ್ಲಿ ಕೆ.ಎಂ. ಶಿವಲಿಂಗೇಗೌಡ, ಅರಕಲಗೂಡಿನಲ್ಲಿ ಎ.ಟಿ. ರಾಮಸ್ವಾಮಿ, ಹಾಸನದಲ್ಲಿ ಹೆಚ್.ಎಸ್. ಪ್ರಕಾಶ್, ಚನ್ನರಾಯಪಟ್ಟಣದಲಿ ಚಿ.ಎನ್. ಬಾಲಕೃಷ್ಣ, ಸಕಲೇಶಪುರದಲ್ಲಿ ಹೆಚ್.ಕೆ. ಕುಮಾರಸ್ವಾಮಿ, ಬೇಲೂರಿನಲ್ಲಿ ಲಿಂಗೇಶ್ ಹೆಸರನ್ನು ಬಹಿರಂಗಪಡಿಸಿದರು.

ಮಾಜಿ ಪ್ರದಾನಿ ಹೆಚ್.ಡಿ. ದೇವೇಗೌಡ ಮಾತನಾಡಿ, ಜಿಲ್ಲೆಯಲ್ಲಿ 7ಕ್ಕೆ 7 ಜೆಡಿಎಸ್‍ಗೆ ಗೆಲುವನ್ನು ಕೊಡಬೇಕು. ನಾವು ಮಣ್ಣಿನ ಮಕ್ಕಳು. ಇಂದು ನಮ್ಮ ಸಮಾವೇಶದಲ್ಲಿ ಮಳೆ ಬಂದಿರುವುದು ಶುಭ ಸಂಕೇತ ಹಾಗೂ ಸಂತೋಷ ತಂದಿದೆ ಎಂದರು.

ದೇವೇಗೌಡರ ರಾಜಕಾರಣ ಕೊನೆಗಳಿಸಿ ಎಂದು ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದಿನ ಸಭೆ ತಕ್ಕ ಉತ್ತರ ಕೊಟ್ಟಿದೆ. ಜಿಲ್ಲೆಯ ಜನತೆ ನನ್ನನ್ನು ದೇಶದ ಪ್ರಧಾನಿಯಾಗುವ ಮಟ್ಟಿಗೆ ಬೆಳೆಸಿದರು. ನನ್ನ ಕೊನೆಯ ಉಸಿರಿನವರೆಗೆ ಈ ಮಣ್ಣಿನ ಋಣವನ್ನು ತೀರಿಸುವ ಕೆಲಸ ಮಾಡುತ್ತೇನೆ ಎಂದು ಭಾವುಕರಾಗಿ ನುಡಿದರು.

ಜಿಲ್ಲೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಪ್ರಗತಿಪರ ಹಾಗು ಶಾಂತಿಯುತ ಸಮಾಜದ ಉದ್ದೇಶಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಏಳಕ್ಕೆ ಏಳೂ ಸ್ಥಾನಗಳಲ್ಲಿ ಜೆಡಿಎಸ್ ಗೆಲ್ಲಿಸಿ ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು. ಹಾಸನ ಜಿಲ್ಲೆಗೆ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್, ಕಾನೂನು, ವೆಟರ್ನರಿ, ನರ್ಸಿಂಗ್ ಕಾಲೇಜುಗಳನ್ನು ಸೇರಿದಂತೆ ಹಲವು ಅಭಿವೃದ್ದಿಪರ ಕೆಲಸಗಳನ್ನು ಮಾಡಿದ್ದೇವೆ. ನಮ್ಮ ಅಧಿಕಾರವದಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ನೈತಿಕ ಹಾಗೂ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇಷ್ಟಾದರೂ ನಮ್ಮ ಉದ್ದೇಶ ಈಡೇರಿಲ್ಲ ಎನ್ನುವ ನೋವು ನಮ್ಮನ್ನು ಅಪಾರವಾಗಿ ಕಾಡುತ್ತಿದೆ. ಹಾಸನದ ಅಭಿವೃದ್ದಿಗೆ ಜಿಲ್ಲೆಯ ಪ್ರತಿಯೊಬ್ಬ ಮತದಾರರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ  ದೇವೇಗೌಡರ ಧಮ್ ಪತ್ನಿ ಚೆನ್ನಮ್ಮ, ಭವಾನಿ ರೇವಣ್ಣ, ಮಾಜಿ ಸಚಿವ  ಹೆಚ್.ಡಿ. ರೇವಣ್ಣ, ಜೆಡಿಎಸ್ ಮುಖಂಡರಾದ ಬಂಡೆಪ್ಪ ಕಾಶೆಂಪೂರ್, ಹೆಚ್. ವಿಶ್ವನಾಥ್, ಪಿ.ಜಿ.ಆರ್. ಸಿಂದ್ಯಾ, ಜಪ್ರಿವುಲ್ಲಾ ಖಾನ್, ವಿಧಾನಪರಿಷತ್ ಸದಸ್ಯ ಶರವಣ, ಶಾಸಕರಾದ ಹೆಚ್.ಎಸ್. ಪ್ರಕಾಶ್, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಹೆಚ್.ಕೆ. ಕುಮಾರಸ್ವಾಮಿ, ಪಟೇಲ್ ಶಿವರಾಂ, ನಗರಸಭೆ ಅಧ್ಯಕ್ಷ ಹೆಚ್.ಎಸ್. ಅನೀಲ್ ಕುಮಾರ್, ಪ್ರಜ್ವಲ್, ಬಿಎಸ್‍ಪಿ ಪಕ್ಷದ ರಾಜ್ಯ ಮಂಖಂಡರು ಗಂಗಾಧರ್ ಬಹುಜನ್, ಎ.ಪಿ. ಅಹಮದ್, ವಿಕ್ಟೋರಿಯ ರಾಣಿ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X